ಮಂಗಳೂರು: ಸಿದ್ದರಾಮಯ್ಯನವರು ಎಲ್ಲಾ ಧರ್ಮದ ಗುರುಗಳಿಗೆ ಗೌರವ ಕೊಡುತ್ತಾರೆ. ಆದರೆ ಬಿಜೆಪಿಯವರು ಹೇಳಿಕೆ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಎಲ್ಲಾ ಧರ್ಮದ ಗುರುಗಳಿಗೆ ಗೌರವ ಕೊಡುತ್ತಾರೆ. ಆದರೆ ಬಿಜೆಪಿಯವರು ಹೇಳಿಕೆ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಎಲ್ಲಾ ಸ್ವಾಮಿಜಿಗಳು ಸಿದ್ದರಾಮಯ್ಯನವರ ಜೊತೆ ಆತ್ಮೀಯತೆಯಿಂದ ಇದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಯಾರಾದರೂ ಸ್ವಾಮೀಜಿ ಪ್ರತಿಭಟನೆ ಮಾಡಿದ್ರಾ? ಮೂಢನಂಬಿಕೆ ಕಾಯ್ದೆ ಕೂಡ ಆವತ್ತು ಸ್ವಾಮೀಜಿಗಳ ಮನವಿ ಮೇರೆಗೆ ಸಿದ್ದರಾಮಯ್ಯ ಕೈ ಬಿಟ್ಟಿದ್ದರು. ಆದರೆ ಬಿಜೆಪಿ ಸರ್ಕಾರ ಯಾವುದಕ್ಕೂ ಬೆಲೆ ಕೊಡದೇ ಆ ಬಿಲ್ ಜಾರಿ ಮಾಡಿತ್ತು. ಬಿಜೆಪಿ ಸ್ವಾಮೀಜಿಯವರ ಬೇಡಿಕೆ ಮತ್ತು ಜನರ ಭಾವನೆ ಅರ್ಥ ಮಾಡಿಕೊಳ್ಳಲ್ಲ. ಸಿದ್ದರಾಮಯ್ಯ ದೇವಸ್ಥಾನದ ಅರ್ಚಕರ ಗೌರವಧನ ಹೆಚ್ಚಳ ಮಾಡಿದರು. ಆದರೆ ಬಿಜೆಪಿ ಈವರೆಗೆ ಆ ಕೆಲಸ ಮಾಡಲೇ ಇಲ್ಲ. ಅದನ್ನು ಬಿಟ್ಟು ಸುಮ್ಮನೇ ಜನರ ಮಧ್ಯೆ ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ. ಈ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
Advertisement
Advertisement
ಇದೇ ವೇಳೆ ನಾಳೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಎಲ್ಲರೂ ನೆಮ್ಮದಿಯಿಂದ ಮಾನಸಿಕ ಒತ್ತಡ ಇಲ್ಲದೇ ಪರೀಕ್ಷೆ ಬರೆಯಿರಿ. ಸರ್ಕಾರ ಈಗಾಗಲೇ ಹಿಜಬ್ ಕುರಿತು ಆದೇಶ ಮಾಡಿದೆ. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡುವುದು ಸರ್ಕಾರದ ಜವಾಬ್ದಾರಿ. ಹೀಗಾಗಿ ಅವರಿಗೆ ಮಾನಸಿಕ ಒತ್ತಡ ಆಗದಂತೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು. ಅದೇ ರೀತಿ ಹೆತ್ತವರು ಕೂಡ ಈ ಬಗ್ಗೆ ಅಗತ್ಯ ಗಮನ ಹರಿಸಬೇಕು. ಸರ್ಕಾರದ ಆದೇಶದಂತೆ ಸಮವಸ್ತ್ರ ನಿಯಮ ಗೌರವಿಸಿ ಪರೀಕ್ಷೆ ಬರೆಯಬೇಕು ಎಂದಿದ್ದಾರೆ. ಇದನ್ನೂ ಓದಿ: ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ
Advertisement
Advertisement
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿನ ನಿಯಮ ಪಾಲಿಸಬೇಕು. ಖಾಸಗಿಯವರು ಶಿಕ್ಷಣಕ್ಕೆ ಒತ್ತು ಕೊಟ್ಟು ಎಲ್ಲವನ್ನು ನಿಭಾಯಿಸಲಿ. ಎಲ್ಲಾ ಧಾರ್ಮಿಕ ಗುರುಗಳು ಈ ಬಗ್ಗೆ ಪೂರಕವಾಗಿ ಮಾತನಾಡಿದ್ದಾರೆ. ಸಂವಿಧಾನಬದ್ದ ಹಕ್ಕಿನ ಬಗ್ಗೆ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಹಾಕಲಾಗಿದೆ. ಸುಪ್ರೀಂ ಕೋರ್ಟ್‍ನಲ್ಲಿ ಇದಕ್ಕೆ ನ್ಯಾಯ ಸಿಗಬಹುದು ಎಂಬ ವಿಶ್ವಾಸವಿದೆ. ವಿದ್ಯಾರ್ಥಿಗಳು ಈ ಬಗ್ಗೆ ಚಿಂತೆ ಮಾಡಬಾರದು, ಪರೀಕ್ಷೆ ಅಷ್ಟೇ ಬರೆಯಬೇಕು. ನನ್ನ ಮಗಳಿಗಾದರೂ ನಾನು ಇದನ್ನೇ ಹೇಳುತ್ತೇನೆ. ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಮಾಡಿದ ಆದೇಶ ಗೌರವಿಸಿ. ಆ ಆದೇಶ ಗೌರವಿಸಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಿರಿ ಮತ್ತು ಹೆತ್ತವರು ಕೂಡ ಈ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಸಹಕಾರ ನೀಡಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತರಬೇತಿ ನಿರತ ಐಆರ್‌ಬಿ ಪೊಲೀಸ್ ಹೃದಯಾಘಾತದಿಂದ ಸಾವು