ಮೈಸೂರು: ಹೆಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕಿಂದು (Kabini Reservoir) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು.
ಬಾಗಿನ ಸಮರ್ಪಿಸಿ ನಾಡಿನ ಒಳಿತಿಗಾಗಿ ಹಿರಿಯ ನಾಯಕರು ಪ್ರಾರ್ಥನೆ ಸಲ್ಲಿಸಿದರು. ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಕಾಂಗ್ರೆಸ್‌ನ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಎಸ್‍ಐಟಿ ರಚಿಸಿದ ಸರ್ಕಾರ
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ದೆಹಲಿ ಭೇಟಿ ವಿಚಾರ ಪ್ರಸ್ತಾಪಿಸಿದರು. ಸಿಎಂಗೆ ಹೇಳಿಯೇ ನಿನ್ನೆ ದೆಹಲಿಗೆ ಹೋಗಿದ್ದೆ. ನಾನು ನನ್ನ ವೈಯುಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ. ಯಾವ ರಾಜಕೀಯಕ್ಕೂ ಹೋಗಿರಲಿಲ್ಲ. ದೆಹಲಿಯಲ್ಲಿ ವಕೀಲರ ಜೊತೆ ಸಮಯ ನಿಗದಿಯಾಗಿತ್ತು. ಅದಕ್ಕಾಗಿ ಹೋಗಿ ಬಂದೆ. ಅದನ್ನು ಮುಗಿಸಿಕೊಂಡು ರಾತ್ರಿಯೇ ವಾಪಸ್ ಬಂದಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಯಾರೀ ಕೇರಳ ನರ್ಸ್ ನಿಮಿಷಾ ಪ್ರಿಯಾ; ಯೆಮನ್‌ನಲ್ಲಿ ಗಲ್ಲುಶಿಕ್ಷೆಯೇ ಯಾಕೆ – ಏನಿದು ಸ್ಟೋರಿ!?
ಬಿಜೆಪಿಯವರಿಗೆ ನನ್ನ ಬಗ್ಗೆ ಪ್ರೀತಿ ಜಾಸ್ತಿ. ಮೋರ್ ಸ್ಟ್ರಾಂಗ್ ಮೋರ್ ಲವ್ ಆಲ್ಸೋ. ನಿನ್ನೆ ನನ್ನ ಬೆಂಗವಾಲು ವಾಹನ ಪಲ್ಟಿ ಆಯ್ತು. ಬಹಳ ಸೀರಿಯಸ್ ಅಪಘಾತ ಆಯ್ತು. ಚಾಮುಂಡೇಶ್ವರಿ ದೇವಿ ಕೃಪೆಯಿಂದ ದೊಡ್ಡ ಅನಾಹುತ ಆಗಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಪಂಚಮಸಾಲಿ ಶ್ರೀ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಾಯಕರು