ಮೈಸೂರು: ವರುಣಾ ಕ್ಷೇತ್ರದಿಂದ (Varuna Constituency) ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.
Advertisement
Advertisement
ಬಳಿಕ ನಂಜನಗೂಡಿನಲ್ಲಿ (Nanjangud) ನಡೆದ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ನನಗೆ ಕೊನೆಯ ಚುನಾವಣೆ, ಹಾಗಾಗಿ ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಏ.21, 22ರಂದು ದಾವಣಗೆರೆ, ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ಶೋ
Advertisement
ಇದು ನನ್ನ ಕೊನೆಯ ಚುನಾವಣೆ, ಆಮೇಲೆ ಯತೀಂದ್ರ, ಧವನ್ ರಾಕೇಶ್ ಇದ್ದಾರೆ. ಧವನ್ ರಾಜಕೀಯಕ್ಕೆ ಬರಲು ಇನ್ನೂ 8 ವರ್ಷ ಬೇಕು. ಓದು ಮುಗಿಸಿದ ನಂತರ ರಾಜಕಾರಣಕ್ಕೆ ಬರುತ್ತಾನೆ. ರಾಕೇಶ್ ಮೇಲೆ ಇದ್ದ ಪ್ರೀತಿಯನ್ನ ಅವನ ಮಗನ ಮೇಲೂ ತೋರಿಸುತ್ತಿದ್ದೀರಿ ಅದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.
Advertisement
ಬಿಜೆಪಿ (BJP) ಅವರು ಬೆಂಗಳೂರಿನ ನಿವಾಸಿ ಸೋಮಣ್ಣ (V Somanna) ಅವರನ್ನ ಕಣಕ್ಕಿಳಿಸಿದೆ. ಬಿಜೆಪಿ – ಜೆಡಿಎಸ್ (BJP-JDS) ಒಳ ಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಭಾರತಿ ಶಂಕರ್ ನನ್ನು ಕಣಕ್ಕೆ ಇಳಿಸಿರೋದು ದಲಿತರ ಮತ ಛಿದ್ರ ಮಾಡುವ ಷಡ್ಯಂತ್ರ. ನನ್ನನ್ನ ಸೋಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ: ಜನರಲ್ಲಿ ಸುದೀಪ್ ಮನವಿ
ಬಿಜೆಪಿಯಲ್ಲಿ ಹಿರಿಯರಿಗೆ ಗೌರವವಿಲ್ಲ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ಟಿಕೆಟ್ ಕೊಡಲಿಲ್ಲ. ಇಡೀ ರಾಜ್ಯದಲ್ಲಿ ಈಗ ಕಾಂಗ್ರೆಸ್ ಪರ ಗಾಳಿ ಬೀಸಿದೆ. ವರುಣಾ ಜನತೆಗೆ ಎಷ್ಟೇ ಕೋಟಿ ಕೊಟ್ಟರೂ ಅದನ್ನ ಕಾಲಕಸದಂತೆ ಕಾಣುತ್ತಾರೆ ಅನ್ನೋದು ನನಗೆ ಗೊತ್ತಿದೆ. ಇದು ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಹಾಗಾಗಿ ಈ ಬಾರಿ 1 ಲಕ್ಷ ಮತಗಳ ಅಂತರದಿಂದ ನನ್ನನ್ನ ಗೆಲ್ಲಿಸಬೇಕು ಎಂದು ಕೋರಿದ್ದಾರೆ.