– ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ, 2 ವರ್ಷದಲ್ಲಿ ಎತ್ತಿನ ಹೊಳೆ ಯೋಜನೆ ನೀರು
– ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಭರವಸೆ
– ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಭರವಸೆ
ಕೋಲಾರ: ನಾನು ಕೋಲಾರದಿಂದ (Kolar) ಸ್ಪರ್ಧೆ ಮಾಡಿದ್ರೆ ಸಿದ್ದರಾಮಯ್ಯ ಕೈಗೆ ಸಿಗ್ಗಲ್ಲ ಅಂತಾ ಕೆಲವರು ಅಪಪ್ರಚಾರ ಮಾಡ್ತಿದ್ದಾರೆ. ನಾನು ಅವರಿಗೆಲ್ಲಾ ಹೇಳ್ತೇನೆ ನಾನು ಪ್ರತಿವಾರ ಕ್ಷೇತ್ರದಲ್ಲಿ ಇರುತ್ತೇನೆ. ಚಡ್ಡಿ ಹಾಕಿಕೊಂಡು ಬರುವವರೂ ನನ್ನನ್ನ ನೇರವಾಗಿಯೇ ಮಾತನಾಡಿಸಬಹುದು ಎಂದು ವಿಪಕ್ಷ ನಾಯಕ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
Advertisement
ಕೋಲಾರದಲ್ಲಿಂದು (Kolar) ನಡೆದ ಕಾಂಗ್ರೆಸ್ (Congress) ಕಾರ್ಯಕರ್ತರ ಸಭೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಅಧಿಕೃತ ಘೋಷಣೆ ಮಾಡಿದ್ದಾರೆ. ಮುಂದುವರಿದು ಮಾತನಾಡಿ, ಕೋಲಾರದಿಂದ ಸ್ಪರ್ಧೆ ಮಾಡಬೇಕು ಅಂತಾ ತೀರ್ಮಾನ ಮಾಡಿದ್ದೇನೆ. ಆದ್ರೆ ಪಕ್ಷದ ಶಿಸ್ತನ್ನು ಪಾಲನೆ ಮಾಡಬೇಕು. ಹೈಕಮಾಂಡ್ ಹಾಗೂ ಸ್ಕ್ರೀನಿಂಗ್ ಕಮಿಟಿ ನಿರ್ಧಾರ ಮಾಡಲಿದೆ. ಹೈ ಕಮಾಂಡ್ (High Command) ಹೇಳಿದಂತೆ ನಾವು ನಡೆದುಕೊಳ್ಳಬೇಕಿದೆ. ನಾನು ಇಲ್ಲಿಂದ ಸ್ಪರ್ಧೆ ಮಾಡಲು ನಿರ್ಧಾರ ಮಾಡಿದ್ದೇನೆ. ಆದ್ರೆ ಅದಕ್ಕೆ ಹೈಕಮಾಂಡ್ ಒಪ್ಪಿಗೆ ಬೇಕು ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕೋಲಾರದಿಂದಲೇ ಸ್ಪರ್ಧೆ – ಸಿದ್ದರಾಮಯ್ಯ ಅಧಿಕೃತ ಘೋಷಣೆ
Advertisement
Advertisement
ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆ. ನಾನು ಇಲ್ಲಿ ಸ್ಪರ್ಧೆ ಮಾಡಿದ್ರೆ ಸಿಗಲ್ಲ, ಅವರನ್ನ ಕಾಣೋದಕ್ಕೆ ಬೆಂಗಳೂರಿಗೆ ಹೋಗಬೇಕು ಅಂತಾ ಹೇಳ್ತಾರೆ. ಆದರೆ ಅವರಿಗೆಲ್ಲಾ ಹೇಳುತ್ತೇನೆ ನಾನು ಪ್ರತಿವಾರ ಕ್ಷೇತ್ರದಲ್ಲಿ ಇರುತ್ತೇನೆ. ಚಡ್ಡಿ ಹಾಕಿಕೊಂಡು ಬರುವವರೂ ಸಹ ನೇರವಾಗಿಯೇ ನನ್ನನ್ನ ಮಾತನಾಡಿಸಬಹುದು. ನಾನು ಅಭಿವೃದ್ಧಿ ವಿಚಾರದಲ್ಲಿ ಹಿಂದೆ ನೋಡುವ ಮಾತೇ ಇಲ್ಲ. ಮುಖಂಡರು ಹೇಳಿದಂತೆ ಕೋಲಾರ ಕ್ಷೇತ್ರವನ್ನ ಅಭಿವೃದ್ಧಿ ಮಾಡುತ್ತೇನೆ. ಕೋಲಾರ ಮಾತ್ರವಲ್ಲ ರಾಜ್ಯವನ್ನೆ ಅಭಿವೃದ್ಧಿ ಮಾಡುತ್ತೇವೆ ಎಂದು ಮತ್ತೊಮ್ಮೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷದಿಂದ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿ: ಬಿಸಿ ನಾಗೇಶ್
Advertisement
ಹಲವು ಭರವಸೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದ 2 ವರ್ಷದಲ್ಲಿ ಎತ್ತಿನ ಹೊಳೆ ಯೋಜನೆ ನೀರು ಕೊಡುತ್ತೇವೆ. ಹಲವು ನೀರಾವರಿ ಯೋಜನೆಗಳನ್ನ ಕಾಲ ಬದ್ಧವಾಗಿ ಮುಗಿಸಿ ರೈತರಿಗೆ (Farmers) ನೀರು ಕೊಡುತ್ತೇವೆ. ನಾವು ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k