ಕೊನೆಗೂ ಸಿಎಂ ಕುಮಾರಸ್ವಾಮಿ ಪರ ಸಿದ್ದರಾಮಯ್ಯ ಬ್ಯಾಟಿಂಗ್

Public TV
1 Min Read
CM SIDDU

– ಮತ್ತೆ ಸಿಎಂ ಆಗೋ ಬಗ್ಗೆ ಪ್ರತಿಕ್ರಿಯೆ
– ಜೆಡಿಎಸ್ ಹಿರಿಯ ನಾಯಕನಿಗೆ ಎಚ್ಚರಿಕೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಾದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ, ನಮ್ಮ ಶಾಸಕರು ಅಭಿಮಾನದಿಂದ ಮತ್ತೆ ಸಿಎಂ ಆಗುವಂತೆ ಅವರ ಅಭಿಪ್ರಾಯ ಹೇಳುತ್ತಾರೆ. ಅವರು ಹೇಳಿದಂತೆ ಹೇಗಾಗುತ್ತೆ. ಈಗ ಸಿಎಂ ಕುರ್ಚಿ ಖಾಲಿ ಇಲ್ಲವಲ್ಲ. ಅಲ್ಲಿ ಕುಮಾರಸ್ವಾಮಿ ಇದ್ದಾರೆ. ಲೋಕಸಭಾ ಚುನಾವಣೆ ಆಗಲು ಮೊದಲೇ ಇದೆಲ್ಲವನ್ನು ನಿರ್ಧಾರ ಮಾಡಬಾರದು ಎಂದರು.

vlcsnap 2019 05 08 11h43m00s454

ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರ ಅಧಿಕಾರಾವಧಿಯಲ್ಲಿ ಮೂರು ಜನ ಸಿಎಂ ಆಗಿದ್ದರು. ಭ್ರಷ್ಟಾಚಾರ ಮಾಡಿ ಆರು ಮಂತ್ರಿಗಳು ಜೈಲಿಗೆ ಹೋಗಿದ್ದರು. ಅಂತವರಿಗೆ ಯಾಕೆ ಜನ ಮತ ಕೊಡುತ್ತಾರೆ. ಬೈ ಎಲೆಕ್ಷನ್ ನಲ್ಲಿ ಚಿಂಚೋಳಿ ಮತ್ತು ಕುಂದಗೋಳ ಎರಡು ಕ್ಷೇತ್ರಗಳನ್ನು ನಾವೇ ಗೆಲ್ಲುತ್ತೇವೆ. ಮಂಡ್ಯ, ಶಿವಮೊಗ್ಗ, ಬಳ್ಳಾರಿ, ಜಮಖಂಡಿಯಲ್ಲಿ ಬಿಜೆಪಿಯವರ ಕಥೆ ಏನಾಯ್ತು. ಜನರು ಮತ್ತೆ ಅವರಿಗೆ ಅಧಿಕಾರ ಕೊಡಲ್ಲ ಎಂದು ಬಿಜೆಪಿಯ ಬಗ್ಗೆ ವ್ಯಂಗ್ಯವಾಡಿದರು.

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕಸಿದುಕೊಂಡಿದ್ದು ತಪ್ಪು ಎನ್ನೋ ಹೊರಟ್ಟಿ ಹೇಳಿಕೆ ವಿಚಾರ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡದೇ ಇರುವುದು ಒಳ್ಳೆಯದು ಎಂದು ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *