ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಮುಸ್ಲಿಂ ಧರ್ಮಗುರು ಸನ್ಮಾನ ಮಾಡಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ನೇತೃತ್ವದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸನ್ಮಾನ ಮಾಡಲಾಯಿತು.
ಬೆಳ್ಳಿ ಖಡ್ಗ, ಬೆಳ್ಳಿ ಹಾರ, ಪೇಟ ತೊಡಿಸಿ ಮುಸ್ಲಿಂ ಧರ್ಮಗುರು ಮಾಜಿ ಸಿಎಂಗೆ ಸನ್ಮಾನ ಮಾಡಿದರು. ಸನ್ಮಾನದ ಬಳಿಕ ಸಿದ್ದರಾಮಯ್ಯ ಮಾತನಾಡಿ, ರಾಜಕೀಯ ಕಾರಣಗಳಿಗೆ ಬಿಜೆಪಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದೆ. ಟಿಪ್ಪು ಖಡ್ಗ ಕೈಯಲ್ಲಿ ಹಿಡಿದು ಪೇಟ ತೊಟ್ಟಾಗ ಬಿಜೆಪಿ ಮುಖಂಡರು ಯಾರೂ ವಿರೋಧ ಮಾಡಲಿಲ್ಲ. ಅಲ್ಲದೇ ಟಿಪ್ಪು ಪುಸ್ತಕಕ್ಕೆ ಜಗದೀಶ್ ಶೆಟ್ಟರ್ ಮುನ್ನುಡಿ ಬರೆದಿದ್ದಾರೆ. ಬಿಜೆಪಿ ನಾಯಕರು ಟಿಪ್ಪು ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದರು.
Advertisement
Advertisement
ಬಿಜೆಪಿಯವರು ಗೋಮುಖ ವ್ಯಾಘ್ರಗಳು:
ಟಿಪ್ಪು ಸುಲ್ತಾನ್ ಕಾಲದಲ್ಲಿ ಸಾಮರಸ್ಯವಿತ್ತು. ನಮ್ಮ ಕಾಲದಲ್ಲಿ 13 ಜಯಂತಿಗಳನ್ನು ಮಾಡಿದ್ದೇವೆ. ಕಿತ್ತೂರು ರಾಣಿ ಚೆನ್ನಮ್ಮ, ಹೇಮರೆಡ್ಡಿ ಮಲ್ಲಮ್ಮ, ವಾಲ್ಮೀಕಿ ಸೇರಿದಂತೆ 13 ಜನರ ಜಯಂತಿ ಮಾಡಿದ್ದೇವೆ. ಅದರಲ್ಲಿ ಟಿಪ್ಪು ಜಯಂತಿ ಕೂಡ ಒಂದು. ಬಿಜೆಪಿಯವರು ದುರುದ್ದೇಶದಿಂದ ರಾಜಕೀಯಕ್ಕಾಗಿ ವಿರೋಧ ಮಾಡುತ್ತಿದ್ದು, ಅವರು ಗೋಮುಖ ವ್ಯಾಘ್ರಗಳು. ಟಿಪ್ಪು ಹಿಂದು ವಿರೋಧಿ ಎಂಬುದು ಸುಳ್ಳು. ಅವರ ಕಾಲದಲ್ಲಿ ಹಲವು ಹಿಂದುಗಳು ಪ್ರಮುಖ ಹುದ್ದೆಯಲ್ಲಿದ್ದರು ಎಂದು ಹೇಳುತ್ತಾ ಮಾಜಿ ಸಿಎಂ ರಾಜ್ಯದ ಜನರಿಗೆ ಟಿಪ್ಪು ಜಯಂತಿಯ ಶುಭಾಶಯ ತಿಳಿಸಿದರು.
Advertisement
ಸಿಎಂ, ಡಿಸಿಎಂ ಗೈರಿಗೆ ಸ್ಪಷ್ಟನೆ:
ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಅವರು ಟಿಪ್ಪು ಕಾರ್ಯಕ್ರಮಕ್ಕೆ ಗೈರಾದ ಬಗ್ಗೆ ಮಾತನಾಡಿದ ಅವರು, ಸಿಎಂ ಆರೋಗ್ಯದ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಬರುತ್ತಿಲ್ಲ ಎಂಬ ವಿಷಯವನ್ನು ಕೇಳಿದೆ. ಸಿಎಂ ಹಾಗೂ ಡಿಸಿಎಂ ಅವರು ಕಾರಣಾಂತರಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಅವರ ಪರವಾಗಿ ಸರ್ಕಾರದ ವತಿಯಿಂದ ಸಚಿವರಾದ ಜಮೀರ್ ಅಹಮ್ಮದ್, ಜಯಮಾಲಾ, ಶಾಸಕ ರೋಷನ್ ಬೇಗ್ ಹಾಗೂ ಹ್ಯಾರಿಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Advertisement
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ ಗೈರಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಅವರ ಆರೋಗ್ಯ ಸರಿಯಿಲ್ಲ. ಅದೇ ಕಾರಣಕ್ಕೆ ಕುಮಾರಸ್ವಾಮಿ ಹಾಜರಾಗುತ್ತಿಲ್ಲ. ಇದನ್ನ ಅವರೇ ಈಗಾಗಲೇ ಹೇಳಿದ್ದಾರೆ. ಮಾಜಿ ಸಚಿವ ಚೆನ್ನಿಗಪ್ಪ ಆರೋಗ್ಯ ವಿಚಾರಿಸಲು ಪರಮೇಶ್ವರ್ ತೆರಳಿದ್ದಾರೆ. ಚೆನ್ನಿಗಪ್ಪ ಅವರ ಅರೋಗ್ಯ ತೀವ್ರ ಹದಗೆಟ್ಟಿದೆ. ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಚೆನ್ನಿಗಪ್ಪರನ್ನ ನೋಡಲು ವಿದೇಶಕ್ಕೆ ತೆರಳಿದ್ದಾರೆ. ಸಂಜೆ 3 ಗಂಟೆಗೆ ಪರಮೇಶ್ವರ್ ವಾಪಸ್ಸಾಗುತ್ತಿದ್ದಾರೆ ಎಂದರು.
ಈ ಮೊದಲು ಸಂಜೆ 6.30ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಈಗ ಕಾರ್ಯಕ್ರಮದ ಸಮಯದಲ್ಲಿ ಬದಲಾವಣೆಯಾಗಿದೆ. ಹಾಗಾಗಿ ಪರಮೇಶ್ವರ್ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಮೊದಲಿನಿಂದಲೂ ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ. ಇದು ನಾಲ್ಕನೇ ಟಿಪ್ಪು ಜಯಂತಿ ಆಚರಣೆಯಾಗಿದ್ದು, ಕೇವಲ ರಾಜಕೀಯ ಲಾಭಕ್ಕಾಗಿ ವಿರೋಧ ಮಾಡುತ್ತಿದ್ದಾರೆ ಅಷ್ಟೇ ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews