ಬೆಂಗಳೂರು: ಸಿಎಲ್ ಪಿ ಹಾಗೂ ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಕೊಟ್ಟ ರಾಜೀನಾಮೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಕೊಟ್ಟ ರಾಜೀನಾಮೆ ಎರಡನ್ನು ಅಂಗೀಕರಿಸೋಕೆ ಕಾಂಗ್ರೆಸ್ ಹೈ ಕಮಾಂಡ್ ನಿರ್ಧರಿಸಿದೆ.
ವಿಪಕ್ಷ ನಾಯಕನ ಸ್ಥಾನಕ್ಕೆ ಬೇರೆಯವರನ್ನು ಮತ್ತು ಸಿಎಲ್ ಪಿ ನಾಯಕನ ಸ್ಥಾನಕ್ಕೆ ಬೇರೆಯವರನ್ನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮತ್ತೋರ್ವರನ್ನ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ. ಅದರಂತೆ ಎಐಸಿಸಿ ನಾಯಕ ಮಧುಸೂದನ್ ಮಿಸ್ತ್ರಿ ಇಂದು ಮಧ್ಯಾಹ್ನ 2 ಗಂಟೆಗೆ ಕುಮಾರ ಕೃಪ ಗೆಸ್ಟ್ ಹೌಸ್ ನಲ್ಲಿ ಹಿರಿಯ ನಾಯಕರ ಸಭೆ ನಡೆಸಲು ಮುಂದಾಗಿದ್ದಾರೆ. ಸಭೆಯ ಬಳಿಕ ನಾಯಕರ ಅಭಿಪ್ರಾಯದ ವರದಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ.
Advertisement
Advertisement
ಶುಕ್ರವಾರ ಹಿರಿಯ ನಾಯಕರು ಸೂಚಿಸುವ ಹೆಸರುಗಳಿಗೆ ಮುಂದಿನ ದಿನಗಳಲ್ಲಿ ಪಟ್ಟಾಭಿಷೇಕ ನಡೆಸಲು ತೀರ್ಮಾನಿಸಲಾಗಿದೆ. ಅಲ್ಲಿಗೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಹೊಸ ಮುಖಗಳ ಆಯ್ಕೆ ಖಚಿತವಾಗಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.