ಮಂಗಳೂರು: ಕಲ್ಲಡ್ಕ ಪ್ರಭಾಕರ್ ನೇತೃತ್ವದ ಎರಡು ಶಾಲೆಗಳಿಗೆ ಬರುತ್ತಿದ್ದ ಅನುದಾನವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಕಡಿತಗೊಳಿಸಿದೆ.
ಬಂಟ್ವಾಳದಲ್ಲಿ ನಡೆದ ಕೋಮುಗಲಭೆ ವೇಳೆ ಸರ್ಕಾರ ಹಾಗೂ ಕಲ್ಲಡ್ಕ ಪ್ರಭಾಕರ್ ನಡುವೆ ದೊಡ್ಡ ಸಂಘರ್ಷವೇ ನಡೆದಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುತ್ತಿದ್ದ ಶ್ರೀರಾಮ ವಿದ್ಯಾ ಹಾಗೂ ಶ್ರೀದೇವಿ ವಿದ್ಯಾ ಕೇಂದ್ರಕ್ಕೆ ಬರುತ್ತಿದ್ದ ಅನುದಾನವನ್ನು ಕಡಿತಗೊಳಿಸಿದ್ದಾರೆ.
Advertisement
Advertisement
ಕಳೆದ ಹತ್ತು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಈ ಶಾಲೆಗಳಿಗೆ ಅನುದಾನ ನೀಡಲಾಗ್ತಿತ್ತು. ಈ ಎರಡು ಶಾಲೆಗಳನ್ನು ಕೊಲ್ಲೂರು ಮೂಕಾಂಬಿಕಾ ದೇವಾಲಯ ದತ್ತು ಪಡೆದುಕೊಂಡಿತ್ತು. ಕಳೆದ ಹತ್ತು ವರ್ಷಗಳಲ್ಲಿ ಕೊಲ್ಲೂರು ದೇಗುಲದಿಂದ 2.83 ಕೋಟಿ ಅನುದಾನ ನೀಡಲಾಗಿತ್ತು. ಕಲ್ಲಡ್ಕ ವಿದ್ಯಾಕೇಂದ್ರಕ್ಕೆ 2.32 ಕೋಟಿ ರೂ. ನೆರವು ಲಭಿಸಿತ್ತು. ಹಾಗೆ ಬಂಟ್ವಾಳದ ಪುಣಚ ಶ್ರೀದೇವಿ ವಿದ್ಯಾಕೇಂದ್ರಕ್ಕೆ 50.72 ಲಕ್ಷ ನೆರವು ಲಭಿಸಿತ್ತು.
Advertisement
ಇದೀಗ ಕೊಲ್ಲೂರು ದೇಗುಲ ದತ್ತು ತೆಗೆದುಕೊಂಡಿದ್ದ ಆದೇಶ ಹಿಂದಕ್ಕೆ ಪಡೆಯಲಾಗಿದ್ದು, ದೇವಸ್ಥಾನದ ದುಡ್ಡು ಶಾಲೆಗೆ ನೀಡಬಾರದೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.