Belgaum

ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗಿಲ್ಲ : ಮಹಾಂತೇಶ್ ಕವಟಗಿಮಠ

Published

on

Share this

ಚಿಕ್ಕೋಡಿ: ಜಾತಿ-ಜಾತಿ ಹಾಗೂ ಧರ್ಮ-ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಕಾರ್ಯವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಚಿಕ್ಕೋಡಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ, ವಿವಿಧ ಕಾಮಗಾರಿಗಳಿಗೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಜೊತೆಗೂಡಿ ಉದ್ಘಾಟನೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ನಡುವಳಿಕೆ ತಾಲಿಬಾನಿಗಳ ತರ ಎಂದು ಆರೋಪಿಸಿದ್ದಾರೆ. ದೇಶದಲ್ಲಿ ಹಿಂದು ಪರವಾಗಿ ಇರುವ ಪಕ್ಷ ಅಂದ್ರೆ ಭಾರತಿ ಜನತಾ ಪಕ್ಷ, ಭಾರತ ದೇಶ ಅಖಂಡವಾಗಿರುವ ಹಿಂದೂ ದೇಶ, ಇಲ್ಲಿರುವ ಎಲ್ಲಾ ರಾಷ್ಟ್ರೀಯ ಜನರು ಸೌಹಾರ್ದತೆಯಿಂದ ಬದುಕಬೇಕೆಂಬುದು ನಮ್ಮ ಪಕ್ಷದ ಉದ್ದೇಶ. ಆದರೆ ಕಾಂಗ್ರೆಸ್ ಪಕ್ಷ ಮತ ಮತಗಳ ನಡುವೆ ಮತ್ತು ಧರ್ಮ ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ದಸರಾ ಉದ್ಘಾಟನೆಯನ್ನು ರಾಜಕೀಕರಣಗೊಳಿಸುವುದು ಕೆಟ್ಟ ಸಂಪ್ರದಾಯ – ಆಪ್ ವಿರೋಧ

ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗಿಲ್ಲ. ಸಿದ್ದರಾಮಯ್ಯ ವೀರಶೈವ ಲಿಂಗಾಯತ ಧರ್ಮವನ್ನು ಒಡೆಯಲು ಹೋಗಿ ಅಧಿಕಾರ ಕಳೆದುಕೊಂಡರು. ಭಾರತೀಯ ಜನತಾ ಪಕ್ಷ ಎಲ್ಲರನ್ನೂ ಒಗ್ಗೂಡಿಸಿ ಸೌಹಾರ್ದತೆಯಿಂದ ಹಾಗೂ ವಿಶ್ವಾಸ ಹೊಂದಿರುವ ಪಕ್ಷ ಹೀಗಾಗಿ ಜನರು ನಮಗೆ ಅಧಿಕಾರ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಸರ್ಕಾರದಲ್ಲಿ ಬಿಜೆಪಿಗೆ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡ್ತೇವೆ – ಕಾಂಗ್ರೆಸ್

ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪ ಚುನಾವಣೆಯಲ್ಲಿ, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತೆ. ಎಂದು ಅವರು ಕಾಗವಾಡ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಪರ್ವ ಶುರುವಾಗಿದೆ ಒಂದೇ ದಿನ ಒಂದೇ ಗ್ರಾಮದಲ್ಲಿ 22 ಕಾಮಗಾರಿಗಾಗಿ ಚಾಲನೆ ನೀಡಲಾಗಿದೆ. ಇದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಹೇಳಿದರು.

Click to comment

Leave a Reply

Your email address will not be published. Required fields are marked *

Advertisement
Advertisement