Bengaluru City

ಗಾಂಧಿ, ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಕಂಡ್ರೆ ಬಿಜೆಪಿಗೆ ಆಗ್ತಿರಲಿಲ್ಲ, ಈಗ ನಾಟಕ ಆಡ್ತಾರೆ: ಸಿದ್ದರಾಮಯ್ಯ

Published

on

Share this

ಬೆಂಗಳೂರು: ಗಾಂಧಿ, ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಯವರಿಗೆ ಆಗುತ್ತಿರಲಿಲ್ಲ. ಈಗ ಪ್ರೀತಿ ಇರುವಂತೆ ನಾಟಕ ಆಡುತ್ತಾರೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ, ದಿವಂಗತ ಆರ್. ಗುಂಡೂರಾವ್ ಅವರ ಜನ್ಮದಿನದ ಅಂಗವಾಗಿ ಗಾಂಧಿನಗರ ವಿಧಾನಸಭೆ ಕ್ಷೇತ್ರದ ಆಟದ ಮೈದಾನದಲ್ಲಿ ಇಂದು ಆಯೋಜಿಸಿದ್ದ ದಿನಸಿ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಂದೇ ಮಾತರಂ ಗೀತೆ ಆರಂಭವಾದದ್ದು ಸ್ವಾತಂತ್ರ್ಯ ಹೋರಾಟದಲ್ಲಿ, ಈಗ ಅದನ್ನು ಬಿಜೆಪಿ, ಆರ್.ಎಸ್.ಎಸ್ ಹೇಳಲು ಆರಂಭಿಸಿದೆ. ಆಗ ಸ್ವಾತಂತ್ರ್ಯ ಚಳವಳಿ ನಡೆಯುವಾಗ ಅದರಿಂದ ದೂರ ಇದ್ದರು. ಮೊದಲು ಗಾಂಧಿ, ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಗೆ ಆಗುತ್ತಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಅವರ ಮೇಲೆ ಪ್ರೀತಿಯ ನಾಟಕವಾಡಲು ಆರಂಭಿಸಿದ್ದಾರೆ. ನಾವು ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಂದ್ ಮಾಡಿ ಬಡವರು ತಿನ್ನುವ ಅನ್ನಕ್ಕೆ ಕಲ್ಲು ಹಾಕಿದ ದುಷ್ಟ ಸರ್ಕಾರ ರಾಜ್ಯದಲ್ಲಿದೆ. ಇದನ್ನು ಕಿತ್ತೊಗೆಯುವ ಸಂಕಲ್ಪವನ್ನು ಜನ ಮಾಡಬೇಕು ಎಂದು ಕಿಡಿಕಾರಿದ್ದಾರೆ.

ನಾನು ಜನತಾ ಪಾರ್ಟಿಯಿಂದ ಶಾಸಕನಾಗಿ ಆಯ್ಕೆಯಾದಾಗ ಗುಂಡೂರಾವ್ ಅವರು ಆಡಳಿತದಲ್ಲಿ ಇದ್ದರು, ಅವರು ಹೇಗೆ ಅಜಾನುಬಾಹುವಾಗಿದ್ದರೋ, ಅಷ್ಟೇ ಹೃದಯವೈಶಾಲ್ಯತೆಯನ್ನು ಹೊಂದಿದ್ದರು. ರಾಜಕಾರಣಿಗಳಿಗೆ ಹೃದಯ ವೈಶಾಲ್ಯತೆ ಇದ್ದಾಗ ಮಾತ್ರ ಬಡವರು, ದಲಿತರು, ದಮನಿತರ ಪರವಾಗಿ ಸ್ಪಂಧಿಸಲು ಸಾಧ್ಯವಾಗುತ್ತದೆ. ಗುಂಡೂರಾವ್ ಸಾಮಾನ್ಯ ಕುಟುಂಬದಿಂದ ಬಂದು ಮುಖ್ಯಮಂತ್ರಿ ಸ್ಥಾನಕ್ಕೇರಿದ ಸಾಧಕರು ಎಂದು ಹೊಗಳಿದ್ದಾರೆ. ಇದನ್ನೂ ಓದಿ: ನಾನು ಕಾಂಗ್ರೆಸ್‍ಗೆ ಹೋಗ್ತೀನೆಂದು ಹೇಳಿಕೆ ಕೊಡುವವರಿಗೆಲ್ಲಾ ತಲೆ ಕೆಟ್ಟಿದೆ: ಶಿವಲಿಂಗೇಗೌಡ

ಗುಂಡೂರಾವ್ ಅವರು ಇಂದಿರಾ ಗಾಂಧಿ ಅವರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ನೇರ ನಡೆ, ನುಡಿಯ ಸ್ವಭಾವ, ಬಡವರಿಗೆ ಸ್ಪಂದಿಸುವ ಅವರ ಗುಣ ಇಂದಿಗೂ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದೆ. ಗುಂಡೂರಾವ್ ಅವರ ಕಾಲದಲ್ಲಿ ಬಡವರಿಗೆ ಅಕ್ಕಿ ನೀಡುವ ಕಾರ್ಯಕ್ರಮ ಆರಂಭಿಸಲಾಗಿತ್ತು. ನಾನು ಮುಖ್ಯಮಂತ್ರಿ ಆದ ಮೇಲೆ ಮೊದಲು ಒಂದು ರೂಪಾಯಿಗೆ ಐದು ಕೆ.ಜಿ ಅಕ್ಕಿ ನೀಡಿದೆ. ನಂತರ 1 ಕೋಟಿ 20 ಲಕ್ಷ ಕುಟುಂಬಗಳಿಗೆ ತಲಾ ಏಳು ಕೆ.ಜಿ ಉಚಿತವಾಗಿ ಅಕ್ಕಿ ನೀಡಿದೆ. ಈಗ ಕುಮಾರಸ್ವಾಮಿ ಅನ್ನಭಾಗ್ಯ ಯೋಜನೆಗೆ ನಾನು ಅನುದಾನ ನೀಡಿದೆ ಅಂತ ಸುಳ್ಳು ಹೇಳುತ್ತಾರೆ.

siddaramaiah

ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಮೊದಲೇ ಈ ಯೋಜನೆ ನಾನು ಜಾರಿಗೆ ತಂದಿದ್ದೆ. ಅಲ್ಲದೇ ಈ ದೇಶದಲ್ಲಿ ಎಲ್ಲರಿಗೂ ಬಟ್ಟೆ ಮತ್ತು ಹೊಟ್ಟೆ ತುಂಬಾ ಅನ್ನ ಸಿಗುವುದಿಲ್ಲವೋ ಅಲ್ಲಿಯವರೆಗೆ ನಾನು ಅರೆಬೆತ್ತಲಾಗಿಯೇ ಇರುತ್ತೇನೆ ಎಂದು ಗಾಂಧೀಜಿ ಅವರು ಹೇಳಿದ್ದರು. ರಾಜ್ಯದ ಜನರ ಹಸಿವು ನೀಗಿಸುವ ಕೆಲಸವನ್ನು ದಿನೇಶ್ ಗುಂಡೂರಾವ್ ಅವರು ನಮ್ಮ ಸರ್ಕಾರದ ಅವಧಿಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ನಿಭಾಯಿಸಿದ್ದರು ಎಂದು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

ಟಬು ರಾವ್ ಅವರ ಅಧ್ಯಕ್ಷತೆಯಲ್ಲಿ ಗುಂಡೂರಾವ್ ಫೌಂಡೇಶನ್ ಆರಂಭವಾಗಿದೆ. ಇದು ಬಡ ಜನರಿಗೆ ಅಕ್ಕಿ ಹಾಗೂ ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ರೂ. 10 ಸಾವಿರದ ಚೆಕ್ ನೀಡುವ ಜನಪರ ಕಾರ್ಯವನ್ನು ಮಾಡುತ್ತಿದೆ. ಸರ್ಕಾರ ಮಾಡಬೇಕಿದ್ದ ಕೆಲಸವನ್ನು ದಿನೇಶ್ ಗುಂಡೂರಾವ್ ಅವರ ಕುಟುಂಬ ಮಾಡುತ್ತಿದೆ. ಈ ವರ್ಷ ಒಂದರಲ್ಲೇ 30,000 ಜನರಿಗೆ ಆಹಾರ ಕಿಟ್ ಹಂಚಿದ್ದಾರೆ. ಇಂಥ ಜನಪರ ಕಾರ್ಯಕ್ಕೆ ಅವರನ್ನು ಅಭಿನಂದಿಸಲು ಬಯಸುತ್ತೇನೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಇದೇ ರೀತಿ ರಾಜ್ಯಾದ್ಯಂತ ನಮ್ಮ ಶಾಸಕರು, ಕಾರ್ಯಕರ್ತರು ಜನರ ಕಷ್ಟಕ್ಕೆ ನೆರವಾಗಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement