ನೂತನ ಸಚಿವರಿಗೆ ಟಾರ್ಗೆಟ್‌ ಕೊಟ್ಟ ಸಿಎಂ

Public TV
1 Min Read
SIDDARAMAIAH 1 3

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೂತನ ಸಚಿವರಿಗೆ ಹಲವು ಟಾರ್ಗೆಟ್‌ಗಳನ್ನ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬ ಆಗಿದ್ದರೂ ಸಹ, ಲೋಕಸಭಾ ಚುನಾವಣೆ ಕಾರಣಕ್ಕೆ ಸಚಿವರಿಗೆ ಟಾರ್ಗೆಟ್‌ ಫಿಕ್ಸ್‌ ಮಾಡಿದ್ದಾರೆ.

ಏನದು ಟಾರ್ಗೆಟ್‌?
ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು. ಜನರ ಸಮಸ್ಯೆಗಳನ್ನು ಆಲಿಸಿ ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. ಇದನ್ನೂ ಓದಿ: ಮನೆಯಲ್ಲಿ ಅತ್ತೆ-ಸೊತೆ ಇದ್ರೆ ಯಾರಿಗೆ ದುಡ್ಡು ಹಾಕಬೇಕು, ಮನೆ ಯಜಮಾನಿ ಯಾರು? – ಗ್ಯಾರಂಟಿ ಬಗ್ಗೆ ಡಿಕೆಶಿ ಮಾತು

congress government cabinet

ಸಣ್ಣ ಪುಟ್ಟ ಕೆಲಸಗಳಿಗೂ ಕ್ಷೇತ್ರದ ಜನ ಸರ್ಕಾರಿ ಕಚೇರಿಗಳಿಗೆ ಪದೇ ಪದೆ ಅಲೆಯುವುದನ್ನು ತಪ್ಪಿಸಿ. ಜನರು ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಬಸ್ಸು, ರೈಲು ಹತ್ತಿಕೊಂಡು ವಿಧಾನಸೌಧಕ್ಕೆ ಬರುವ ಹೊರೆಯನ್ನು ತಪ್ಪಿಸಿ.

ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು. ಖಾತೆ ಹಂಚಿಕೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಸಚಿವರೆಲ್ಲ ಸಕ್ರಿಯರಾಗಿ. ಸರ್ಕಾರವನ್ನು, ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಇದನ್ನೂ ಓದಿ: ಮನೆಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ, ಎಲ್ಲರಿಗೂ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

ಕೇಂದ್ರದ ದುರಾಡಳಿತವನ್ನು ಕರ್ನಾಟಕದ ಮೂಲಕ ಕೊನೆಗೊಳಿಸಲು ಪರಿಸ್ಥಿತಿ ಹದವಾಗಿದೆ. ಸಚಿವರು ತಮಗೆ ಉಸ್ತುವಾರಿ ವಹಿಸಲಾಗುವ ಜಿಲ್ಲೆಗಳಿಗೆ ಹೆಚ್ಚೆಚ್ಚು ಪ್ರವಾಸ ಮಾಡಬೇಕು. ಜಿಲ್ಲೆ, ತಾಲ್ಲೂಕು ಮಟ್ಟದಲ್ಲೇ ಸಮಸ್ಯೆಗಳನ್ನು ಬಗೆಹರಿಸಬೇಕು.

ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ. ಹೀಗಾಗಿ ನಿಮಗೆ ವಹಿಸಿರುವ ಟಾರ್ಗೆಟ್‌ ಕಡೆಗೆ ಹೆಚ್ಚಿನ ಗಮನ ಹರಿಸಿ ಕೆಲಸ ಮಾಡಿ ಎಂದು ತಮ್ಮನ್ನು ಭೇಟಿಯಾಗಲು ಬಂದ ಸಚಿವರಿಗೆ ತಿಳಿಸಿ ಸಿಎಂ ಶುಭಹಾರೈಸಿದ್ದಾರೆ.

Share This Article