ಬೆಂಗಳೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಚೆನ್ನೈಗೆ ಕರೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ ಎಂದು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಹೇಳಿದ್ದಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಕಿರಿಯ ಸ್ವಾಮೀಜಿ, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಗೆ ಕಂಡಿದೆ. ಆದರೆ ಶ್ರೀಗಳು ಸಂಪೂರ್ಣವಾಗಿ ಗುಣಮುಖರಾಗಬೇಕಿದೆ. ಈಗಾಗಲೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆದರೆ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಬಾರದು ಎಂಬ ಉದ್ದೇಶದಿಂದ ತಜ್ಞರೊಂದಿಗೆ ಚರ್ಚೆ ನಡೆಸಿ ಚೆನ್ನೈಗೆ ಕರೆಕೊಂಡು ಹೋಗಲು ತೀರ್ಮಾನಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಶ್ರೀಗಳನ್ನು ಇಲ್ಲಿಂದ ಚೆನ್ನೈಗೆ ಕರೆದ್ಯೊಯಲಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಾಳೆ ಬೆಳಗ್ಗೆ ನೀಡಲಾಗುವುದು. ಶ್ರೀಗಳ ಆರೋಗ್ಯ ವಿಚಾರದಲ್ಲಿ ಭಕ್ತರಿಗೆ ಯಾವುದೇ ಆತಂಕ ಬೇಡ ಎಂದರು.
Advertisement
Advertisement
ಚೆನ್ನೈನ ಡಾ. ಮೊಹಮದ್ ರೇಲಾ ಅವರ ರೇಲಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಮೊಹಮದ್ ರೇಲಾ ಅವರು ವಿಶ್ವದ ಬೆಸ್ಟ್ ಡಾಕ್ಟರ್ ಆಗಿದ್ದಾರೆ. ಶ್ರೀಗಳಿಗೆ ಈಗಾಗಲೇ 6 ಸ್ಟಂಟ್ ಅಳವಡಿಕೆ ಮಾಡಿರುವುದರಿಂದ ಮತ್ತೆ ಸ್ಟಂಟ್ ಅಳವಡಿಸಲು ಸಾಧ್ಯವಿಲ್ಲ. ಅಲ್ಲದೇ ಪದೇ ಪದೇ ಎಂಡೋಸ್ಕೋಪಿ ಮಾಡಲು ಕೂಡ ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಯಾವುದೇ ರೀತಿಯ ಸೋಂಕು ತಗಲದಂತೆ ಚಿಕಿತ್ಸೆ ನೀಡಲು ಚೆನ್ನೈಗೆ ಕರೆಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ ಎಂದು ಡಾ. ರವೀಂದ್ರ ಅವರು ಸ್ಪಷ್ಟನೆ ನೀಡಿದರು.
Advertisement
https://www.youtube.com/watch?v=b6niH44BjXg
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv