ಬೆಂಗಳೂರು: ಸಿದ್ದರಾಮಯ್ಯ ಸರ್ಕಾರವನ್ನು 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮಾನನಷ್ಟ ಕೇಸ್ ಹಾಕಲು ಸಿಎಂ ಮುಂದಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ನಾಯಕ ಉಗ್ರಪ್ಪ ಈ ನಾಯಕರು ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ 100 ಕೋಟಿ ರೂ. ಮಾನಷ್ಟ ಕೇಸ್ ಹಾಕಲಾಗುವುದು ಎಂದು ತಿಳಿಸಿದರು.
Advertisement
Advertisement
ಮೋದಿ, ಬಿಎಸ್‍ವೈ, ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ನೋಟಿಸ್ ಜಾರಿ ಮಾಡಿದ್ದಾರೆ. ಬಿಜೆಪಿ ನಾಯಕರು ಹೇಳಿಕೆಯಿಂದ ಪಕ್ಷ ಹಾಗೂ ತಮಗೇ ತೀವ್ರ ನಷ್ಟ ಉಂಟುಮಾಡಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಈ ನೋಟಿಸ್ ಗೆ ಉತ್ತರಿಸದೇ ಇದ್ದರೆ ಕ್ರಿಮಿನಲ್ ಹಾಗೂ ಸಿವಿಲ್ ಮಾನನಷ್ಟ ಕೇಸ್ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
Advertisement
ಪ್ರಧಾನಿ ಮೋದಿ ಹಾಗೂ ಅಮಿತ್ ಶಾ, ಬಿಎಸ್‍ವೈ ಪಕ್ಷದ ಹಾಗೂ ನನ್ನ ಮೇಲೆ ಆಧಾರ ರಹಿತ ಆರೋಪ ಮಾಡಿದ್ದಾರೆ. `ನಂಗಾ ನಾಚ್’ ಸರ್ಕಾರ, `10% ಸರ್ಕಾರ’ ಹಾಗೂ ರಾಜ್ಯದ ಮಂಗಳೂರು ಭಾಗದಲ್ಲಿ ನಡೆದ ಹತ್ಯೆಗಳನ್ನು ಕಾಂಗ್ರೆಸ್ ಪ್ರೇರಿತ ಎಂದು ಆರೋಪಿಸಿದ್ದಾರೆ. ಈ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ನೀಡಬೇಕು ಎಂದು ಸೂಚಿಸಿದ್ದಾರೆ.