– ಒಂದು ಹನಿ ನೀರು ಉಪಯೋಗಿಸಿಲ್ಲ, ಬಿಲ್ ಪಾವತಿಸಲು ಸಾಧ್ಯವಿಲ್ಲ ಎಂದ ಸಿದ್ದಗಂಗಾ ಶ್ರೀ
ತುಮಕೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ರಾಜ್ಯ ಸರ್ಕಾರ ಸಿದ್ದಗಂಗಾ ಮಠಕ್ಕೆ (Siddagangaa Mutt) ಶಾಕ್ ಕೊಟ್ಟಿದೆ. ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70,31,438 ರೂ. ವಿದ್ಯುತ್ ಬಿಲ್‌ನ್ನು ಸಿದ್ದಗಂಗಾ ಮಠ ಭರಿಸುವಂತೆ ಕೆಐಎಡಿಬಿ (KIADB) ಪತ್ರ ಬರೆದಿದೆ. ಮಂಡಳಿಯ ಆರ್ಥಿಕ ಪರಿಸ್ಥಿತಿಯು ಸುಸ್ಥಿತಿಯಲ್ಲಿ ಇಲ್ಲದಿರುವುದರಿಂದ ಈ ವಿದ್ಯುತ್ ಬಿಲ್ (Electricity Bill) ಅನ್ನು ಭರಿಸುವಂತೆ ಕೋರಲಾಗಿದೆ ಎಂದು ಪತ್ರದಲ್ಲಿ ಒಕ್ಕಣೆ ಬರೆಯಲಾಗಿದೆ.
Advertisement
ಸಿದ್ದಗಂಗಾ ಮಠದ ಸನಿಹದಲ್ಲೇ ಇರುವ ದೇವರಾಯಪಟ್ಟಣ ಕೆರೆಗೆ ಕೆಐಎಡಿಬಿ ಪೈಪ್‌ಲೈನ್ ಮೂಲಕ ಹೊನ್ನೆನಹಳ್ಳಿಯಿಂದ ಪ್ರಾಯೋಗಿಕವಾಗಿ ನೀರು ಹರಿಸಿದೆ. ಈ ಯೋಜನೆ ಪರಿಪೂರ್ಣವಾಗಿ ಜಾರಿಯಾದರೆ ಸಿದ್ದಗಂಗಾ ಮಠ ಸೇರಿದಂತೆ ದೇವರಾಯಪಟ್ಟಣ, ಮಾದನಾಯಕನ ಪಾಳ್ಯ, ಕುಂದೂರು ಗ್ರಾಮಕ್ಕೆ ನೀರು ಪೂರೈಕೆ ಆಗಲಿದೆ. ಇಲ್ಲಿವರೆಗೆ ಪ್ರಾಯೋಗಿಕವಾಗಿ ಅಷ್ಟೇ ನೀರು ಹರಿಸಲಾಗಿದೆ. ಗ್ರಾಮಗಳಿಗೆ ವಿತರಣೆ ಆಗುತ್ತಿಲ್ಲ. ಇದಕ್ಕೆ ವೆಚ್ಚವಾದ ವಿದ್ಯುತ್ ಬಿಲ್‌ನ್ನು ಸಿದ್ದಗಂಗಾ ಮಠ ಪಾವತಿಸಬೇಕು ಎಂದು ಕೆಐಎಡಿಬಿ ಬರೆದಿರುವ ಪತ್ರ ಈಗ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ವಿಶ್ವದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಶಿವಣ್ಣಗೆ ಚಿಕಿತ್ಸೆ – 1 ತಿಂಗಳ ಬಳಿಕ ರಿಟರ್ನ್
Advertisement
Advertisement
ಪತ್ರದಲ್ಲೇನಿದೆ?
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ತುಮಕೂರು ತಾಲೂಕು ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಯವರೆಗೆ ಪೈಪ್‌ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರಸಕ್ತ 2024ನೇ ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ನೀರು ಹರಿಸಲಾಗಿದೆ. ಸದರಿ ಕೆರೆಯಿಂದ ನೀರನ್ನು ಸಿದ್ದಗಂಗಾ ಮಠದ ದೈನಂದಿನ ಕೆಲಸ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿರುತ್ತದೆ. ಇದನ್ನೂ ಓದಿ: ಯುಐ ಚಿತ್ರಕ್ಕೆ ಬಾಲಿವುಡ್‌ನಲ್ಲೂ ಬಹುಪರಾಕ್
Advertisement
2023ರ ಅ.31ರಿಂದ ಹಾಗೂ 2024ರ ಮಾ.02ರವರೆಗೆ ಒಟ್ಟು 70,31,438 ರೂ. ವಿದ್ಯುತ್ ಬಿಲ್‌ಗಳನ್ವಯ ಬೆಸ್ಕಾಂಗೆ ಹಣ ಪಾವತಿಸಬೇಕಾಗಿರುತ್ತದೆ. ಪ್ರಸ್ತುತ ಮಂಡಳಿಯು ಆರ್ಥಿಕ ಪರಿಸ್ಥಿತಿಯು ಸುಸ್ಥಿತಿಯಲ್ಲಿ ಇಲ್ಲದಿರುವುದರಿಂದ ನೀರು ಸರಬರಾಜಿನ ವಿದ್ಯುತ್ ಬಳಕೆಯ ವೆಚ್ಚವನ್ನು ಸಿದ್ಧಗಂಗಾ ಮಠದ ವತಿಯಿಂದ ಭರಿಸುವಂತೆ ತಿಳಿಸಲು ಕೆಐಎಡಿಬಿ ನಿರ್ದೇಶಿಸಿದೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಮೂತ್ರ ವಿಸರ್ಜನೆಗೆ ಹೋದ ವಿದ್ಯಾರ್ಥಿ ತೆರೆದ ಬಾವಿಗೆ ಬಿದ್ದು ಸಾವು
ಏ.6ರಂದು ಕೆಐಎಡಿಬಿಯಿಂದ ಸಿದ್ದಗಂಗಾ ಮಠಕ್ಕೆ ಪತ್ರ ಬಂದಿದೆ. ಏ.15ರಂದು ಕೆಐಎಡಿಬಿಗೆ ಸಿದ್ದಗಂಗಾ ಮಠದಿಂದ ಮರು ಪತ್ರ ರವಾನೆಯಾಗಿದೆ. ಇದೊಂದು ಸರ್ಕಾರಿ ಯೋಜನೆಯಾಗಿದ್ದರಿಂದ ಮಠದಿಂದ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಿಲ್ಲ ಎಂದು ಸಿದ್ದಗಂಗಾ ಮಠದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸಿದ್ದಗಂಗಾ ಮಠದಿಂದ ಪತ್ರ ತಲುಪಿ 8 ತಿಂಗಳಾದರೂ ಕೆಐಡಿಬಿ ಯಾವುದೇ ಕ್ರಮ ಕೈಗೊಂಡಿಲ್ಲ. ಮತ್ತೆ ಅಧಿಕಾರಿಗಳು ಮೌಖಿಕವಾಗಿ ಬಿಲ್ ಕಟ್ಟುವಂತೆ ಮಠದ ಆಡಳಿತ ಮಂಡಳಿಯವರಿಗೆ ಸೂಚಿಸುತ್ತಿದ್ದಾರೆ ಎನ್ನಲಾಗಿದೆ. ನೀರಿನ ಕರ ವಿಧಿಸೋದು ಸಹಜ. ಅದರ ಬದಲಾಗಿ ಇಡೀ ಕೆರೆಗೆ ನೀರು ತುಂಬಿಸಿದ್ದರ ವಿದ್ಯುತ್ ಬಿಲ್ ನಾವೇ ಕಟ್ಟಬೇಕು ಎಂದು ಪತ್ರ ಬರೆದಿರೋದು ನಮಗೆ ಆಶ್ಚರ್ಯತಂದಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳು ಹೇಳಿದ್ದಾರೆ. ಇದನ್ನೂ ಓದಿ: ಮುಡಾ ರದ್ದಾಗಿ ಹೊಸದಾಗಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಆದರೆ ಈ ಬಗ್ಗೆ ಪ್ರತಿಕ್ರಿಯಿಸಲು ಕೆಐಎಡಿಬಿ ಕಾರ್ಯಪಾಲಕ ಎಂಜಿನಿಯರ್ ಲಕ್ಷ್ಮೀಶ್ ಹಿಂದೇಟು ಹಾಕಿದ್ದಾರೆ. ಇದು ಸರ್ಕಾರ ಹಾಗೂ ಮಂಡಳಿಯ ರಾಜ್ಯ ಘಟಕದ ನಿರ್ದೇಶನ ಎಂದು ನುಣುಚಿಕೊಂಡಿದ್ದಾರೆ. ಸಿದ್ದಗಂಗಾ ಮಠದ ಮನವಿಯನ್ನೂ ಮಂಡಳಿಯ ಗಮನಕ್ಕೆ ತಂದಿದ್ದು, ಮಂಡಳಿ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂದು ಗೊತ್ತಿಲ್ಲ ಎನ್ನುತ್ತಿದ್ದಾರೆ. ಇದನ್ನೂ ಓದಿ: ʼಒಂದು ದೇಶ, ಒಂದು ಚುನಾವಣೆʼ ಪರಿಶೀಲನೆಗೆ JPC ರಚನೆ – ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ