ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಅಭಿಮಾನಿಗಳು ಮುಂದಿನ ಸಿಎಂ ಎಂಬ ಫ್ಲೆಕ್ಸ್‌ಗಳನ್ನು ಹಾಕಿ ಸಿದ್ಧತೆಯನ್ನು ನಡೆಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದುಕೊಂಡು ಅಧಿಕಾರ ಚುಕ್ಕಾಣಿ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆಯನ್ನು ನಡೆಸಿದೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರ ನಡುವೆ ಸಿಎಂ ಕೂಗು ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಡಿಕೆಶಿ ಅಭಿಮಾನಿಗಳು ಡಿಕೆಶಿ ನಿವಾಸದ ಮುಂದೆ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಹಾಕಿದ್ದಾರೆ. ಅದೇ ರೀತಿ ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದು ನಿವಾಸದ ಮುಂದೆ ಮುಖ್ಯಮಂತ್ರಿ ಹಾಕಿ ಘೋಷಣೆಯನ್ನು ಕೂಗಿದ್ದಾರೆ.
Advertisement
Advertisement
ಈಗಾಗಲೇ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಿವಾಸದ ಬಳಿ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಹೆಚ್ಚಿನ ಪೊಲೀಸರ ನಿಯೋಜನೆ ಹಾಗೂ ಮನೆಯ ಸಮೀಪ ಬ್ಯಾರಿಕೇಡ್‍ಗಳನ್ನು ಹಾಕಿದ್ದಾರೆ.
Advertisement
ಒಟ್ಟಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರ ನಡುವೆ ಹೈಕಮಾಂಡ್ ಒಗ್ಗಟ್ಟಿನ ಮಂತ್ರ ಪಠಿಸಿದೆ. ಭಾರತ್ ಜೋಡೋ ಯಾತ್ರೆ ವೇಳೆಯಲ್ಲೂ ರಾಹುಲ್ ಗಾಂಧಿಯವರು ಇಬ್ಬರ ಕೈ ಕೈ ಹಿಡಿಸಿದ್ದರು. ಚುನಾವಣೆ ಮುಗಿಯುವ ತನಕವೂ ಒಗ್ಗಟ್ಟು ಪ್ರದರ್ಶನ ಮಾಡಿರುವ ಡಿಕೆಶಿ, ಸಿದ್ದರಾಮಯ್ಯ ಚುನಾವಣೆ ದಿನವೂ ಒಟ್ಟಿಗೆ ಪೂಜೆ ಮಾಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇದನ್ನೂ ಓದಿ: ರಾಜಕೀಯದಿಂದ ನಿವೃತ್ತಿ ಘೋಷಿಸಿದ ರೇಣುಕಾಚಾರ್ಯ
Advertisement
ಆದರೆ ಇದೀಗ ಅಧಿಕಾರ ಸಿಕ್ಕಾಯ್ತು, ಇಬ್ಬರೂ ಸಿಎಂ ಕುರ್ಚಿಯ ಕನಸು ಕಂಡಿದ್ದಾರೆ. ಇದರಲ್ಲಿ ಯಾರಾದ್ರೂ ಒಬ್ಬರು ತ್ಯಾಗ ಮಾಡಲೇಬೇಕಾದ ಅನಿವಾರ್ಯತೆ ಇದೆ. ಇನ್ನೊಂದೆಡೆ ಇಬ್ಬರು ನಾಯಕರನ್ನ ಕೂರಿಸಿ 50:50 ಸೂತ್ರವನ್ನ ಹೈಕಮಾಂಡ್ ಮುಂದಿಡುವ ಸಾಧ್ಯತೆ ಇದ್ದು, ಆ ಸೂತ್ರದಲ್ಲಿ ಮೊದಲು ಸಿಎಂ ಆಗೋರು ಯಾರು? ಯಾರು ಯಾರಿಗೆ ಸೀಟ್ ಬಿಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ರಸ್ತೆಯಲ್ಲೇ ಜನತೆಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಕೈ ಅಭ್ಯರ್ಥಿ