– ಪೊಲೀಸ್ ಇಲಾಖೆ ಸರ್ಕಾರದ ಕೈಗೊಂಬೆ
ಬೀದರ್: ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ಇಬ್ಬರು ಅಮಾಯಕರನ್ನು ಪೊಲೀಸಿನವರೇ ದುರುದ್ದೇಶದಿಂದ ಕೊಂದು ಬಿಟ್ಟರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಇಲಾಖೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Advertisement
ಭಾನುವಾರ ಪೌರತ್ವ ಕಾಯ್ದೆ ವಿರೋಧಿಸಿ ಜಂಟಿ ಕ್ರಿಯಾ ಸಮಿತಿಯಿಂದ ಬಸವಕಲ್ಯಾಣದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಪೊಲೀಸ್ ಇಲಾಖೆ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸರ್ಕಾರದ ಕೈಗೊಂಬೆಯಂತೆ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದ್ದು, ಮಂಗಳೂರಿನಲ್ಲಿ ನಡೆದ ಗೋಲಿಬಾರ್‍ನಲ್ಲಿ ಇಬ್ಬರು ಅಮಾಯಕರು ಸತ್ತರು ಎಂದರು.
Advertisement
Advertisement
ಸತ್ತವರು ಅಮಾಯಕರು ಅಲ್ಲಾ ಎಂದು ಬಿಜೆಪಿ ಹೇಳುತ್ತದೆ. ಆದರೆ ಕೋರ್ಟ್ ಅವರನ್ನು ಅಮಾಯಕರು ಎಂದು ಹೇಳುತ್ತದೆ ಎಂದು ಬಿಜೆಪಿ ಮೇಲೆ ಕಿಡಿಕಾರಿದರು. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕರಾದ ರಹೀಂಖಾನ್, ರಾಜಶೇಖರ್ ಪಾಟೀಲ್, ಬಿ ನಾರಾಯಣ್, ಬಂಡೆಪ್ಪ ಕಾಶೆಂಪೂರ್, ಎಂಎಲ್‍ಸಿ ಅರವಿಂದ ಅರಳಿ, ಹಲವು ಹೋರಾಟಗಾರು, ಪಕ್ಷದ ಮುಖಂಡರು ಹಾಗೂ ಸಾವಿರಾರು ಜನರು ಭಾಗಿಯಾಗಿದ್ದರು.