Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಖುಷಿ ಪಡುವೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಖುಷಿ ಪಡುವೆ: ಸಿದ್ದರಾಮಯ್ಯ

Bengaluru City

‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಖುಷಿ ಪಡುವೆ: ಸಿದ್ದರಾಮಯ್ಯ

Public TV
Last updated: December 8, 2022 9:55 am
Public TV
Share
3 Min Read
SIDDRAMIHA 1
SHARE

ಬೆಂಗಳೂರು: ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ‘ರೈತರಾಮಯ್ಯ’, ‘ಕನ್ನಡ ರಾಮಯ್ಯ’, ‘ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ (Sidramullah Khan) ಎಂದು ಕರೆದರೆ ಅದಕ್ಕೂ ಖುಷಿಪಡುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಮೂಲಕ ಶಾಸಕ  ಸಿ.ಟಿ ರವಿ (C.T Ravi) ಮತ್ತು ಬಿಜೆಪಿಗೆ (BJP) ತಿರುಗೇಟು ನೀಡಿದ್ದಾರೆ.

BJP 1

ಟ್ವೀಟ್‍ನಲ್ಲಿ ಏನಿದೆ?
ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಬಿಜೆಪಿ ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿ ನಡೆಸುತ್ತಿರುವ ಅಪಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ. ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳ ಮಸಿ ಬಳಿದುಕೊಂಡ ಮುಖ ತೋರಿಸಿ ಮತಯಾಚನೆ ಮಾಡಲಿಕ್ಕಾಗುತ್ತದೆಯೇ? ಮೈತುಂಬ ಕಪ್ಪು ಬಳಿದುಕೊಂಡ ದುಷ್ಟರಿಗೆ ಬಿಳಿಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ. ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಬಿಜೆಪಿಯಲ್ಲಿ ಇಂತಹ ನೈತಿಕ ಅಧ:ಪತನಕ್ಕೆ ಬಿದ್ದಿರುವುದರ ಬಗ್ಗೆ ಎಲ್ಲರೂ ಸಂತಾಪ ಸೂಚಿಸೋಣ. ಇದನ್ನೂ ಓದಿ: ಕಾಫಿನಾಡಲ್ಲಿ ಮನೆ-ಮನೆಗೆ ತೆರಳಿ ಸಿ.ಟಿ.ರವಿ ಭಿಕ್ಷಾಟನೆ

siddu

ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಗೋವಿಂದ ಭಟ್ಟರ ಶಿಷ್ಯರಾದ ಶಿಶುನಾಳ ಷರೀಪ್, ಸಂತ ರಮಾನಂದರ ಶಿಷ್ಯರಾದ ಕವಿ ಕಬೀರರ ಪರಂಪರೆ ನಮ್ಮದು. ಆದ್ದರಿಂದ ಮುಸ್ಲಿಂ ಹೆಸರನ್ನು ನನ್ನ ಹೆಸರಿಗೆ ಜೋಡಿಸಿ ಜಾತ್ಯತೀತತೆಯ ನನ್ನ ನಂಬಿಕೆಯನ್ನು ಪುರಸ್ಕರಿಸಿದ್ದಾರೆ. ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ಧತೆಯಿಂದ ನಾನು ಮುಸ್ಲಿಂ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ. ಬಿಜೆಪಿ ರೀತಿಯಲ್ಲಿ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ. ಮುಸ್ಲಿಂ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ, ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ಧವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ. ಈ ಬಗ್ಗೆ ನನಗೆ ಹೆಮ್ಮೆಯೂ ಇದೆ, ಅಭಿಮಾನವೂ ಇದೆ.

tippu

ಟಿಪ್ಪು ಸುಲ್ತಾನ ಜಯಂತಿಯನ್ನು ವಿವಾದವನ್ನಾಗಿ ಮಾಡಿ ಬಿಜೆಪಿ ಹುಟ್ಟುಹಾಕಿದ ವಿವಾದ ಮತ್ತು ಗಲಭೆಗಳು ರಾಜಕೀಯ ಪ್ರೇರಿತವಾದುದು ಎಂದು ರಾಜ್ಯದ ಜನರಿಗೆ ಮನದಟ್ಟಾಗಿದೆ. ಬಿಜೆಪಿಯ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವ-ಶಾಸಕರ ವರೆಗೆ ಎಲ್ಲರೂ ಬಗೆಬಗೆಯ ವೇಷಧರಿಸಿ ಟಿಪ್ಪು ಜಯಂತಿ ಆಚರಿಸಿರುವುದನ್ನು ಜನ ನೋಡಿದ್ದಾರೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದಾಗ ಟಿಪ್ಪುವಿನ ಬಗ್ಗೆ 400 ಪುಟಗಳ ಪುಸ್ತಕ ಬರೆಸುವ ಜೊತೆಗೆ ಟಿಪ್ಪುವನ್ನು ಕೊಂಡಾಡಿ ಮುನ್ನುಡಿಯನ್ನೂ ಬರೆದಿದ್ದರು. ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಮ್ಮ ಭಾಷಣದಲ್ಲಿ ಟಿಪ್ಪು ಸುಲ್ತಾನನ (Tipu Sultan) ಸಾಧನೆಗಳನ್ನು ಉಲ್ಲೇಖಿಸಿ ಶ್ಲಾಘಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಹಿಂದೂ ಯುವಕರ ಕೊಲೆ ನಡೆದಿತ್ತು ಎಂಬ ಸುಳ್ಳು ಪ್ರಚಾರವನ್ನೂ ಬಿಜೆಪಿ ನಡೆಸುತ್ತಿದೆ. ಇದನ್ನೂ ಓದಿ: ನಾನು ಹಿಂದೂ ಹುಲಿನೇ, ಮುಲ್ಲಾ ಅಂತ ಕರೆಯೋಕ್ಕಾಗಲ್ಲ: ಸಿ.ಟಿ ರವಿ

ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ.
4/13#ಧರ್ಮರಾಜಕಾರಣ

— Siddaramaiah (@siddaramaiah) December 7, 2022

ಶೋಭಾ ಅವರು ರಾಜ್ಯದಲ್ಲಿ 24 ಹಿಂದೂಗಳ ಹತ್ಯೆಗಳು ನಡೆದಿವೆ ಎಂದು ಕೇಂದ್ರ ಗೃಹಸಚಿವರಾದ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಜೀವಂತವಿದ್ದ ವ್ಯಕ್ತಿಯ ಹೆಸರನ್ನೂ ಸೇರಿಸಲಾಗಿತ್ತು. ಬಿಜೆಪಿಯವರು ಹೇಳುತ್ತಿರುವ ಹನ್ನೊಂದು ಹಿಂದೂಗಳ ಹತ್ಯೆಯಲ್ಲಿ ಆರೋಪಿಗಳಾಗಿದ್ದವರು ಎಸ್‍ಡಿಪಿಐ ಮತ್ತು ಪಿಎಫ್‍ಐ ಸದಸ್ಯರು. ಅವರ ವಿರುದ್ಧ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಪರೇಶ್ ಮೇಸ್ತಾ ಎಂಬ ಯುವಕನ ಸಾವು ಹತ್ಯೆಯಲ್ಲ ಎಂದು ಸಿಬಿಐ ಇತ್ತೀಚೆಗೆ ಹೇಳಿರುವುದು ಬಿಜೆಪಿ ಸುಳ್ಳುಗಳನ್ನು ಬಯಲುಮಾಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ 11 ಮುಸ್ಲಿಂ ಯುವಕರ ಹತ್ಯೆಯೂ ನಡೆದಿತ್ತು. ಈ ಹತ್ಯೆಗಳ ಎಲ್ಲ ಆರೋಪಿಗಳು ಬಜರಂಗದಳ ಮತ್ತಿತರ ಸಂಘಪರಿವಾರದ ಸಂಘಟನೆಗಳ ಕಾರ್ಯಕರ್ತರಾಗಿದ್ದಾರೆ. ಅವರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿತ್ತು. ಈ ಪ್ರಕರಣಗಳ ಸಮಗ್ರ ಮಾಹಿತಿಯನ್ನು ಅಂದಿನ ಗೃಹಸಚಿವರು ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾರೆ.

ಕರ್ನಾಟಕದ ಜನತೆ ಪ್ರಜ್ಞಾವಂತರಿದ್ದಾರೆ, ಸರಿ-ತಪ್ಪುಗಳನ್ನು ಅರ್ಥಮಾಡಿಕೊಳ್ಳುವಷ್ಟು ವಿವೇಕವುಳ್ಳವರಾಗಿದ್ದಾರೆ. ಆದ್ದರಿಂದ ಅಪಪ್ರಚಾರ ನಡೆಸಿದಷ್ಟು ಅಪಪ್ರಚಾರ ನಡೆಸಿದವರೇ ರಾಜ್ಯದ ಜನರ ಮುಂದೆ ಬತ್ತಲಾಗುತ್ತಾರೆ ಎನ್ನುವುದು ನನಗೆ ಗೊತ್ತು. ನನ್ನ ವಿರುದ್ಧದ ಅಪಪ್ರಚಾರವನ್ನು ನಿಲ್ಲಿಸಬೇಕೆಂದು ನಾನೇನು ಮನವಿ ಮಾಡುವುದಿಲ್ಲ. ಆದರೆ ಇಂತಹ ಅಪಪ್ರಚಾರಗಳಿಗೆ ಹೆದರಿ ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮತ್ತು ಕೋಮುವಾದದ ರಾಜಕಾರಣದ ವಿರುದ್ಧದ ನನ್ನ ಹೋರಾಟವನ್ನು ನಾನು ನಿಲ್ಲಿಸುತ್ತೇನೆ ಎಂದು ತಿಳಿದುಕೊಂಡರೆ ಅದು ಮೂರ್ಖತನ ಅಷ್ಟೇ ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:CT RavisiddaramaiahSidramullah KhanTipu Sultanಕಾಂಗ್ರೆಸ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

In A First Chinese Humanoid Robots Outrun Humans In Beijing Half Marathon Human world record broken Lightning Beijing E Town
Latest

21 ಕಿ.ಮೀ ದೂರವನ್ನು ಜಸ್ಟ್‌ 50 ನಿಮಿಷದಲ್ಲಿ ಓಡಿದ ಚೀನಿ ರೊಬೊಟ್‌ – ಮನುಷ್ಯರ ವಿಶ್ವ ದಾಖಲೆ ಬ್ರೇಕ್‌!

Public TV
By Public TV
13 seconds ago
Rajasthan Refinery Unit Fire
Latest

ನಾಳೆ ಪಿಎಂ ಮೋದಿ ಉದ್ಘಾಟಿಸಬೇಕಿದ್ದ 79,000 ಕೋಟಿ ಮೌಲ್ಯದ ರಿಫೈನರಿ ಘಟಕಕ್ಕೆ ಬೆಂಕಿ

Public TV
By Public TV
38 minutes ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

Public TV
By Public TV
1 hour ago
bjp flag
Bengaluru City

ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ – ಇಡಿ ದಾಳಿಗೆ ಬಿಜೆಪಿ ಟೀಕೆ

Public TV
By Public TV
1 hour ago
Sadhvi Satish Sail
Latest

ಮಗಳು ಬಿಸಿನೆಸ್ ಮಾಡಲಿ ಅಂತ ಸಿಎಂ, ಡಿಸಿಎಂ ಬಳಿ ಬುದ್ದಿ ಹೇಳಿಸಿದ್ದೆ: ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮಗಳ ಬಗ್ಗೆ ಸತೀಶ್‌ ಸೈಲ್‌ ಮಾತು

Public TV
By Public TV
2 hours ago
Doctor Ramesh who was supposed to marry his wifes sister tomorrow murdered Sirsi KHB Colony
Crime

ಇಂದು ಮದುವೆ ಆಗ್ಬೇಕಿದ್ದ ವೈದ್ಯನ ಹತ್ಯೆ ಕೇಸ್‌ – ಚಿನ್ನದ ಆಸೆಗೆ ಸ್ನೇಹಿತನಿಂದಲೇ ಮರ್ಡರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?