ಮಡಿಕೇರಿ: ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಗಂಡು ಹುಲಿಯೊಂದನ್ನು (Tiger) ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದು ಚಿಕಿತ್ಸೆಗಾಗಿ ಮೈಸೂರಿನ ಮೃಗಾಲಯಕ್ಕೆ (Mysuru Zoo) ಕಳುಹಿಸಿದ್ದಾರೆ.
Advertisement
ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದಲ್ಲಿ ಹುಲಿ ಮಂಗಳವಾರ ಸೆರೆಯಾಗಿದೆ. ಗ್ರಾಮದ ಅಸ್ತಾನ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳುಹಿಸಿದ್ದಾರೆ.
Advertisement
Advertisement
ಸಾಕಾನೆಗಳಾದ ಪ್ರಶಾಂತ, ಸುಗ್ರೀವ, ಶ್ರೀರಾಮ, ಹರ್ಷ, ವಿಕ್ರಂ, ಈಶ್ವರ ಸಹಕಾರದೊಂದಿಗೆ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ವನ್ಯಜೀವಿ ವೈದ್ಯಾಧಿಕಾರಿ ಡಾ. ರಮೇಶ್ ಹಾಗೂ ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ರಂಜನ್ ಹುಲಿಗೆ ಅರಿವಳಿಕೆ ಚುಚ್ಚುಮದ್ದು ಪ್ರಯೋಗಿಸಿದ್ದರು. ಇದನ್ನೂ ಓದಿ: ಭಾರತದೊಂದಿಗೆ ಭಿನ್ನಾಭಿಪ್ರಾಯ ಮರೆತು ನಮ್ಮ ಲಸಿಕೆಯನ್ನು ತರಿಸಿಕೊಳ್ಳಿ: ಚೀನಾಗೆ ಪೂನಾವಾಲಾ ಸಲಹೆ
Advertisement
ಕೆಲಕಾಲ ಓಡಿದ ಹುಲಿ, ಬಳಿಕ ಅಸ್ತಾನ ಗ್ರಾಮದ ಬಳಿ ನಿತ್ರಾಣಗೊಂಡು ಬಿದ್ದಿತ್ತು. ನಂತರ ಹುಲಿಯನ್ನು ಬಲೆ ಹಾಕಿ ಹಿಡಿಯಲಾಯಿತು. ಹುಲಿಯ ಹಲ್ಲು ಹಾಗೂ ಕಾಲಿನ ಭಾಗದಲ್ಲಿ ಗಾಯಗಳಾಗಿದ್ದು, ಆಹಾರ ಸೇವನೆ ಮಾಡದೇ ಇದ್ದಿದ್ದರಿಂದ ಸಾಕಷ್ಟು ಬಳಲಿತ್ತು. ವನ್ಯಜೀವಿ ವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಹಾಗೂ ಡಾ. ರಮೇಶ್ ಹುಲಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಆರೈಕೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳುಹಿಸಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಿದ ಖಾಕಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k