-ಚಿನ್ನಾಭರಣ ರಿಕವರಿಯೇ ಪೊಲೀಸರಿಗೆ ತಲೆ ನೋವು
ಬೆಂಗಳೂರು: ಗಣ್ಯರ ಹೆಸರು ಬಳಸಿಕೊಂಡು ಕೋಟ್ಯಂತರ ರೂ. ಮೌಲ್ಯದ ಚಿನ್ನವನ್ನು ಖರೀದಿಸಿ ಹಣ ಪಾವತಿಸದೇ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಾಭರಣ ರಿಕವರಿ ಮಾಡುವುದೇ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಕಳೆದ ಒಂದು ವಾರದ ಹಿಂದೆ ಪೊಲೀಸರು ಶ್ವೇತಾಗೌಡಳನ್ನು ಬಂಧಿಸಿ, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಚಿನ್ನವನ್ನು ಬಗಲಗುಂಟೆಯ (Bagalakunte) ರಾಮ್‌ದೇವ್ ಜ್ಯುವೆಲ್ಲರಿಯಲ್ಲಿ ಪಡೆದಿರುವುದಾಗಿ ಹೇಳಿಕೆ ನೀಡಿದ್ದರು. ಇದರಿಂದಾಗಿ ಮಾಲೀಕ ಚನ್ನಾರಾಮ್ ಅವರನ್ನು ಕೂಡ ಬಂಧಿಸಲಾಗಿತ್ತು. ಮಾಲೀಕನನ್ನು ಬಂಧಿಸುತ್ತಿದ್ದಂತೆ ಆತನ ಸಹೋದರರು ಎಸ್ಕೇಪ್ ಆಗಿದ್ದಾರೆ. ಮಾಲೀಕನಿಂದ 400 ಗ್ರಾಂ ಚಿನ್ನವನ್ನು ರಿಕವರಿ ಮಾಡಲಾಗಿದೆ.ಇದನ್ನೂ ಓದಿ: ಭಾರತಕ್ಕೆ ನಿತೀಶ್-ಸುಂದರ್ ಶತಕದ ಜೊತೆಯಾಟ ಆಸರೆ – ಫಾಲೋ ಆನ್‌ನಿಂದ ಪಾರು
ಇಲ್ಲಿಯವರೆಗೂ ವರ್ತೂರ್ ಪ್ರಕಾಶ್ ಪಡೆದಿದ್ದ 100 ಗ್ರಾಂ ಸೇರಿ ಒಟ್ಟು 700 ಗ್ರಾಂ ಚಿನ್ನವನ್ನು ಮಾತ್ರ ರಿಕವರಿ ಮಾಡಲಾಗಿದೆ. ಸದ್ಯ ಚಿನ್ನಾಭರಣ ರಿಕವರಿಗಾಗಿ ಪೊಲೀಸರು ತನಿಖೆ ಮುಂದುವರೆಸಿದ್ದು, ಮಾಲೀಕ ಚನ್ನಾರಾಮ್ ಸಹೋದರರಿಗಾಗಿ ಹುಡುಕಾಟ ನಡೆಸಿದ್ದಾರೆ. ರಾಮ್‌ದೇವ್ ಜ್ಯುವೆಲ್ಲರಿಯಲ್ಲಿ ಚಿನ್ನ ಕರಗಿಸಿ, ಚಿನ್ನದ ಗಟ್ಟಿ ಮಾರಾಟ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮುಂಚೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್, ಎಸಿಪಿ ಗೀತಾ ಎದುರು ವಿಚಾರಣೆ ಎದುರಿಸಿದ್ದರು. ಇದೇ ವೇಳೆ ಆರೋಪಿ ಶ್ವೇತಾ ಗೌಡ ಕೊಟ್ಟಿದ್ದ ಗಿಫ್ಟ್‌ಗಳನ್ನ ಅಂದ್ರೆ ನಗದು, ಚಿನ್ನಾಭರಣ ಎಲ್ಲವನ್ನೂ ಪೊಲೀಸರಿಗೆ ವಾಪಸ್ ಕೊಟ್ಟಿದ್ದರು. ಒಟ್ಟು 12.50 ಲಕ್ಷ ರೂ. ನಗದು, ಮೂರು ಬ್ರಾಸ್ ಲೆಟ್, 1 ಚಿನ್ನದ ಉಂಗುರವನ್ನ ಎಸಿಪಿ ಗೀತಾ ಎದುರಿಗೇ ಪೊಲೀಸರಿಗೆ ಒಪ್ಪಿಸಿದ್ದರು.
ಶ್ವೇತಾ ಗೌಡ ಹೀಗೆ ಮಾಡ್ತಾಳೆಂದು ನನಗೆ ಗೊತ್ತಿಲ್ಲ, ನನಗೂ ಶ್ವೇತಗೌಡಳಿಗೂ ಯಾವುದೇ ಸಂಬಂಧವಿಲ್ಲ. ಗಿಫ್ಟ್ ಅಂತ ನನಗೆ ಆಕೆ ಕೆಲ ಒಡವೆ ನೀಡಿದ್ಲು ಎಂದು ಪೊಲೀಸರಿಗೆ ಜವಾಬು ನೀಡಿದ್ದರು. ವಿಚಾರಣೆ ಬಳಿಕ ಮಾತನಾಡಿದ್ದ ವರ್ತೂರ್ ಪ್ರಕಾಶ್, ನನಗೆ ಆಕೆ ಸ್ನೇಹಿತೆ ಅಲ್ಲ. ಐದಾರು ತಿಂಗಳ ಹಿಂದೆ ಪರಿಚಯ ಆಗಿದೆ. ನನ್ನ ಹೆಸರು ಬಳಸಿಕೊಂಡು ಚಿನ್ನಭಾರಣ ಖರೀದಿ ಮಾಡಿಕೊಂಡಿದ್ದಾಳೆ. ನನಗೂ ಮನಸ್ಸಿಗೆ ನೋವಾಗಿದೆ. ಚಿನ್ನದ ಅಂಗಡಿಯವರು 2 ಕೋಟಿ ರೂ. ಚಿನ್ನಭಾರಣ ಕೊಟ್ಟಿದ್ದರು. ಅದ್ಹೇಗೆ ಕೊಟ್ರು ಗೊತ್ತಿಲ್ಲ. ನನ್ನ ತರ ಕೆಲ ರಾಜಕಾರಣಿಗಳು ಹೆಸರು, ಫೋಟೋ ತೆಗೆದುಕೊಂಡು ವಂಚನೆ ಮಾಡಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಎಲ್ಲಾ ಮಾಹಿತಿ ಕೊಟ್ಟಿದ್ದೀನಿ ಎಂದು ಸ್ಪಷ್ಟಪಡಿಸಿದ್ದರು.ಇದನ್ನೂ ಓದಿ: ಸಾರಿಗೆ ನೌಕರರ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ: ಪಿ.ರಾಜೀವ್