ಚೆನ್ನೈ: ಪಿತ್ತಕೋಶದ ಸೋಂಕಿನಿಂದ ಬಳಲುತ್ತಿರುವ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಇಂದು ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ವಿವಿಧ ಬಗೆಯ ಚಿಕಿತ್ಸೆ ನಡೆಯಲಿದೆ.
ಈ ಬಗ್ಗೆ ಚರ್ಚೆ ಮಾಡಿರುವ ವೈದ್ಯರು ಇಂದು ಬೆಳಗ್ಗೆ 8.30ಕ್ಕೆ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ. ಮೊದಲನೆಯದಾಗಿ ಅಲ್ಟ್ರಾ ಲೆಪ್ಟೋಸ್ಕೋಪ್, ಎರಡನೆಯದಾಗಿ ಎಂಡೋಸ್ಕೋಪಿ ಈ ಎರಡು ಆಗದೆ ಇದ್ದ ಪಕ್ಷದಲ್ಲಿ ಸರ್ಜರಿ ಮಾಡಬೇಕಾಗುತ್ತೆ ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ.
Advertisement
ಅಕಸ್ಮಾತ್ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿರ್ವಾಯತೆ ಸೃಷ್ಟಿಯಾದರೆ ಡಾ.ರೇಲಾ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಶುಕ್ರವಾರ ರಾತ್ರಿ ಪ್ರಸಾದ ಸೇವಿಸಿದ ಶ್ರೀಗಳು ವಾಕಿಂಗ್ ಮಾಡಿದ್ದರು. ಸುತ್ತೂರು ಶ್ರೀಗಳು ಚೆನ್ನೈನ ರೇಲಾ ಆಸ್ಪತ್ರೆಗೆ ತೆರಳಿ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
Advertisement
Advertisement
ಶುಕ್ರವಾರ ಶ್ರೀಗಳನ್ನು ತುಮಕೂರಿನ ಸಿದ್ದಗಂಗಾ ಮಠದಿಂದ ರಸ್ತೆಮಾರ್ಗವಾಗಿ ಬೆಂಗಳೂರಿನ ಹೆಚ್‍ಎ ಎಲ್ ವಿಮಾನ ನಿಲ್ದಾಣಕ್ಕೆ ಹೋಗಿದ್ದು, ಬಳಿಕ ಬೆಂಗಳೂರಿನಿಂದ ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಗಿದೆ. ವಿಶೇಷ ಏರ್ ಅಂಬುಲೆನ್ಸ್ ಮೂಲಕ ಚೆನ್ನೈನಲ್ಲಿರುವ ಪ್ರತಿಷ್ಠಿತ ರೆಲಾ ವೈದ್ಯಕೀಯ ಸಂಸ್ಥೆಗೆ ಹೋಗಿದ್ದಾರೆ. ಸ್ವಾಮೀಜಿಗಳಿಗೆ ಈಗಾಗಲೇ 5 ಸ್ಟಂಟ್ ಅಳವಡಿಸಲಾಗಿದ್ದು, ಮತ್ತೆ ಸ್ಟಂಟ್ ಅಳವಡಿಸಲು ಸಾಧ್ಯವಿಲ್ಲ. ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಚೆನ್ನೈನಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಶ್ರೀಗಳಿಗೆ ಭಾರತದ ಖ್ಯಾತ ಲಿವರ್ ಸ್ಪೆಷಲಿಸ್ಟ್ ಡಾ. ಮೊಹಮ್ಮದ್ ರೇಲಾ ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv