Connect with us

Bengaluru City

ಗಾಂಧಿ ಕುಟುಂಬಕ್ಕೆ ನಿಷ್ಠೆ ತೋರಿದ ರಾಜ್ಯ ಕಾಂಗ್ರೆಸ್ ನಾಯಕರು

Published

on

– ರಾಹುಲ್ ಗಾಂಧಿ ನಾಯಕತ್ವದತ್ತ ‘ಕೈ’ ನಾಯಕ ಒಲವು
– 22 ವರ್ಷದ ಬಳಿಕ ಗಾಂಧಿ ಕುಟುಂಬದ ಶಕೆ ಅಂತ್ಯ ಆಗುತ್ತಾ?

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಅಧ್ಯಕ್ಷರ ಬದಲಾವಣೆ ಕೂಗು ಜೋರಾಗಿ ಸದ್ದು ಮಾಡುತ್ತಿದೆ. ಭವಿಷ್ಯದ ದೃಷ್ಟಿಯಿಂದ ನಾಯಕತ್ವ ಬದಲಾಗಲೇ ಬೇಕು ಎಂದು ಹಿರಿಯ ನಾಯಕರು ಪಟ್ಟು ಹಿಡಿದಿದ್ದಾರೆ. ಇತ್ತ ಕರ್ನಾಟಕದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ನಾಯಕತ್ವದತ್ತ ಬ್ಯಾಟ್ ಬೀಸಿದ್ದಾರೆ.

ಅಧ್ಯಕ್ಷ ಬದಲಾವಣೆ ಸಂಬಂಧ ಇಂದು ಮಹತ್ವದ ಸಭೆ ನಡೆಯಲಿದೆ. ಇದರ ನಡುವೆಯೇ ಟ್ವೀಟ್ ಮಾಡಿರುವ ಸಿದ್ದರಾಮ್ಯಯ ಅವರು, ಸೋನಿಯಾ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಮುನ್ನಡೆಸುತ್ತಾರೆ ಎಂಬ ವಿಶ್ವಾಸವಿದೆ. ಇಲ್ಲವಾದಲ್ಲಿ ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕು ಎಂಬುವುದು ನಮ್ಮ ಆಶಯ ಎಂದು ಹೇಳಿದ್ದಾರೆ.

ಇತ್ತ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಡಿಕೆ ಶಿವಕುಮಾರ್, ನೀವೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರಿಯಿರಿ. ಒಂದೊಮ್ಮೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾದರೆ ಕೂಡಲೇ ರಾಹುಲ್ ಗಾಂಧಿ ಅವರಿಗೆ ಅಧಿಕಾರ ವಹಿಸಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತು ಟ್ವೀಟ್ ಮಾಡಿದ್ದು, ಕಳೆದ ಇಂದು ಶತಮಾನದಿಂದ ನೆಹರೂ-ಗಾಂಧಿ ಕುಟುಂಬ ಮಾಡಿದ ತ್ಯಾಗ ಹಾಗೂ ಕೊಡುಗೆಗಳನ್ನು ಪಕ್ಷವು ಮರೆಯಬಾರದು. ಅವರು ಭಾರತದ ಕಲ್ಪನೆಗಾಗಿ ಬಂಡೆಯಂತೆನಿಂತಿದ್ದಾರೆ. ನಾವು ಸಮಾನ ಸಮಾನ ಸಮಾಜ ಮತ್ತು ಬಲವಾದ ಪ್ರಜಾಪ್ರಭುತ್ವ ನಿರ್ಮಿಸಿದ್ದೇವೆ ಎಂದು ಖಚಿತಪಡಿಸಿದ್ದೇವೆ. 2004ರಲ್ಲಿ ಮತ್ತು 2009ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸೋನಿಯಾ ಮಾಡಿರುವ ಶ್ರಮ ಮರೆಯಬಾರದು. ಸದ್ಯದ ಬಿಕ್ಕಟ್ಟಿನ ಸಮಯದಲ್ಲಿ ಎಲ್ಲಾ ನಾಯಕರು, ಕಾರ್ಯಕರ್ತರು, ಸೋನಿಯಾ ಗಾಂಧಿ ಅವರು ನಿಂತು ಪಕ್ಷವನ್ನು ಬಲಪಡಿಸಬೇಕು. ಅವರಿಗೆ ಅಧ್ಯಕ್ಷರಾಗಿ ಮುಂದುವರಿಯಲು ಇಷ್ಟವಿಲ್ಲದಿದ್ದರೆ ರಾಹುಲ್ ಗಾಂಧಿ ಅವರಿಗೆ ತಕ್ಷಣವೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕು. ಆ ಮೂಲಕ ಎಲ್ಲಾ ಅನಿಶ್ಚಿತತೆಗಳಿಗೆ ವಿರಾಮ ಇಡಬೇಕು ಎಂದು ಮನವಿ ಮಾಡಿದ್ದಾರೆ.

ಸೋನಿಯಾ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ ಸಿಡಬ್ಲ್ಯುಸಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಅಧ್ಯಕ್ಷರು ಯಾರಾಗಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿದ್ದು, ಹೊಸ ಅಧ್ಯಕ್ಷರ ನೇಮಕದ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಆದರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ಏರಲು ನಿರಾಕರಿಸಿರುವ ಹಿನ್ನಲೆ ಈ ಬಾರಿ ಗಾಂಧಿ ಕುಟುಂಬೇತರ ವ್ಯಕ್ತಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಏರುವ ಸಾಧ್ಯತೆಗಳಿವೆ. ಈ ಪಟ್ಟಿಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಮಲ್ಲಿಕಾರ್ಜುನ ಖರ್ಗೆ, ಮುಕುಲ್ ವಾಸ್ನಿಕ್, ಶಶಿ ತರೂರ್, ಸುಶೀಲ್ ಕುಮಾರ್ ಸಿಂಧೆ ಸೇರಿದಂತೆ ಹಲವು ಹೆಸರುಗಳು ಚಾಲ್ತಿಯಲ್ಲಿದೆ.

Click to comment

Leave a Reply

Your email address will not be published. Required fields are marked *