ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA), ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಸುಪ್ರೀಂ ಕೋರ್ಟ್ (Supreme Court) ಮುಂದೆ ವಾಸ್ತವಾಂಶ ಇಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬೇಸರ ವ್ಯಕ್ತಪಡಿಸಿದರು.
Advertisement
ಅಕ್ಟೋಬರ್ 15ರ ವರೆಗೆ ನಿತ್ಯ 3,000 ಕ್ಯೂಸೆಕ್ ನೀರನ್ನ (Cauvery Water) ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ನಾವು ನಮ್ಮ ಎಲ್ಲ ವಾಸ್ತವ ಅಂಶಗಳನ್ನ ಸಿಡಬ್ಲ್ಯೂಆರ್‌ಸಿ, ಸಿಡಬ್ಲ್ಯೂಎಂಎ ಹಾಗೂ ಸುಪ್ರೀಂ ಕೋರ್ಟ್ ಮುಂದಿಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಗುತ್ತಿಲ್ಲ. ಇಂದಿನ ಸಭೆಯ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಹರಿಸಿ – ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ
Advertisement
Advertisement
ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ. ಆದೇಶದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡ್ತೇವೆ. ಈ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡಬಹುದಾ? ಅಂತ ಕಾನೂನು ತಜ್ಞರ ಜೊತೆ ಮಾತನಾಡಿದ್ದೇನೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಸಭೆಯನ್ನೂ ಕರೆದಿದ್ದೇನೆ. ಅವರೊಂದಿಗೂ ಮಾತನಾಡಿ ಮುಂದೇನು ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಕಾವೇರಿಗಾಗಿ ಕೈಕೊಯ್ದುಕೊಂಡು ರಕ್ತ ಚೆಲ್ಲಿದ ಹೋರಾಟಗಾರ; ಸಿದ್ದು, ಡಿಕೆಶಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ
Advertisement
ಇದೇ ವೇಳೆ ಸಿಂಗಾಪುರಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಕೊಡಲಿಲ್ಲ. ನಾವು ದುಡ್ಡು ಕೊಡ್ತೀವಿ, ಅಕ್ಕಿ ಕೊಡಿ ಅಂದರೂ ಕೇಂದ್ರ ಸರ್ಕಾರ ಕೊಡಲಿಲ್ಲ. ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡ್ತಿದೆ. ಬಡವರ ಕಾರ್ಯಕ್ರಮಕ್ಕೆ ಅಕ್ಕಿ ಕೊಡಲು ಬಿಜೆಪಿಗೆ ಆಸಕ್ತಿ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.
Web Stories