ತುಮಕೂರು: ಅನಾರೋಗ್ಯದಿಂದ ಬಳಲುತ್ತಿರುವ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ಸಿದ್ದಗಂಗಾ ಮಠದಲ್ಲೇ ಚಿಕಿತ್ಸೆ ಮುಂದುವರಿಸಲಾಗುತ್ತಿದ್ದು, ಪವಾಡ ರೀತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರ ತಂಡ ತಿಳಿಸಿದೆ.
ಶ್ರೀಗಳಿಗೆ ಸಿದ್ದಗಂಗಾ ಮಠದಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಉಸಿರಾಟದ ತೊಂದರೆ ಇರೋದ್ರಿಂದ ಕೃತಕ ಉಸಿರಾಟದ ವ್ಯವಸ್ಥೆಯನ್ನು ಮಾಡಲಾಗಿದೆ. ಡಾ. ರೇಲಾ, ಬಿಜಿಎಸ್ ಆಸ್ಪತ್ರೆ ವೈದ್ಯರು ಹಾಗೂ ಸಿದ್ದಗಂಗಾ ಆಸ್ಪತ್ರೆ ವೈದ್ಯರು ಶ್ರೀಗಳಿಗೆ ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ಕೂಡ ವಿವಿಧ ಗಣ್ಯರು ರಾಜಕೀಯ ಮುಖಂಡರು ಶ್ರೀಗಳ ಭೇಟಿಗೆ ಆಗಮಿಸಿದ್ದಾರೆ. ಡಿಸಿಎಂ ಪರಮೇಶ್ವರ್, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ವಿವಿಧ ರಾಜಕೀಯ ಪ್ರಮುಖರು ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದಾರೆ. ಎಂದಿನಂತೆ ಮಠದ ಸುತ್ತಲೂ ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಿದ್ದಾರೆ.
Advertisement
Advertisement
ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಮಾತನಾಡಿ, ಶ್ರೀಗಳ ಆರೋಗ್ಯದಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಉಸಿರಾಟದ ಸಮಸ್ಯೆ ಹಾಗೆ ಇದೆ. ಶ್ವಾಸಕೋಶದ ಸೋಂಕು, ಕಫದ ಸಮಸ್ಯೆ ಕಡಿಮೆಯಾಗಿದೆ. ಬೆಳಗಿನ ಜಾವ ರಕ್ತ ಪರೀಕ್ಷೆ ಮಾಡಲಾಗಿದ್ದು, ಎಲ್ಲವು ಸರಿಯಾಗಿದೆ. ನಿನ್ನೆ ರಾತ್ರಿ ಶ್ರೀಗಳ ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಉಂಟಾಗಿತ್ತು. ಹಾಗಾಗಿ ಆತಂಕಗೊಂಡಿದ್ದೇವು. ಸದ್ಯ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ. 2-3 ಗಂಟೆ ನಿದ್ರೆಯಲ್ಲಿ ಇರುತ್ತಾರೆ. ಬಳಿಕ ಆಗ ಆಗಾಗ ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಇಷ್ಟಲಿಂಗ ಪೂಜೆಯನ್ನು ಶ್ರೀಗಳಿಗೆ ಮಾಡಲಾಗುತ್ತಿಲ್ಲ, ಆದ್ರೆ ಕಿರಿಯ ಶ್ರೀಗಳು ಅವರ ಎದುರಲ್ಲೆ ಪೂಜೆ ಮಾಡಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಸಿದ್ದಗಂಗಾ ಶ್ರೀಗಳ ಆರೋಗ್ಯ ವೈದ್ಯ ಲೋಕಕ್ಕೂ ಅಚ್ಚರಿ ಮೂಡಿಸುತ್ತಿದೆ. ಶ್ರೀಗಳು ಪವಾಡ ರೀತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸುತಿದ್ದಾರೆ ಎಂದು ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡುವ ವೈದ್ಯರ ತಂಡ ವರದಿಯಲ್ಲಿ ಉಲ್ಲೇಖಿಸಿದ. “He has always Proved us wrong ” ಎಂದು ವೈದ್ಯರು ವರದಿಯಲ್ಲಿ ಒಕ್ಕಣೆ ಬರೆದಿದ್ದಾರೆ. ಈ ವಯಸ್ಸಿನಲ್ಲೂ ಎಲ್ಲಾ ರೀತಿಯ ಚಿಕಿತ್ಸೆಗೆ ಸ್ಪಂದಿಸುತ್ತಿರುವುದಕ್ಕೆ ಖುದ್ದು ವೈದ್ಯರೇ ಚಕಿತಗೊಂಡಿದ್ದಾರೆ ಅಂತ ಬಿಜಿಎಸ್ ಹಾಗೂ ಸಿದ್ದಗಂಗಾ ಆಸ್ಪತ್ರೆ ವೈದ್ಯರ ತಂಡ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv