ಬೆಂಗಳೂರು: ದೆಹಲಿ ಭೇಟಿ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಿದ್ದರಾಮೋತ್ಸವಕ್ಕೆ ಆಹ್ವಾನಿಸಲು ಮಾಜಿ ಸಿಎಂ ಸಿದ್ದರಾಮಯ್ಯ ತೀರ್ಮಾನ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಎರಡು ದಿನದ ದೆಹಲಿ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ವೇಳೆ ಅವರು ರಾಹುಲ್ ಗಾಂಧಿ ಅವರನ್ನು ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಲಿದ್ದಾರೆ. ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಡ್ರಗ್ಸ್ ವಶ – ಆರೋಪಿಗಳ ಬಗ್ಗೆ ಸಿಕ್ಕಿಲ್ಲ ಸುಳಿವು
Advertisement
Advertisement
ಏನಿದು ಕಾರ್ಯಕ್ರಮ?
ಆಗಸ್ಟ್ 12 ರಂದು ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬುತ್ತೆ. ಅದಕ್ಕೆ ಸಿದ್ದು ಬೆಂಬಲಿಗರು ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಹೆಸರಿನಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರನ್ನು ಕರೆಯಬೇಕು ಎಂದು ನಿರ್ಧರಿಸಿದ್ದಾರೆ.
Advertisement
ಮುಸುಕಿನ ಗುದ್ದಾಟ
5 ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸಿ ಸಿದ್ದರಾಮೋತ್ಸವ ನಡೆಸಲು ಸಿದ್ದು ಬೆಂಬಲಿಗರು ತೀರ್ಮಾನ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್ ನಾಯಕರ ಆಹ್ವಾನದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಪಕ್ಷದ ಹಿರಿಯ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು.
Advertisement
ಸಿದ್ದರಾಮಯ್ಯ ಬೆಂಬಲಿಗರು ಸಿದ್ದರಾಮೋತ್ಸವದಲ್ಲಿ ಸಿದ್ದರಾಮಯ್ಯ ಅವರು ಮಾತ್ರ ಸೆಂಟರ್ ಆಫ್ ಅಟ್ರಾಕ್ಷನ್ ಅಗಬೇಕು ಎಂದು ಪಟ್ಟುಹಿಡಿದಿದ್ದರು. ಆದರೆ ಹಿರಿಯ ಕೈ ನಾಯಕರು ಹೈಕಮಾಂಡ್ ನಾಯಕರನ್ನು ಆಹ್ವಾನಿಸಬೇಕು ಎಂದು ಒತ್ತಾಯಿಸುತ್ತಿದ್ದರು. ಇದನ್ನೂ ಓದಿ: ಪದ್ಮಭೂಷಣ ವಿಜೇತ, ಬಿಲಿಯನೇರ್ ಪಲ್ಲೊಂಜಿ ಮಿಸ್ತ್ರಿ ನಿಧನ
ಈಗ ಸಿದ್ದರಾಮಯ್ಯ ಅವರು ತಮ್ಮ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್‍ಗೆ ತಾವೇ ಆಹ್ವಾನ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್ ನಾಯಕರನ್ನ ವೇದಿಕೆ ಮೇಲೆ ಕೂರಿಸಿಕೊಂಡೆ ತಮ್ಮ ಶಕ್ತಿ ಪ್ರದರ್ಶನ ನಡೆಸಲು ಸಿದ್ದರಾಮಯ್ಯ ಅವರು ಯೋಜನೆ ಮಾಡಿಕೊಂಡಿದ್ದಾರೆ. ಅದಕ್ಕೆ ಅವರು ಇಂದು ಅಥವಾ ನಾಳೆ ರಾಹುಲ್ ಗಾಂಧಿಗೆ ಅಧಿಕೃತ ಆಹ್ವಾನ ನೀಡಲಿದ್ದಾರೆ.