Bengaluru City

ತಾಲಿಬಾನಿ, ಐಎಸ್‍ಐ ಉಗ್ರರನ್ನು ಬಿಟ್ಟು ಭಾರತದಲ್ಲಿ ದಾಳಿಯಾಗುವಂತೆ ಮಾಡಿದ್ದು ಯಾರು – ಸಿಟಿ ರವಿ ಪ್ರಶ್ನೆ

Published

on

Share this

– ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯ
– ಸಂಘದ ಶಾಖೆಗೆ ಬಂದು ನಂತರ ಆರ್‍ಎಸ್‍ಎಸ್ ಬಗ್ಗೆ ಮಾತನಾಡಿ

ಬೆಂಗಳೂರು: ತಾಲಿಬಾನಿಗಳನ್ನು, ಐಎಸ್‍ಐ ಉಗ್ರರನ್ನು ಭಾರತದೊಳಕ್ಕೆ ನುಸುಳಲು ಬಿಟ್ಟು ಮುಂಬೈ ಹಾಗೂ ಇನ್ನಿತರ ಭಾಗಗಳಲ್ಲಿ ಉಗ್ರರ ದಾಳಿಯಾಗುವಂತೆ ಮಾಡಿದ್ದು ಎಂದು ಪ್ರಶ್ನಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.

ಆರ್‍ಎಸ್‍ಎಸ್, ಬಿಜೆಪಿಯನ್ನು ತಾಲಿಬಾನಿಗೆ ಹೋಲಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಡುವಿನ ಟ್ವೀಟ್ ವಾರ್ ಮುಂದುವರಿದಿದ್ದು, ಇದೀಗ ಸರಣಿ ಟ್ವೀಟ್ ಮಾಡುವ ಮೂಲಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:  ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ಅನುಮತಿ ಇಲ್ಲ- ಸಿದ್ದರಾಮಯ್ಯ ದಾವಣಗೆರೆ ಪ್ರವಾಸ ರದ್ದು

ಸಿದ್ದರಾಮಯ್ಯನವರೇ, ಆರ್‍ಎಸ್‍ಎಸ್ ಅಂದರೇನು ಎಂಬುದು ನಿಮ್ಮ ಘನ ಹೃದಯಕ್ಕೆ ಅರ್ಥವಾಗಬೇಕಾದರೆ ಮೊದಲು ನೀವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗೆ ಬರಬೇಕು. ಆರ್‍ಎಸ್‍ಎಸ್ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು. ನಿಮ್ಮ ಪಕ್ಷದಲ್ಲೇ ಕೇಂದ್ರದಲ್ಲಿ ವಿತ್ತ ಸಚಿವರಾಗಿ, 40 ವರ್ಷ ರಾಜಕೀಯ ಜೀವನದಲ್ಲಿ ಇದ್ದು, 13ನೇ ರಾಷ್ಟ್ರಪತಿಯಾಗಿ ನಿಧನರಾದ ಪ್ರಣವ್ ಮುಖರ್ಜಿ ಅವರ ಜೀವನ ಚರಿತ್ರೆಯನ್ನು ಒಮ್ಮೆ ಓದಿ ಸಿದ್ದರಾಮಯ್ಯ ನವರೇ. ಆರ್‍ಎಸ್‍ಎಸ್ ಅಂದರೇನು ಎಂಬುದನ್ನು ಅವರು ವಿವರಿಸಿದ್ದಾರೆ. ಆಗಲಾದರೂ ಆರ್‍ಎಸ್‍ಎಸ್ ಬಗ್ಗೆ ನಿಮ್ಮ ಧೋರಣೆ ಬದಲಾಗಬಹುದು ಎಂದು ಕಿಡಿಕಾರಿದ್ದಾರೆ.

ಯುದ್ಧ, ಪ್ರವಾಹಗಳು ಈ ದೇಶದ ಯಾವುದೇ ಮೂಲೆಯಲ್ಲಿ ಘಟಿಸಿದಾಗ ಅಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರು ಮೊದಲು ಹಾಜರಾಗಿ ಸಂಕಷ್ಟದಲ್ಲಿರುವ ಜನರಿಗೆ ಸಾಹಾಯದ ಹಸ್ತವನ್ನು ಚಾಚುತ್ತಾರೆ. ಸ್ವಯಂಸೇವಕರು ತಮ್ಮ ಪ್ರಾಣವನ್ನು ಪಣವಾಗಿಟ್ಟು ರಕ್ಷಣೆ ಮಾಡುತ್ತಾರೆ. ಸಂಘದ ನಿಸ್ವಾರ್ಥ ಸೇವೆಯನ್ನು ತಾಲಿಬಾನಿಗೆ ಹೋಲಿಸಲು ನಿಮಗೆ ಮನಸ್ಸಾದರೂ ಹೇಗೆ ಬಂತು? ಇದನ್ನೂ ಓದಿ: ಹಾನಗಲ್ ಉಪಚುನಾವಣೆ- ಟಿಕೆಟ್‍ಗಾಗಿ ಬಿಜೆಪಿ, ಕಾಂಗ್ರೆಸ್ ಆಕಾಂಕ್ಷಿಗಳು ತೆರೆಮರೆಯ ಕಸರತ್ತು

ಈ ದೇಶ ಜಾತ್ಯಾತೀತ ತತ್ವಗಳ ಮೇಲೆ ನಿಂತಿದೆ, ಸಂಘ ಯಾರನ್ನೂ ಗುತ್ತಿಗೆ ಪಡೆದಿಲ್ಲ. ನಿಮ್ಮ ಪಕ್ಷದ ಉಳಿಗಮಾನ್ಯ ಪದ್ಧತಿಯನ್ನು ನೀವು ತೋರಿಸಿಕೊಟ್ಟಿದ್ದೀರಿ. ದೇಶ ಸೇವೆ ಮಾಡಬೇಕೆಂದರೆ ರಾಜಕೀಯಕ್ಕೆ ಬರಬೇಕೆಂದಿಲ್ಲ ಸಿದ್ದರಾಮಯ್ಯನವರೇ. ಬಲಹೀನರಿಗೆ ಬೆಳಕಾಗಲು ಸಂಘ ಕೊಟ್ಟ ಕೊಡುಗೆಗಳನ್ನು ನಾವು ತಿಳಿಸುತ್ತೇವೆ, ಒಮ್ಮೆ ಸಂಘದ ಶಾಖೆಗೆ ಬನ್ನಿ. ಬಿಜೆಪಿ ಮತ್ತು ಆರ್‍ಎಸ್‍ಎಸ್‍ಗೂ ಏನು ಸಂಬಂಧ ಎಂದು ಕೇಳಿದ್ದೀರಲ್ಲವೇ? ತಾಯಿ ಮತ್ತು ಮಕ್ಕಳ ಸಂಬಂಧ. ಅದು ಕಾರ್ಖಾನೆಯಲ್ಲ. ದೇಶವನ್ನು ಸಂಘಟಿಸಲು ಮತ್ತು ಗಟ್ಟಿಯಾಗಿ ಭಾರತವನ್ನು ಕಟ್ಟಲು ಕಾರ್ಯಕರ್ತರನ್ನು ರೂಪಿಸುವ ಶಿಸ್ತುಬದ್ಧ ಗರಡಿ ಮನೆ ಎಂದು ವಿವರಿಸಿದ್ದಾರೆ.

ನೀವು ಹತ್ತಿರಕ್ಕೆ ಬರದೇ ಸಂಘವನ್ನು ನೋಡುವುದು ಅಂಧ ಆನೆಯನ್ನು ಮುಟ್ಟಿ ವರ್ಣಿಸಿದಂತಾಗುತ್ತದೆ. ಹೀಗಾಗಿ ನೀವು ಸಂಘದ ಶಾಖೆಗೆ ಬನ್ನಿ ಸಂಘದ ಬಾಗಿಲು ನಿಮಗಾಗಿ ಸದಾ ತೆರೆದಿರುತ್ತದೆ. ಆರ್‍ಎಸ್‍ಎಸ್ ಶಾಖೆಗೆ ಬನ್ನಿ ಎಂದು ಸಿದ್ದರಾಮಯ್ಯಗೆ ಸಿಟಿ ರವಿ ಆಹ್ವಾನ ಕೊಟ್ಟಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ರಣ ಮಳೆ- ಪ್ರವಾಹ ಪರಿಸ್ಥಿತಿ

ನಿಮ್ಮ ಪಕ್ಷದ ಆಡಳಿತದಲ್ಲಿ ಅಲ್ಲವೇ ಸಿದ್ದರಾಮಯ್ಯನವರೇ, ತಾಲಿಬಾನಿಗಳನ್ನು, ಐಎಸ್‍ಐ ಉಗ್ರರನ್ನು ಭಾರತದೊಳಕ್ಕೆ ನುಸುಳಲು ಬಿಟ್ಟು ಮುಂಬೈ ಹಾಗೂ ಇನ್ನಿತರ ಭಾಗಗಳಲ್ಲಿ ಉಗ್ರರ ದಾಳಿಯಾಗುವಂತೆ ಮಾಡಿದ್ದು? ನೂರಾರು ಮುಗ್ದರ ಸಾವಿನ ಭಾರ ನಿಮ್ಮ ಪಕ್ಷದ ಮೇಲಿರುವುದನ್ನು ಮರೆತುಬಿಟ್ಟರಾ ಸಿದ್ದರಾಮಯ್ಯನವರೇ? ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ. ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ. ಏನಂತೀರಿ ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

ಕೊನೆಯದಾಗಿ, ನಾನೇನು ಎಂಬುದು ಚಿಕ್ಕಮಗಳೂರಿನ ನನ್ನ ಜನರಿಗೆ, ನನ್ನ ಜೊತೆ ಇರುವ ಕಾರ್ಯಕರ್ತರಿಗೆ ಗೊತ್ತು. ಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು ಎಂದು ಮೈಸೂರಿನನಾಗರೀಕರು ಈಗಲೂ ಮರೆತಿರಲಿಕ್ಕಿಲ್ಲ. ಒಮ್ಮೆ ಕೇಳಿ ನೋಡಿ ಸಿದ್ದರಾಮಯ್ಯನವರೇ ಎಂದು ಟಾಂಗ್ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement