– ಮೊಮ್ಮಗನಿಗೆ ರಾಜಕೀಯ ಆಸಕ್ತಿ ಇರುವುದು ತಾತನಾಗಿ ನನಗೆ ಖುಷಿ ಇದೆ: ಸಿದ್ದರಾಮಯ್ಯ
– ಜ್ವರದಿಂದ ಬಳಲುತ್ತಿರುವ ಸಿದ್ದರಾಮಯ್ಯ
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ ಎಂಟ್ರಿ ಆಗಿದ್ದು, ಮೊಮ್ಮಗನಿಗೆ ಈಗಾಗಲೇ ರಾಜಕೀಯ ಟ್ರೈನಿಂಗ್ ಅನ್ನು ಸಿದ್ದರಾಮಯ್ಯ (Siddaramaiah) ಆರಂಭಿಸಿದ್ದಾರೆ.
ಮಂಗಳವಾರ ದಿ. ರಾಕೇಶ್ ಸಿದ್ದರಾಮಯ್ಯ ಪುತ್ರ ಧವನ್ ರಾಕೇಶ್ ಅವರು ಸಿದ್ದರಾಮಯ್ಯ ಅವರ ಜೊತೆಗೆ ಬೆಂಗಳೂರಿನಿಂದ (Bengaluru) ಮೈಸೂರಿಗೆ (Mysuru) ಬಂದಿದ್ದಾರೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಮಾತನಾಡಿ, ಮೊಮ್ಮಗನ ಜೊತೆ ಬಂದಿರುವುದರ ಬಗ್ಗೆ ತಿಳಿಸಿದ್ದಾರೆ. ಧವನ್ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ ಎಂದು ತಿಳಿಸಿದರು.
Advertisement
Advertisement
ಅವನಿಗೆ ಇನ್ನೂ 17 ವರ್ಷ ರಾಜಕೀಯಕ್ಕೆ ಬರಲು ಬಹಳ ಸಮಯವಿದೆ. ಈಗ ಆಸಕ್ತಿಯಿಂದ ಎಲ್ಲವನ್ನೂ ನೋಡಿಕೊಳ್ಳಲು ಬರುತ್ತಿದ್ದಾನೆ. ಮೊಮ್ಮಗನಿಗೆ ರಾಜಕೀಯ ಆಸಕ್ತಿ ಇರುವುದು ತಾತನಾಗಿ ನನಗೆ ಖುಷಿ ಇದೆ. ಪ್ರಚಾರಕ್ಕೆ ಅವನು ಇಷ್ಟ ಪಟ್ಟು ಬಂದರೆ ಬರಲಿ ಎಂದು ಹೇಳಿದರು. ಇದನ್ನೂ ಓದಿ: ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್
Advertisement
Advertisement
ಸಿದ್ದರಾಮಯ್ಯ ಅವರ ಎಡಗೈಗೆ ಗಾಯವಾಗಿ ನಂಜು ಹೆಚ್ಚಾಗಿ ಜ್ವರದಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಚುನಾವಣಾ ಸಮಯ ಅದು, ಇದು ಎಂದು ಹೇಳಿಕೊಂಡು ಜ್ವರ ಬರುವುದಿಲ್ಲ. ಇದು ನಿಸರ್ಗದ ನಿಯಮ. ಇನ್ನೂ ನಾಲ್ಕೈದು ದಿನ ಸ್ವಲ್ಪ ರೆಸ್ಟ್ ಬೇಕು. ಆಮೇಲೆ ಎಲ್ಲಾ ಸರಿ ಹೋಗುತ್ತೇನೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ಗೆ ಬಿಗ್ ಶಾಕ್ – ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಿಸುವಂತಿಲ್ಲ