ಬೆಂಗಳೂರು: ಇಬ್ಬರು ಶಾಸಕರ ರಾಜೀನಾಮೆ ಬೆನ್ನಲ್ಲೇ ಅಮೆರಿಕ ಪ್ರವಾಸದಲ್ಲಿರುವ ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ.
ಸೋಮವಾರ ರಾತ್ರಿ ಮುಖ್ಯಮಂತ್ರಿಗೆ ಕರೆ ಮಾಡಿ, ಆದಷ್ಟು ಬೇಗ ಬೆಂಗಳೂರಿಗೆ ವಾಪಸ್ಸಾಗಿ ಪರಿಸ್ಥಿತಿ ನಿಭಾಯಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮತ್ತಷ್ಟು ಶಾಸಕರ ರಾಜೀನಾಮೆ ತಡೆಯಬೇಕಿದೆ ಬೇಗ ಬನ್ನಿ ಎಂದು ಹೇಳಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಲಭ್ಯವಾಗಿದೆ.
Advertisement
Advertisement
ಸೋಮವಾರ ಸಿದ್ದರಾಮಯ್ಯ ಅವರು ಡಿಸಿಎಂ ಪರಮೇಶ್ವರ್, ಸಚಿವ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆ ಮಾತುಕತೆ ನಡೆಸಿದ್ದರು. ಅದಾದ ಬಳಿಕ ಸಿದ್ದರಾಮಯ್ಯ ರಾತ್ರಿ ಮುಖ್ಯಮಂತ್ರಿ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ.
Advertisement
ಅಮೇರಿಕದ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದಿದೆ.
ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ #BJP ಯ ಪ್ರಯತ್ನ 'ನಿರಂತರ ಹಗಲುಗನಸು'
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 1, 2019
Advertisement
ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ ವಿಚಾರ ತಿಳಿದು ಸಿಎಂ, ಅಮೆರಿಕದ ನ್ಯೂಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದಿದೆ. ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ‘ನಿರಂತರ ಹಗಲುಗನಸು’ ಎಂದು ಟ್ವೀಟ್ ಮಾಡಿದ್ದರು.