ರಾಮನಗರ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಿರಿಯ ನಾಯಕರನ್ನು ತುರ್ತು ಸಭೆ ಕರೆದಿದ್ದಾರೆ.
ಸರ್ಕಾರ ಪಾದಯಾತ್ರೆ ನಿಷೇಧಿಸಿದ ಹಿನ್ನೆಲೆ ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಪಕ್ಷದ ಹಿರಿಯ ಮುಖಂಡರು, ಶಾಸಕರು, ಸಂಸದರು, ಹಾಲಿ ಮತ್ತು ಮಾಜಿ ಶಾಸಕರನ್ನು ಸಿದ್ದರಾಮಯ್ಯ ಅವರು ತುರ್ತು ಸಭೆ ಕರೆದಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ಲೋಪ ಪೂರ್ವ ನಿಯೋಜಿತ: ಯೋಗಿ ಆದಿತ್ಯನಾಥ್
Advertisement
Advertisement
ಈ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ಹಿರಿಯ ನಾಯಕರು ಉಪಸ್ಥಿತರಿರುತ್ತಾರೆ. ಈ ಸಭೆಯ ಬಳಿಕ ಪಾದಯಾತ್ರೆ ಬಗ್ಗೆ ಮುಂದಿನ ತೀರ್ಮಾನ ಕಾಂಗ್ರೆಸ್ ಕೈಗೊಳ್ಳಲಿದೆ. ಇದನ್ನೂ ಓದಿ: ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ: ಡಿ.ಕೆ ಸುರೇಶ್
Advertisement
ಸರ್ಕಾರ ವರ್ಸಸ್ ಕಾಂಗ್ರೆಸ್ ನಡುವಿನ ಮೇಕೆದಾಟು ಪಾದಯಾತ್ರೆ ಈಗ ನಿರ್ಣಾಯಕ ಹಂತವನ್ನು ತಲುಪಿದ್ದು, ಬೆಂಗಳೂರಿನಲ್ಲೇ ಪಾದಯಾತ್ರೆಯನ್ನು ಅಂತ್ಯಗೊಳಿಸುತ್ತೇವೆ ಎಂದು ಹಠ ತೊಟ್ಟಿದ್ದ ಕಾಂಗ್ರೆಸ್ ಈಗ ಧರ್ಮಸಂಕಟಕ್ಕೆ ಸಿಲುಕಿದ್ದು, ಪ್ರತಿಭಟನೆ ಮುಂದುವರಿಸಬೇಕೇ? ಬೇಡವೇ ಎಂಬುದರ ಬಗ್ಗೆ ಕಾಂಗ್ರೆಸ್‍ನಲ್ಲಿ ಗೊಂದಲ ಮೂಡಿದೆ.
Advertisement
ರಾಜ್ಯದಲ್ಲಿ ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡು 4 ದಿನ ಕಂಪ್ಲೀಟ್ ಮಾಡಿದೆ. ಆದರೆ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿ ದಿನ 10 ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗುತ್ತಿದೆ. ಇದನ್ನೂ ಓದಿ: ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು
ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲದಿದ್ದರೆ ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಬುಧವಾರ ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಬುಧವಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ.