ನವದೆಹಲಿ: ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್‍ನ ದಕ್ಷಿಣ ಭಾಗದಲ್ಲಿ ಮತ್ತೆ ಹಿಮಪಾತ ಸಂಭವಿಸಿದ್ದು, ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.
ದಕ್ಷಿಣ ಸಿಯಾಚಿನ್ ಹಿಮ ಪ್ರದೇಶದಲ್ಲಿ ಸುಮಾರು 18,000 ಅಡಿಗಳಷ್ಟು ಎತ್ತರದಲ್ಲಿ ಭಾರತೀಯ ಸೈನ್ಯದ ಗಸ್ತು ತಂಡವು ಕಾರ್ಯನಿರ್ವಹಿಸುತ್ತಿದ್ದು, ಇಂದು ಮುಂಜಾನೆ ಹಿಮಪಾತ ಬಂದು ಅಪ್ಪಳಿಸಿದೆ. ಪರಿಣಾಮ ಇಬ್ಬರು ವೀರ ಯೋಧರು ಹುತಾತ್ಮರಾಗಿದ್ದಾರೆ.
Advertisement
Indian Army:Army patrol operating at approx 18,000 ft in Southern Siachen Glacier was hit by avalanche,during early hours today.Avalanche Rescue Team rushed&managed to locate&pull out the patrol team. Helicopters helped to evacuate victims. 2 Army personnel succumbed in avalanche
— ANI (@ANI) November 30, 2019
Advertisement
ವಿಷಯ ತಿಳಿದು ತಕ್ಷಣ ಭಾರತೀಯ ಸೇನೆಯ ರಕ್ಷಣಾ ತಂಡವು ಹೆಲಿಕಾಪ್ಟರ್ ಮೂಲಕ ಬಂದು ಸೈನಿಕರನ್ನು ರಕ್ಷಣೆ ಮಾಡಿದೆ. ಗಾಯಗೊಂಡ ಯೋಧರನ್ನು ಸೇನಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಹಿಮಪಾತದಲ್ಲಿ ಸಿಲುಕಿ ತೀವ್ರ ಗಾಯಗೊಂಡಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.
Advertisement
ಇದೇ ರೀತಿ ಕಳೆದ ನವೆಂಬರ್ 18 ರಂದು ಆಗಿತ್ತು, ಎಂದಿನಂತೆ ಯೋಧರು ಗಸ್ತಿನಲ್ಲಿದ್ದಾಗ ಅಂದು ಮಧ್ಯಾಹ್ನ 3.30ರ ವೇಳೆಗೆ ಅವಘಡ ಸಂಭವಿಸಿತ್ತು. ತಕ್ಷಣ ಸೈನಿಕರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಹಿಮದಡಿ ಸಿಲುಕಿದ ದುರ್ಗ ರೆಜಿಮೆಂಟ್‍ನ 6 ಯೋಧರು ಮತ್ತು ಇಬ್ಬರು ನಾಗರಿಕರನ್ನು ಹೊರ ತೆಗೆದು ಹತ್ತಿರದ ಮಿಲಟರಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಅದರಲ್ಲಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದ ಕಾರಣ ಮೃತಪಟ್ಟಿದ್ದರು.
Advertisement
2016ರಲ್ಲೂ ಹೀಗೆಯೇ ಆಗಿತ್ತು!: 2016ರಲ್ಲಿ ಸಿಯಾಚಿನ್‍ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿ ಕರ್ನಾಟಕದ ವೀರಯೋಧ ಹನುಮಂತಪ್ಪ ಕೊಪ್ಪದ್ 6 ದಿನಗಳ ಬಳಿಕ ಪತ್ತೆಯಾಗಿದ್ದರು. ಅವರನ್ನು ಜೀವಂತವಾಗಿ ಪತ್ತೆ ಮಾಡಿದ್ದರೂ ಬಹು ಅಂಗಾಂಗ ವೈಫಲ್ಯದಿಂದ ಅವರು ವೀರ ಮರಣ ಹೊಂದಿದ್ದರು. ಸಾವಿಗೆ ಸವಾಲೊಡ್ಡಿ ಮಂಜುಗಡ್ಡೆಗಳ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದ ವೀರಯೋಧ ಹನುಮಂತಪ್ಪ ಅವರಿಗೆ ಮರಣೋತ್ತರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
1984 ರಲ್ಲೂ ಇದೇ ರೀತಿ ಹಿಮಪಾತವಾಗಿ ಭಾರತ ಸೇನೆಯ ಸಾವಿರಕ್ಕೂ ಹೆಚ್ಚಿನ ಯೋಧರು ಹುತಾತ್ಮರಾಗಿದ್ದರು. ಇದರಲ್ಲಿ 35 ಜನ ಮಿಲಿಟರಿ ಆಫೀಸರ್ ಗಳು ಇದ್ದರು.