ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ನಡೆದ ಮೊಟ್ಟೆ ವಿವಾದದ ಬಳಿಕ ಇದೀಗ ಇನ್ನೊಂದು ವಿವಾದ ಬೆನ್ನತ್ತಿದೆ. ಸಿದ್ದರಾಮಯ್ಯ ಮಧ್ಯಾಹ್ನ ನಾಟಿ ಕೋಳಿ ಸಾರು ಊಟ ಮಾಡಿದ್ದರು ಬಳಿಕ ಸಂಜೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು ಇದು ಇದೀಗ ವಿವಾದಕ್ಕೆ ಕಾರಣವಾಗಿದೆ.
Advertisement
ಮಡಿಕೇರಿ ಭೇಟಿ ವೇಳೆ ಸಿದ್ದರಾಮಯ್ಯರಿಗೆ ನಾಟಿ ಕೋಳಿ ಸಾರು, ರಾಗಿ ಮುದ್ದೆ, ಕಣಿಲೆ, ಅನ್ನ ತರಕಾರಿ ಸಾರು ಊಟದ ವ್ಯವಸ್ಥೆಯನ್ನು ಮಾಜಿ ಎಂಎಲ್‍ಸಿ ವೀಣಾ ಅಚ್ಚಯ್ಯ ಮಾಡಿದ್ದರು. ಮಧ್ಯಾಹ್ನ ನಾಟಿ ಕೋಳಿ ಸಾರಿನಲ್ಲಿ ಊಟ ಮಾಡಿದ್ದ ಸಿದ್ದರಾಮಯ್ಯ ಸಂಜೆ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದನ್ನೂ ಓದಿ: ನಾನು ಕಾಂಗ್ರೆಸ್ ಕಾರ್ಯಕರ್ತ – ಮೊಟ್ಟೆ ಎಸೆದಿದ್ದಕ್ಕೆ ಸಂಪತ್ ಕೊಟ್ಟ ಸ್ಪಷ್ಟನೆ ಏನು..?
Advertisement
Advertisement
ಇದೀಗ ನಾಟಿ ಕೋಳಿ ತಿಂದು ಸಂಜೆ ದೇವಸ್ಥಾನಕ್ಕೆ ತೆರಳಿರುವ ಸಿದ್ದರಾಮಯ್ಯರ ಫೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಹಿಂದೂ ಸಂಘನೆಗಳು ಮತ್ತು ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶ ಕೇಳಿಬರುತ್ತಿದೆ. ಈ ಹಿಂದೆ ಸಿದ್ದರಾಮಯ್ಯ ಮಂಗಳೂರು ಭೇಟಿ ವೇಳೆ ಧರ್ಮಸ್ಥಳಕ್ಕೆ ಮೀನು, ಮಾಂಸ ತಿಂದು ಹೋಗಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ಮೊಟ್ಟೆ ಕಾಳಗ: ಆ.26ಕ್ಕೆ ಮಡಿಕೇರಿಯಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಕೋಳಿ ಜಗಳ!
Advertisement
Live Tv
[brid partner=56869869 player=32851 video=960834 autoplay=true]