ನವದೆಹಲಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ.
Advertisement
Advertisement
ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುವುದು. ಬಹಿರಂಗವಾಗಿ ಇದನ್ನು ಚರ್ಚೆ ಮಾಡಲು ಸಾಧ್ಯವಿಲ್ಲ. ಒಂದು ಸೀಟು ಬಂದಿದ್ದು ನಾವು ಒಪ್ಪಿಕೊಂಡಿದ್ದೇವೆ ಜನರ ತೀರ್ಪು ನಾವು ತಲೆ ಭಾಗಿ ಒಪ್ಪಿಕೊಂಡಿದ್ದೇವೆ ಅಂದರು.
Advertisement
ಸಭೆಯ ಅಜೆಂಡಾ ಇನನೂ ಏನು ಎಂದು ಗೊತ್ತಾಗಿಲ್ಲ. ಯಾವೆಲ್ಲಾ ವಿಚಾರಗಳು ಚರ್ಚೆ ಆಗಲಿದೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.
Advertisement
ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಪಕ್ಷೇತರ ಶಾಸಕ ಶಂಕರ್ ಬೆಂಗಳೂರಿನಿಂದ ದೆಹಲಿಗೆ ಆಗಮಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರು ಪಕ್ಷೇತರ ಶಾಸಕರನ್ನು ಹಿಡಿದಿಟ್ಟು ಕೊಳ್ಳುವ ಯತ್ನ ನಡೆಸಿದ್ದು, ಬಿಜೆಪಿ ಆಪರೇಷನ್ ತಪ್ಪಿಸೋಕೆ ಅವರು ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.