Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ಸುನಾಮಿಯಲ್ಲಿ ಸಿದ್ದರಾಮಯ್ಯ ಕೊಚ್ಚಿ ಹೋಗ್ತಾರೆ: ಕುಮಾರಸ್ವಾಮಿ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿಗಣತಿ ಸುನಾಮಿಯಲ್ಲಿ ಸಿದ್ದರಾಮಯ್ಯ ಕೊಚ್ಚಿ ಹೋಗ್ತಾರೆ: ಕುಮಾರಸ್ವಾಮಿ ಆಕ್ರೋಶ

Bengaluru City

ಜಾತಿಗಣತಿ ಸುನಾಮಿಯಲ್ಲಿ ಸಿದ್ದರಾಮಯ್ಯ ಕೊಚ್ಚಿ ಹೋಗ್ತಾರೆ: ಕುಮಾರಸ್ವಾಮಿ ಆಕ್ರೋಶ

Public TV
Last updated: April 16, 2025 5:53 pm
Public TV
Share
2 Min Read
H D Kumaraswamy
SHARE

ಬೆಂಗಳೂರು: ಜಾತಿಗಣತಿ ಸುನಾಮಿಯಲ್ಲಿ ಸಿದ್ದರಾಮಯ್ಯ (Siddaramaiah) ಕೊಚ್ಚಿ ಹೋಗ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಮತ್ತೆ ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿರುವ ಕುಮಾರಸ್ವಾಮಿ ಮಾಜಿ ಸಿಎಂ ವೀರೇಂದ್ರ ಪಾಟೀಲ್ ಅವರ ಇತಿಹಾಸ ನೆನಪು ಮಾಡಿಕೊಂಡು ಎಕ್ಸ್‌ನಲ್ಲಿ ಪೋಸ್ಟ್ ಪ್ರಕಟಿಸಿ ಸಿಟ್ಟು ಹೊರಹಾಕಿದ್ದಾರೆ. ಇದನ್ನೂ ಓದಿ: ಏ.25 ರಂದು ಬೆಂಗಳೂರಿನಲ್ಲಿ ವಿವೇಕಾನಂದರ ಜೀವನಾಧಾರಿತ ‘ವೀರ ಸಂನ್ಯಾಸಿಯ ಆತ್ಮ ಗೀತೆ’ ಪ್ರದರ್ಶನ

ಎಕ್ಸ್‌ನಲ್ಲಿ ಏನಿದೆ?
ಅಕ್ರಮಬದ್ಧ ಜಾತಿ ಗಣತಿ ಬಗ್ಗೆ ಜನರ ಆಕ್ರೋಶ ಸರಿ ಇದೆ. ಸುಳ್ಳು ಲೆಕ್ಕ ಗೊತ್ತಿದೆ. ಕಳ್ಳ ಬೆಕ್ಕು ಕಣ್ಮುಚ್ಚಿ ಕದ್ದು ಹಾಲು ಕುಡಿದರೆ ಲೋಕಕ್ಕೆ ಕಾಣದೇ? ಜಾತಿಗಣತಿ ಹೆಸರಿನಲ್ಲಿ ಜನರನ್ನು ಛಿದ್ರಗೊಳಿಸಿ ರಾಜ್ಯದ ನೆಮ್ಮದಿಗೆ ಕೊಳ್ಳಿ ಇಟ್ಟು, ಆ ಬೆಂಕಿಯಲ್ಲಿ ಚಳಿ ಕಾಯಿಸಿಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಹಿಡನ್ ಅಜೆಂಡಾ. ಇದನ್ನೂ ಓದಿ: ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳು ಇದ್ವು, ಆದ್ರೆ 180 ಜಾತಿ ಸೇರಿಸಿದ್ದಾರೆ: ಮಾದಾರ ಚೆನ್ನಯ್ಯ ಸ್ವಾಮೀಜಿ

ಅಕ್ರಮಬದ್ಧ ಜಾತಿ ಗಣತಿ ಬಗ್ಗೆ ಜನರ ಆಕ್ರೋಶ ಸರಿ ಇದೆ. ಸುಳ್ಳುಲೆಕ್ಕ ಗೊತ್ತಿದೆ. ಕಳ್ಳಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಲೋಕಕ್ಕೆ ಕಾಣದೇ?

ಗಣತಿ ಹೆಸರಿನಲ್ಲಿ ಜನರನ್ನು ಛಿದ್ರಗೊಳಿಸಿ ರಾಜ್ಯದ ನೆಮ್ಮದಿಗೆ ಕೊಳ್ಳಿ ಇಟ್ಟು ಆ ಬೆಂಕಿಯಲ್ಲಿ ಚಳಿ ಕಾಯಿಸಿಕೊಳ್ಳುವುದು @INCKarnataka ಸರಕಾರದ ಹಿಡೆನ್‌ ಅಜೆಂಡಾ! ಎಲ್ಲಾ ರಾಜ್ಯಗಳಲ್ಲಿ…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 16, 2025

ಎಲ್ಲಾ ರಾಜ್ಯಗಳಲ್ಲಿ ಚುನಾವಣೆ ಗೆಲ್ಲಲು ಕಾಂಗ್ರೆಸ್ (Congress) ಜಾತಿಗಣತಿಯನ್ನೇ ಗುರಾಣಿ ಮಾಡಿಕೊಂಡಿದೆ. ಕುಲ, ಕುಲ, ಕುಲವೆಂದು ಹೊಡೆದಾಡದಿರಿ. ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ? ಹೀಗೆಂದರೇನು ಸನ್ಮಾನ್ಯ ಮುಖ್ಯಮಂತ್ರಿಗಳೇ. ಕನಕದಾಸರ ಆಶಯ ಅರ್ಥಪೂರ್ಣ. ನಿಮ್ಮ ಪ್ರಾಯೋಜಿತ ಜಾತಿಗಣತಿ ವರದಿಯ ದುರಾಶಯ ಪ್ರಶ್ನಾರ್ಹ. ಹೇಳುವುದು ಒಂದು, ಮಾಡಿದ್ದು ಇನ್ನೊಂದು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು – ಉರ್ದು ಭಾರತದ ಭಾಷೆ, ಒಂದು ಧರ್ಮಕ್ಕೆ ಸೀಮಿತವಲ್ಲ

ಇವನಾರವ, ಇವನಾರವ,
ಇವನಾರವನೆಂದೆನಿಸದಿರಯ್ಯಾಇವ ನಮ್ಮವ, ಇವ ನಮ್ಮವ,
ಇವನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ. ಎಲ್ಲರನ್ನೂ ಒಳಗೊಳ್ಳುವ ಬಸವಣ್ಣನವರ ವಚನವನ್ನು ಬರೆದುಕೊಂದ್ದೀರಿ. ಇವರು ನಮ್ಮವರಲ್ಲ, ಇವ ನಮ್ಮನಲ್ಲ ಎಂದು ಕೃತಿಯಲ್ಲಿಯೇ ತೋರುತ್ತೀರಿ.

ಬೂಟಾಟಿಕೆಗೂ ಇತಿಮಿತಿ ಬೇಡವೇ ಸಿದ್ದರಾಮಣ್ಣ? ಸಾಮಾಜಿಕ ನ್ಯಾಯ ಎಂದರೆ ನಿಮಗೆ ಬೇಡವಾದ ಸಮಾಜಗಳ ತುಚ್ಛೀಕರಣ. ಸಾಮಾಜಿಕ ನ್ಯಾಯವೆಂದರೆ ಒಂದು ನಿರ್ದಿಷ್ಟ ಸಮಾಜದ ತುಷ್ಟೀಕರಣ. ಜಾತಿ ಸಮೀಕರಣವಲ್ಲ, ರಾಜಕೀಯ ಲಾಭಕ್ಕೆ ಜಾತಿಗಳ ಏಕೀಕರಣಕ್ಕೆ ಕೈ ಹಾಕಿದ್ದೀರಿ. ಜಾತಿಗಣತಿಯ ಲಾಭ ನಿಮಗೋ? ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್ ಪಕ್ಷಕ್ಕೋ? ನಿಮ್ಮ ಒಳಮರ್ಮ ರಾಹುಲ್ ಗಾಂಧಿ ಅರ್ಥವಾದಂತೆ ಇಲ್ಲ, ಪಾಪ. ಇದನ್ನೂ ಓದಿ: ಸಿದ್ದರಾಮಯ್ಯನವರೇ ನಿಮ್ಮನೆಗೆ ಜಾತಿಗಣತಿ ಸಮೀಕ್ಷೆ ಮಾಡಲು ಯಾರು ಬಂದಿದ್ರು? – ಶೋಭಾ ಕರಂದ್ಲಾಜೆ

ಹಿಂದೆ ಶ್ರೀ ವೀರೇಂದ್ರ ಪಾಟೀಲ್ ಅವರಿಗೆ ಎಸಗಿದ ಅನ್ಯಾಯಕ್ಕೆ ನಿಮ್ಮ ಪಕ್ಷ ಬೆಲೆ ತೆತ್ತಿದೆ. ನೆನಪಿಲ್ಲವೇ? ನೀವೂ, ನಿಮ್ಮ ಪಕ್ಷದ ಇತಿಹಾಸದಿಂದ ಪಾಠ ಕಲಿಯುವುದಿಲ್ಲ. ತಪ್ಪು ತಿದ್ದಿ ನಡೆಯುವ ಗುಣಲಕ್ಷಣ ನಿಮಗೂ ಇಲ್ಲ. ನಿಮ್ಮ ಪಕ್ಷಕ್ಕೂ ಇಲ್ಲ. ನೆಮ್ಮದಿಯಾಗಿದ್ದ ಕರ್ನಾಟಕವನ್ನು ಕೆಣಕಿದ್ದೀರಿ. ಗಣತಿ ಸುನಾಮಿಯಲ್ಲಿ ಕೊಚ್ಚಿ ಹೋಗುತ್ತೀರಿ. ಜನರಿಗೆ ನಿಮ್ಮ ಅಸಲಿಯತ್ತು ಗೊತ್ತಾಗಿದೆ. ಅಕ್ರಮಬದ್ಧ ಗಣತಿ, ಜಾತಿಗಣತಿಯಲ್ಲ ದ್ವೇಷಗಣತಿ ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

TAGGED:bengaluruCaste Census Reportcongressh d kumaraswamysiddaramaiahಕಾಂಗ್ರೆಸ್ಜಾತಿಗಣತಿ ವರದಿಬೆಂಗಳೂರುಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

NASA Artemis 2
Latest

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌ 2 ಗಗನಯಾತ್ರಿಗಳು

Public TV
By Public TV
22 minutes ago
Narendra Modi
Crime

ಹಣಕ್ಕಾಗಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಶತ್ರುಗಳಿಗೆ ರವಾನೆ – ಆರೋಪಿ ಅರೆಸ್ಟ್‌

Public TV
By Public TV
42 minutes ago
Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
8 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
9 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
9 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?