– ಸಿದ್ದರಾಮಯ್ಯ ಸರ್ಕಾರ ಭಯೋತ್ಪಾದಕರನ್ನು ರಕ್ಷಿಸುವ ಸರ್ಕಾರ
ಬೆಳಗಾವಿ: ಬಿಜೆಪಿಗೆ (BJP) ಅಭಿವೃದ್ಧಿಯೇ ಮಾನದಂಡ, 10 ವರ್ಷಗಳ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದಾಜ್ಲೆ (Shobha Karandlaje) ಹೇಳಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಆದ ಮೂಲಸೌಕರ್ಯಗಳ ಅಭಿವೃದ್ಧಿ, ಗ್ರಾಮೀಣ ಭಾಗಕ್ಕೆ ಸಿಕ್ಕ ನೆರವು, ಇದು ನಮ್ಮ ಶಕ್ತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಕಾರ್ಯಕ್ರಮಗಳು, ದೇಶದ ಬಗ್ಗೆ ಅವರಿಗಿರುವ ಕಳಕಳಿ, ದೇಶದ ರಕ್ಷಣೆ ಮತ್ತು ಅಭಿವೃದ್ಧಿ ಬಗ್ಗೆ ಮೋದಿಗಿರುವ ದೂರದೃಷ್ಟಿ, ವಿದೇಶದಲ್ಲಿರುವ ಭಾರತೀಯರಿಗೆ ಸಿಗುವ ಗೌರವದ ದೂರದೃಷ್ಟಿ ಮೇಲೆ ಮತ ಕೇಳುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಬಳಿಕ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‍ಗೆ ಶಾಕ್ – ಮಾಜಿ ಕೇಂದ್ರ ಸಚಿವ ಸೇರಿ ಹಲವು ನಾಯಕರು ಬಿಜೆಪಿಗೆ
Advertisement
ಈರುಳ್ಳಿ, ಟೊಮೆಟೊ ಸಲುವಾಗಿ ಸರ್ಕಾರ ಬಿದ್ದ ಉದಾಹರಣೆಗಳಿವೆ. ಅದಕ್ಕೆ ಖಾದ್ಯ ತೈಲ ಕಾಳು ಬೆಳೆಯಲು ರೈತರಿಗೆ ಉತ್ತೇಜನ ನೀಡಲಾಗುತ್ತಿದೆ. ಸಬ್ಸಿಡಿ ಆಧಾರದ ಮೇಲೆ ರೈತರಿಗೆ ಬೀಜ, ಟೆಕ್ನಾಲಜಿ ನೀಡುತ್ತಿದ್ದೇವೆ. ಯುಪಿಎ ಸಮಯದಲ್ಲಿನ ಲೋಪಗಳ ಗುಂಡಿ ಮುಚ್ಚಿ, ಮೇಲೆದ್ದು ಬರಲು ನಮಗೆ ಸಮಯ ಬೇಕು. ಎಲ್ಲಾ ವಿಚಾರಗಳಲ್ಲೂ ಸ್ವಾವಲಂಬನೆ ಸಾಧಿಸಲು ಮೋದಿ ಕಾರ್ಯ ಪ್ರವೃತ್ತರಾಗುತ್ತಿದ್ದಾರೆ. ಈ ಮೊದಲು ನಾವು ಡಿಫೆನ್ಸ್‍ನಲ್ಲಿ ಸ್ವಾವಲಂಬಿಗಳಾಗಿರಲಿಲ್ಲ. ಮದ್ದುಗುಂಡುಗಳು ಆಚೆಯಿಂದ ಬರುತ್ತಿತ್ತು. ಇವತ್ತು ಭಾರತ ಸ್ವಾವಲಂಬನೆ ಕಡೆಗೆ ದಾಪುಗಾಲಿಡುತ್ತಿದೆ. ಈಗ ನಾವು ಬೇರೆ ದೇಶಕ್ಕೆ ರಪ್ತು ಮಾಡಲು ಯೋಚನೆ ಮಾಡಿದ್ದೇವೆ ಎಂದಿದ್ದಾರೆ.
Advertisement
Advertisement
ಚುನಾವಣೆ (General Elections 2024) ಸಂದರ್ಭದಲ್ಲಿ ಸಿಲಿಂಡರ್, ಪೆಟ್ರೊಲ್ ಬೆಲೆ ಇಳಿಕೆ ಮಾಡಿರುವ ಬಗ್ಗೆ ಮಾತನಾಡಿದ ಅವರು, ಬೆಲೆ ಇಳಿಕೆ ಹಾಗೂ ಚುನಾವಣೆಗೂ ಸಂಬಂಧವಿಲ್ಲ, ಗ್ಯಾಸ್, ಪೆಟ್ರೋಲ್‍ನಲ್ಲಿ ನಾವು ಸ್ವಾವಲಂಬಿ ಆಗಿಲ್ಲ. ಈ ವಿಚಾರದಲ್ಲೂ ಸ್ವಾವಲಂಬನೆ ಸಾಧಿಸಲು ಮೋದಿಯವರು ಯೋಜನೆ ರೂಪಿಸುತ್ತಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳು, ರಸಗೊಬ್ಬರ, ಖಾದ್ಯ ತೈಲದಲ್ಲಿ ನಾವು ಸ್ವಾವಲಂಬಿ ಆಗಿಲ್ಲ. ಈ ಎಲ್ಲವನ್ನೂ ನಾವು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗುತ್ತದೆ. ವಿದೇಶಿ ಮಾರುಕಟ್ಟೆ ಆಧಾರದ ಮೇಲೆ ಬೆಲೆ ನಿಗದಿ ಆಗುತ್ತದೆ ಎಂದಿದ್ದಾರೆ.
ರಾಜ್ಯ ಸರ್ಕಾರ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವ ಸರ್ಕಾರವಾಗಿದೆ. ನಿಷೇಧಿತ ಸಂಘಟನೆ ಮುಖಂಡರೆಲ್ಲಾ ಮುಖ್ಯಮಂತ್ರಿ (Siddaramaiah) ಮತ್ತು ಗೃಹ ಸಚಿವರ ಮನೆಯಲ್ಲೇ ಇರುತ್ತಾರೆ. ಹಾಗಾಗಿ, ಅವರ ಮೇಲೆ ಕ್ರಮ ತೆಗೆದುಕೊಳ್ಳುವುದು ಕೂಡ ಪೊಲೀಸ್ ಇಲಾಖೆಗೆ ಸವಾಲಾಗಿದೆ. ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಬೆಂಗಳೂರಿನ ಕ್ಯಾಂಟಿನ್‍ನಲ್ಲಿ ಬಾಂಬ್ ಸ್ಫೋಟ ಪ್ರಕರಣಗಳೇ ಇದಕ್ಕೆಲ್ಲಾ ಸಾಕ್ಷಿ. ಆದ್ದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರ ರಕ್ಷಣೆ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಕಿರಿಕ್ ಚೀನಾಗೆ ಠಕ್ಕರ್ – ವಿಶ್ವದ ಅತೀ ಉದ್ದದ ದ್ವಿಪಥ ಸುರಂಗ ಲೋಕಾರ್ಪಣೆಗೊಳಿಸಿದ ಮೋದಿ