ಚೆನ್ನೈ: ನಡೆದಾಡುವ ದೇವರು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇನ್ನು ಎರಡು ದಿನದಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.
ಸಿದ್ದಗಂಗಾ ಶ್ರೀಗಳು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಾಗಿ ಇಂದಿಗೆ 13 ದಿನ ಕಳೆದಿದೆ. ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನಡೆದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇಂದು ಅಥವಾ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಈ ಸಂಬಂಧ ಇಂದು ವೈದ್ಯರು ನಿರ್ಧಾರ ಕೈಗೊಳ್ಳಲಿದ್ದಾರೆ. ಬಹುತೇಕ ಇಂದು ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದ್ದು, ನಂತರ ಶ್ರೀಗಳು ಮಠದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಕಿರಿಯ ಶ್ರೀಗಳು ಹೇಳಿದ್ದಾರೆ.
Advertisement
Advertisement
ಮಂಗಳವಾರ ಶ್ರೀಗಳನ್ನ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ಎಂದಿನಂತೆ ಇಷ್ಟಲಿಂಗ ಪೂಜೆ ಮಾಡಿದ್ದಾರೆ. ದ್ರವರೂಪದ ಆಹಾರವನ್ನ ಸೇವಿಸಿದ್ದಾರೆ. ಸದ್ಯಕ್ಕೆ ಶ್ರೀಗಳು ಸಂಪೂರ್ಣ ಗುಣಮುಖರಾಗಲು ಕೆಲವು ಸಮಯವಕಾಶ ಬೇಕಾಗಿದ್ದು, ಅಗತ್ಯ ಚಿಕಿತ್ಸೆಯನ್ನ ಸಿದ್ದಗಂಗಾ ಆಸ್ಪತ್ರೆಯಲ್ಲೇ ನೀಡಲು ಸಿದ್ಧತೆ ನಡೆದಿದೆ ಎಂದು ತಿಳಿದು ಬಂದಿದೆ.
Advertisement
ಒಂದು ವೇಳೆ ಶ್ರೀಗಳು ಇಂದು ಡಿಸ್ಚಾರ್ಜ್ ಆದರೆ ಏರ್ ಅಂಬುಲೆನ್ಸ್ ಮೂಲಕ ಹೆಚ್‍ಎಎಲ್‍ಗೆ ಬಂದಿಳಿಯಲಿದ್ದಾರೆ. ಹೆಚ್‍ಎಎಲ್‍ನಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಲಿದ್ದು, ಅಲ್ಲಿ ಚಿಕಿತ್ಸೆ ಮುಂದುವರಿಯಲಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv