– ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ ಎಂದ ಚಿಂತಕ
ಮೈಸೂರು: ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು ಎಂದು ಸಾಹಿತಿ, ಚಿಂತಕ ಪ್ರೊ.ಕೆ.ಎಸ್.ಭಗವಾನ್ (K.S.Bhagavan) ಹೇಳಿಕೆ ನೀಡಿದ್ದಾರೆ.
ಮಹಿಷ ದಸರಾದಲ್ಲಿ ಮಾತನಾಡಿದ ಅವರು, ಜ್ಞಾನದ ಹಸಿವು ಇಲ್ಲದ ಕಾರಣ ಹಲವರು ಗುಲಾಮರಾಗಿದ್ದಾರೆ. ಹಿಂದೂ ಧರ್ಮ ಅಂದ್ರೆ ಅದು ಹಿಂದೂಗಳ ಧರ್ಮ ಅಲ್ಲ. ಹಿಂದೂ ಧರ್ಮ ಅಂದರೆ ಅದು ಬ್ರಾಹ್ಮಣರ ಧರ್ಮ. ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ. ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ. ಹೆಂಗಸರನ್ನಾ ಬ್ರಾಹ್ಮಣರು ಎನ್ನಲ್ಲಾ, ಅವರನ್ನು ಶೂದ್ರರು ಅಂತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ನಂಬಿಕೆಗೆ ಧಕ್ಕೆಯಾಗದಂತೆ ಮಹಿಷ ದಸರಾ ಆಚರಿಸಿದ್ರೆ ನಮಗೂ ಸಂತೋಷ: ಯದುವೀರ್
ದೇವಸ್ಥಾನ ಕಟ್ಟೋದು ಶೂದ್ರರು. ದೇವಸ್ಥಾನದ ಒಳಗೆ ಇರೋರು ಬ್ರಾಹ್ಮಣರು. ದೇವಸ್ಥಾನ ಕಟ್ಟಿದ ಶೂದ್ರರನ್ನೇ ಬಿಟ್ಟುಕೊಳ್ಳಲ್ಲ. ನಾವು ಶೂದ್ರರಲ್ಲಾ ಎಂದು ಹೇಳಬೇಕು. ಶೂದ್ರರು ದೇವಸ್ಥಾನಗಳಿಗೆ ಹೋಗೋದನ್ನು ನಿಲ್ಲಸಬೇಕು. ನಾನು 50 ವರ್ಷ ಆಯ್ತು ದೇವಸ್ಥಾನಕ್ಕೆ ಹೋಗಿ. ದೇವಸ್ಥಾಕ್ಕೆ ಹೋದ್ರೆ ಏನು ಆಗಲ್ಲ. ತಟ್ಟೆಗೆ ದುಡ್ಡು ಹಾಕ್ತೀರಾ, ಅರ್ಧ ಕಾಯಿ ಇಟ್ಟುಕೊಂಡು ಅರ್ಧ ಕೊಡ್ತಾರೆ ಅಷ್ಟೇ. ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು. ನಾವು ಶೂದ್ರರು ಎಂದು ಒಪ್ಪಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.
ಹಿಂದೂ ಧರ್ಮ ನಮ್ಮದಲ್ಲ. ನಮಗೆ ಹಿಂದೂ ಧರ್ಮ ಬೇಕಿಲ್ಲ. ಎಲ್ಲರೂ ಬುದ್ಧ ಗುರುಗಳನ್ನು ನಂಬಿ. ನಾನು ಹೇಳಿದ್ದು ನಂಬಿ ಅಂತಾ ಬುದ್ಧ ಹೇಳಲ್ಲ. ನಾನು ಹೇಳಿದ್ದು ಕೇಳಬೇಕು ಅಂತಾ ಏಸು ಹೇಳ್ತಾರೆ. ನಾನು ಹೇಳದ್ದು ಕೇಳದಿದ್ರೆ ನರಕ್ಕೆ ಹೋಗ್ತೀರಾ ಅಂತಾ ಕೃಷ್ಣ ಹೇಳ್ತಾನೆ. ನಾವು ಬುದ್ಧ ಧರ್ಮಕ್ಕೆ ಹೋಗಬೇಕು. ಶೂದ್ರರು ಎಂಬ ಗುಲಾಮರನ್ನು ಎಚ್ಚರಿಸಬೇಕು. ಯಾರು ಹೀನನಾಗಿದ್ದಾನೆ ಅವನು ಹಿಂದೂ. ಹಿಂದೂ ಎಂದರೆ ಹೀನಾ ಎಂದು ಅರ್ಥ. ಯಾರು ಹಿಂದೂ ಆಗಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಲ್ಲಿ ರೇವ್ ಪಾರ್ಟಿ? – ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು ವಶಕ್ಕೆ