ಮೈಸೂರು: ಟಿಪ್ಪು ಜಯಂತಿ ಆಚರಣೆ ಮಾಡಿದಕ್ಕೆ ನನ್ನನ್ನು ಸಿದ್ದುಖಾನ್ ಎಂದು ಕರೆದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಈ ಹಿಂದೆ ಅವರು ಟಿಪ್ಪು ಜಯಂತಿ ಆಚರಣೆ ಮಾಡಿದ್ದರು. ಅವರನ್ನು ಯಡ್ಡಿಖಾನ್ ಎಂದು ಕರೆಯಲು ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ ಸಿದ್ದರಾಮಯ್ಯ ಅವರು, ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಸಿದ್ದುಖಾನ್ ಆಗಿದ್ದಾರೆ ಎಂಬ ಮಾತಿಗೆ ತಿರುಗೇಟು ನೀಡಿದರು. ಬಿಜೆಪಿ ನಾಯಕರದ ಜಗದೀಶ್ ಶೆಟ್ಟರ್, ಆರ್ ಅಶೋಕ್ ಅವರು ಕೂಡ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರನ್ನು ಯಾವ ಖಾನ್ ಎಂದು ಕರೆಯಬೇಕೆಂದು ನೀವು ನಿರ್ಧಾರ ಮಾಡಿ ಎಂದರು.
Advertisement
Advertisement
ಬಿಜೆಪಿಯವರು ಗೋಮುಖ ವ್ಯಾಘ್ರಗಳು ಎಂಬ ಸಿದ್ದರಾಮಯ್ಯ ಅವರು, ಬಿಜೆಪಿಯ ನಾಯಕರಿಗೆ ಇರುವುದು ಎರಡೆರಡು ನಾಲಿಗೆ. ಅವರೇ ಟಿಪ್ಪು ಟೋಪಿ ಹಾಕಿಕೊಂಡು ಕಾರ್ಯಕ್ರಮ ಮಾಡಿದ್ದಾರೆ. ಈಗ ನನ್ನನ್ನು ಸಿದ್ದುಖಾನ್ ಎಂದು ಕರೆಯುತ್ತಾರೆ. ಸಂವಿಧಾನದ ಪರವಾಗಿ ಇರುವುದು ಮತಾಂಧತನವಾ? ನಾನು ಜಾತ್ಯಾತೀತ ಹಾಗಾಗಿ ಬಿಜೆಪಿ ನನ್ನನ್ನೇ ಟಾರ್ಗೆಟ್ ಮಾಡಿದ್ದಾರೆ. ಏಕೆಂದರೆ ಅವರು ಕೋಮುವಾದಿಗಳು ಎಂದು ವಾಗ್ದಾಳಿ ನಡೆಸಿದರು.
Advertisement
ಟಿಪ್ಪು ಜಯಂತಿ ವೇಳೆ ಮೆರವಣಿಗೆ ನಿಲ್ಲಿಸಲು ನಮ್ಮ ಸರ್ಕಾರವೇ ಹೇಳಿತ್ತು, ಈಗ ಅದನ್ನೇ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಹಾಗೂ ಡಿಸಿಎಂ ಪರಮೇಶ್ವರ್ ಅವರು ಕಾರ್ಯಕ್ರಮಕ್ಕೆ ಗೈರಾಗುವುದು ಪೂರ್ವ ನಿರ್ಧರಿತವಾಗಿದೆ. ಇದಕ್ಕೆ ವಿಶೇಷ ಅರ್ಥ ಬೇಡ ಎಂದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews