ಬೆಂಗಳೂರು: ಯಾರ ಹತ್ತಿರವೂ ನಾವು ಮಾತಾಡಬಾರದು. ನೀವು ಅದನ್ನು ದೊಡ್ಡದು ಮಾಡುತ್ತಿರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳುವ ಮೂಲಕ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಜೆಟ್ ಹೇಳಿಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಸಹಜವಾಗಿ ಮಾತನಾಡುತ್ತಿದ್ದಾಗ ವಿಡಿಯೋ ಮಾಡಿಕೊಳ್ಳಲಾಗಿದ್ದು, ಆ ವಿಡಿಯೋದಲ್ಲಿ ಹಿಂದಿನ ಹಾಗೂ ಮುಂದಿನ ದೃಶ್ಯ ಕತ್ತರಿಸಿ ಜನರಲ್ಲಿ ದ್ವಂದ್ವತೆ ಉಂಟು ಮಾಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಮಾಧ್ಯಮಗಳ ವಿರುದ್ಧ ದೂರಿದರು. ಇದನ್ನು ಓದಿ: ಸಾಲಮನ್ನಾ, ಬಜೆಟ್ ವಿಚಾರದಲ್ಲಿ ಸಿದ್ದರಾಮಯ್ಯ ಮುನಿಸು: ಆಪ್ತರ ಜೊತೆ ಮಾತನಾಡಿದ್ದು ಏನು? ಆಡಿಯೋ ಕೇಳಿ
Advertisement
ಬಿಜೆಪಿ ಒಂದು ಕೋಮುವಾದಿ ಸರ್ಕಾರ. ಹೀಗಾಗಿ ಅದನ್ನು ಅಧಿಕಾರಕ್ಕೆ ಬರಬಾರದು ಎನ್ನುವುದಕ್ಕೆ ಜೆಡಿಎಸ್ ಜೊತೆ ಕೈ ಜೋಡಿಸಿದ್ದೇವೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸಲಿದೆ. ಇದರಲ್ಲಿ ಸಂದೇಹವೇ ಬೇಡ ಎಂದು ಹೇಳಿದರು.
Advertisement
ಇಂದು ಸಮ್ಮಿಶ್ರ ಸರ್ಕಾರದ ಕಾರ್ಯಕ್ರಮಗಳ ಸಮಿತಿ ಸಭೆ ಸಂಜೆ ಇದೆ. ಹೀಗಾಗಿ ಅದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ಸಂಸದ ವೀರಪ್ಪ ಮೋಯ್ಲಿ, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಆರ್.ವಿ.ದೇಶಪಾಂಡೆ ಅವರೊಂದಿಗೆ ಸಭೆ ನಡೆಸಲಾಗಿದೆ. ನಾಡಿದ್ದು ಸಮನ್ವಯ ಸಮಿತಿ ಸಭೆಯಿದ್ದು, ಅಲ್ಲಿಯೂ ಸಹ ಚರ್ಚೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.