ಬೆಂಗಳೂರು: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಕಳೆದ 13 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಗುಣಮುಖರಾಗಿ ಇಂದು ಶ್ರೀಮಠಕ್ಕೆ ವಾಪಸ್ಸಾಗಿದ್ದಾರೆ.
ಆಸ್ಪತ್ರೆಯಲ್ಲಿಯೇ ಶ್ರೀಗಳಿಗೆ ಇನ್ನೂ ಕೆಲದಿನಗಳ ವಿಶ್ರಾಂತಿ ಅವಶ್ಯಕತೆ ಇದ್ದರೂ ಶ್ರಿಗಳು ಮಠ ಹಾಗೂ ವಿದ್ಯಾರ್ಥಿಗಳನ್ನು ನೋಡುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ತುರ್ತಾಗಿ ಶ್ರೀಮಠಕ್ಕೆ ಕರೆದುಕೊಂಡು ಬರಲಾಗಿದೆ. ಈ ಹಿನ್ನೆಲೆ ಶ್ರೀಮಠದಲ್ಲಿ ಭಕ್ತರಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಮಠದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಎಸ್‍ಪಿ ದಿವ್ಯಾ ಗೋಪಿನಾಥ್ ಮಠಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು.
Advertisement
Advertisement
ಸಿದ್ದಗಂಗಾ ಶ್ರೀ ಸ್ವಾಮೀಜಿ ಕರೆದುಕೊಂಡು ಬರಲು ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಸ್ವಾಮೀಜಿಯನ್ನು ಕರೆದುಕೊಂಡು ಬರಲು ಎರಡು ಅಂಬುಲೆನ್ಸ್ ಗಳನ್ನು ಸಿದ್ಧತೆ ಮಾಡಲಾಗಿತ್ತು. ಚೆನ್ನೈನ ರೇಲಾ ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀಗಳು ಸುಮಾರು 12 ಗಂಟೆಗೆ ಹೊರಟು ಪೊಲೀಸರ ಬಿಗಿ ಭದ್ರತೆಯೊಂದಿಗೆ ಹಾಗೂ ಜೀರೋ ಟ್ರಾಫಿಕ್ ಮುಖಾಂತರ ವಿಮಾನ ನಿಲ್ದಾಣ ತಲುಪಿದ್ದರು.
Advertisement
ಶ್ರೀಗಳ ಜೊತೆಗೆ ಇಬ್ಬರು ವೈದ್ಯರು ಹಾಗೂ ಶ್ರೀಗಳ ಆಪ್ತರೊಬ್ಬರು ಏರ್ ಆಂಬುಲೆನ್ಸ್ ನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳಸಿದ್ದರು. 52 ನಿಮಿಷಕ್ಕೆ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಏರ್ ಅಂಬುಲೆನ್ಸ್ ತಲುಪಿ, ಅಲ್ಲಿಂದ ರಸ್ತೆ ಮೂಲಕ ತುಮಕೂರಿಗೆ ಶ್ರೀಗಳನ್ನು ಕರೆ ತರಲಾಯಿತು.
Advertisement
ಸ್ವಾಮೀಜಿಗೆ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರು ಮೊದಲಿನ ತರ ಊಟ, ಪೂಜೆ ಮಾಡುತ್ತಾರೆ. ಆದ್ದರಿಂದ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದೇವೆ. ಅವರು ರಿಕವರಿ ಆಗಿರುವುದು ಪವಾಡ. ಇದು ಯಾವುದೇ ರೆಕಾರ್ಡ್ ಅಲ್ಲ. ನಮ್ಮ ಕೆಲಸ ನಾವು ಮಾಡಿದ್ದೇವೆ. ಅವರಿಗೆ ಚಿಕಿತ್ಸೆ ನೀಡಿರುವುದು ಖುಷಿ ಇದೆ. ಸದ್ಯಕ್ಕೆ ಅವರು ವಿಶ್ರಾಂತಿ ಪಡೆಯಬೇಕಿದೆ ಎಂದು ಡಾ. ಮೊಹಮ್ಮದ್ ರೇಲಾ ಅವರು ತಿಳಿಸಿದ್ದಾರೆ.