ಬೆಂಗಳೂರು: ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ಅನುಮತಿ ಸಿಗದ ಕಾರಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಾವಣಗೆರೆ ಪ್ರವಾಸವನ್ನು ರದ್ದು ಮಾಡಿದ್ದಾರೆ.
ದಾವಣಗೆರೆಯಲ್ಲಿ ಬೆಳಗ್ಗಿನಿಂದಲೇ ಮಳೆ, ದಟ್ಟ ಮೋಡ ಕವಿದ ವಾತಾವರಣ ಇರುವುದರಿಂದ ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ಅವಕಾಶ ಸಿಕ್ಕಿಲ್ಲ. ಮಳೆ-ಮೋಡದಿಂದಾಗಿ ಸಿದ್ದರಾಮಯ್ಯ ದಾವಣಗೆರೆ ಪ್ರವಾಸ ರದ್ದಾಗಿದೆ.
Advertisement
Advertisement
ಸಿದ್ದರಾಮಯ್ಯನವರು ಜಕ್ಕೂರು ಏರೋಡ್ರಂ ನಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಬೇಕಿತ್ತು. ಆದರೆ ತೀವ್ರ ಮೋಡ ಕವಿದ ವಾತಾವರಣ ಹಾಗೂ ಮಳೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ದಾವಣೆಗೆರೆಯಲ್ಲಿ ನಡೆಯಲಿರುವ ಜಾತಿ ಗಣತಿ ಅನುಷ್ಠಾನದ ಹೋರಾಟಕ್ಕೆ ಸಿದ್ದರಾಮಯ್ಯ ಗೈರಾಗುತ್ತಿದ್ದಾರೆ. ಕೊನೆ ಕ್ಷಣದಲ್ಲಿ ದಾವಣಗೆರೆ ಪ್ರವಾಸವನ್ನು ರದ್ದು ಮಾಡಿದ್ದಾರೆ. ಇದನ್ನೂ ಓದಿ: ಹಾನಗಲ್ ಉಪಚುನಾವಣೆ- ಟಿಕೆಟ್‍ಗಾಗಿ ಬಿಜೆಪಿ, ಕಾಂಗ್ರೆಸ್ ಆಕಾಂಕ್ಷಿಗಳು ತೆರೆಮರೆಯ ಕಸರತ್ತು
Advertisement
Advertisement
ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜಾತಿವಾರು ಸಮೀಕ್ಷೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಬೆಲೆ ಏರಿಕೆ ವಿರೋಧಿಸಿ ಕಿಸಾನ್ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣ, ದೇವರಾಜ್ ಅರಸ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಹೋರಾಟದಲ್ಲಿ ಭಾಗವಹಿಸಬೇಕಿತ್ತು. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ರಣ ಮಳೆ- ಪ್ರವಾಹ ಪರಿಸ್ಥಿತಿ
ಧರಣಿಯಲ್ಲಿ ಎಚ್.ಎಂ.ರೇವಣ್ಣ, ವಿ.ಆರ್.ಸುದರ್ಶನ್, ಕೆ.ರಮೇಶ್ ಕುಮಾರ್, ವಿ.ಎಸ್.ಉಗ್ರಪ್ಪ, ಲಕ್ಷ್ಮಿ ನಾರಾಯಣ್, ಸಿ.ಎಸ್.ದ್ವಾರಕನಾಥ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ 10 ಸಾವಿರ ಮಂದಿ ಭಾಗಿಯಾಗುವ ಸಾಧ್ಯತೆ ಇದೆ. ಇಡೀ ದಿನ ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿತ್ತು. ಆದರೆ ಇದೀಗ ಪ್ರವಾಸವನ್ನೇ ಸಿದ್ದರಾಮಯ್ಯ ರದ್ದು ಮಾಡಿದ್ದಾರೆ.