ಮೈಸೂರು: 2017ರ ದಸರಾ ಅಂಬಾರಿ ದಿನ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಮಾಂಸಹಾರ ಸೇವಿಸಿ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದಾರೆ ಎಂದು ಮಾಜಿ ಮೈಸೂರು ಮೇಯರ್ ರವಿಕುಮಾರ್ ಹೇಳಿಕೆ ನೀಡಿದ್ದಾರೆ.
Advertisement
ನಾಟಿ ಕೋಳಿ ಊಟ ಮಾಡಿಯೇ ಸಿದ್ದರಾಮಯ್ಯ ದಸರಾ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು. ಈ ಕಾರಣಕ್ಕೆ ಅವರಿಗೆ ಮತ್ತೇ ಅಂಬಾರಿಗೆ ಪುಷ್ಟಾರ್ಚನೆ ಮಾಡುವ ಅವಕಾಶ ಸಿಗಲಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಫೋಟಕ ಆರೋಪ ಮಾಡಿದ್ದರು. ಪ್ರತಾಪ್ ಸಿಂಹ ಹೇಳಿಕೆಗೆ ಪುಷ್ಠಿ ನೀಡುವಂತೆ, ಅಂದಿನ ಮೈಸೂರು ಮೇಯರ್ ಆಗಿದ್ದ ಎಂ.ಜೆ ರವಿಕುಮಾರ್ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ್ದು, 2017ರ ದಸರಾ ಅಂಬಾರಿ ದಿನ ಅಂದಿನ ಸಿಎಂ ಸಿದ್ದರಾಮಯ್ಯ ನಾಟಿ ಕೋಳಿ ಊಟ ಮಾಡಿದ್ದರು. ಅವತ್ತು ಅವರ ಊಟದ ಟೇಬಲ್‍ನಲ್ಲಿ ಅವರ ಜೊತೆ ನಾನು ಕುಳಿತಿದ್ದೆ. ಲಲಿತ್ ಮಹಲ್ ಹೋಟೆಲ್‍ನಲ್ಲಿ ಮಾಂಸಹಾರ – ಸಸ್ಯಹಾರದ ಊಟದ ವ್ಯವಸ್ಥೆ ಇತ್ತು. ಸಿದ್ದರಾಮಯ್ಯ ಅವರು ನಾಟಿ ಕೋಳಿ ಊಟ ಮಾಡಿದ್ದರು ಎಂದು ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ನಾಟಿ ಕೋಳಿ ಊಟ ಮಾಡಿ ಅಂಬಾರಿಗೆ ಪುಷ್ಪಾರ್ಚನೆ: ಸಿದ್ದು ವಿರುದ್ಧ ಪ್ರತಾಪ್ ಸಿಂಹ ಕಿಡಿ
Advertisement
Advertisement
ಮೈಸೂರು ದಸರಾದಲ್ಲಿ ಮುಖ್ಯಮಂತ್ರಿ ಸೇರಿದಂತೆ ಉಸ್ತುವಾರಿ ಸಚಿವರಿಗೆ ಊಟ ಮಾಡಿಸುವುದು ಸಂಪ್ರದಾಯ. ಅಂದು ಸಿದ್ದರಾಮಯ್ಯ ನಾಟಿ ಕೋಳಿ ಊಟ ಮಾಡಲು ಮುಂದಾಗಿದ್ದರು. ಅಂಬಾರಿಗೆ ಪುಷ್ಪಾರ್ಚನೆ ಮಾಡುವ ದಿನ ಮಾಂಸಹಾರನಾ ಸರ್ ಅಂತಾ ನಾವು ಕೇಳಿದ್ದೇವೂ, ಅಯ್ಯೋ ಬಾ ಏನಾಗುತ್ತೆ ಅಂತಾ ಸಿದ್ದರಾಮಯ್ಯ ಅಂದ್ರು. ಅವರು ಅವತ್ತು ಮಾಂಸಹಾರ ಊಟ ಮಾಡಿದ್ದರು. ನಾನು ದಸರಾ ದಿನ ಉಪವಾಸ ಮಾಡುತ್ತಿದ್ದೆ ನಾನು ಅಂದು ಉಪವಾಸ ಮಾಡಿದ್ದೆ. ಊಟ ಮುಗಿಸಿದ ಬಳಿಕ ಸಿದ್ದರಾಮಯ್ಯ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ್ದರು ನಾನು ಜೊತೆಯಲ್ಲಿದ್ದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ, ಶಕ್ತಿ ಪ್ರದರ್ಶನ ಸರಿಯಲ್ಲ: ವಿಶ್ವನಾಥ್