Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನಿಯಾ ಗಾಂಧಿ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಶಕ್ತಿಯಾಗಿ ಕಾಂಗ್ರೆಸ್ ಎದ್ದು ಬರಲಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೋನಿಯಾ ಗಾಂಧಿ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಶಕ್ತಿಯಾಗಿ ಕಾಂಗ್ರೆಸ್ ಎದ್ದು ಬರಲಿದೆ: ಸಿದ್ದರಾಮಯ್ಯ

Bengaluru City

ಸೋನಿಯಾ ಗಾಂಧಿ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಶಕ್ತಿಯಾಗಿ ಕಾಂಗ್ರೆಸ್ ಎದ್ದು ಬರಲಿದೆ: ಸಿದ್ದರಾಮಯ್ಯ

Public TV
Last updated: March 17, 2022 3:46 pm
Public TV
Share
2 Min Read
Siddaramaiah and soniya
SHARE

ಬೆಂಗಳೂರು: ಕಾಂಗ್ರೆಸ್ ಪಕ್ಷ, ಇತ್ತೀಚಿನ ಕೆಲವು ಚುನಾವಣಾ ಸೋಲುಗಳ ತಾತ್ಕಾಲಿಕ ಹಿನ್ನಡೆಯನ್ನು ಎದುರಿಸಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ ರಾಜಕೀಯ ಶಕ್ತಿಯಾಗಿ ಕಾಂಗ್ರೆಸ್ ಎದ್ದು ಬರಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

SIDDARAMAIAH

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಪಕ್ಷದ ನಾಯಕರಿಂದ ಹಿಡಿದು ಕಾರ್ಯಕರ್ತರ ವರೆಗೆ ಪ್ರತಿಯೊಬ್ಬರೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ. ಇದೇ ನಂಬಿಕೆ ಮತ್ತು ಆತ್ಮ ವಿಶ್ವಾಸದಿಂದ ರಾಜ್ಯದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ ಪಕ್ಷಕ್ಕೆ ಗೆಲುವಿನ ಉಡುಗೊರೆ ನೀಡುತ್ತೇವೆ. ಹೊರಗಿನ ವಿರೋಧ ಪಕ್ಷಗಳ ಅಪಪ್ರಚಾರ ಮತ್ತು ಕೆಲವು ಒಳಗಿನ ಹಿತಶತ್ರುಗಳ ಕುಟಿಲ ಕಾರಸ್ತಾನಗಳಿಂದ ವಿಚಲಿತರಾಗದೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಭರವಸೆ ಇಟ್ಟು ಪಕ್ಷಕ್ಕೆ ಶಕ್ತಿತುಂಬಲು ಪ್ರತಿಯೊಬ್ಬ ಕಾಂಗ್ರೆಸಿಗನು ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ರಾಗಿ, ರಾಗಿ ಎಂದು ಕೂಗಿದ ಕಾಂಗ್ರೆಸ್ ಶಾಸಕ: ಸ್ಪೀಕರ್ ಕೆಂಡಾಮಂಡಲ

soniya gandhi

ಈಗ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸುತ್ತಿರುವವರು, ಅವರದ್ದೇ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸತತ ಎರಡು ಬಾರಿ ಲೋಕಸಭಾ ಚುನಾವಣೆಗಳನ್ನು ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವುದನ್ನು ಮರೆತಿರುವುದು ಆತ್ಮದ್ರೋಹವಲ್ಲದೆ ಮತ್ತೇನು?. ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿಯೇ ಕೇಂದ್ರದಲ್ಲಿ ಮಾತ್ರವಲ್ಲ, ಹದಿನೈದಕ್ಕೂ ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು ಎನ್ನುವುದನ್ನು ಇಂದು ಅವರ ನಾಯಕತ್ವವನ್ನು ಪ್ರಶ್ನಿಸುವವರು ನೆನಪು ಮಾಡಿಕೊಳ್ಳಬೇಕಾಗಿದೆ. ದೇಶಕ್ಕೆ ಬಲಿದಾನಗೈದ ಪತಿಯ ಅಗಲಿಕೆಯ ಶೋಕ ಮತ್ತು ಎರಡು ಎಳೆಯ ಮಕ್ಕಳ ಭವಿಷ್ಯದ ಕಾಳಜಿಯಿಂದ ರಾಜಕೀಯದಿಂದ ದೂರ ಇದ್ದ ಸೋನಿಯಾ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷವನ್ನು ಉಳಿಸಲಿಕ್ಕಾಗಿ ಒತ್ತಾಯದಿಂದ ಸಕ್ರಿಯ ರಾಜಕೀಯಕ್ಕೆ ಎಳೆದು ತಂದಿದ್ದ ಕೆಲವು ನಾಯಕರೇ ಈಗ ಸೋನಿಯಾ ಸೈದ್ಧಾಂತಿಕ ನಾಯಕತ್ವವನ್ನು ಪ್ರಶ್ನಿಸುತ್ತಿರುವುದು ವಿಷಾದನೀಯ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಜೇಮ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ: ಸಿದ್ದರಾಮಯ್ಯ

RAHUL GANDHI 1

2004ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದ ಸೋನಿಯಾ ಗಾಂಧಿಯವರು ಹಕ್ಕಿನಿಂದ ಪಡೆಯಬಹುದಾದ ಪ್ರಧಾನಿ ಪಟ್ಟವನ್ನು ತ್ಯಾಗ ಮಾಡಿ ವಿಶ್ವಕ್ಕೆ ಮಾದರಿಯಾಗಿದ್ದನ್ನು ಇಡೀ ವಿಶ್ವ ಕಂಡಿದೆ. ಇಂದಿನ ಟೀಕಾಕಾರರು ಈ ತ್ಯಾಗವನ್ನು ಕಂಡಿಲ್ಲವೇ?. ಕೆಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು. ಆದರೆ ಆಹಾರ, ಶಿಕ್ಷಣ, ಉದ್ಯೋಗ ಮತ್ತು ಮಾಹಿತಿಯ ಶಾಸನಾತ್ಮಕ ಹಕ್ಕನ್ನು ನೀಡಿದ್ದ ಕಾರ್ಯಕ್ರಮಗಳ ರೂವಾರಿಯಾದ ಸೋನಿಯಾ ಗಾಂಧಿಯವರು ದೇಶದ ಜನತೆಯ ಮನೆ-ಮನಗಳಲ್ಲಿ ಶಾಶ್ವತವಾಗಿ ನೆಲೆ ನಿಂತಿದ್ದಾರೆ. ಆ ಚಿತ್ರವನ್ನು ಅಳಿಸಲಾಗದು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರು ಒಂಟಿಯಲ್ಲ, ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ ದೇಶದ ಕೋಟ್ಯಂತರ ಜನ ಅವರ ಬೆನ್ನ ಹಿಂದಿದ್ದಾರೆ. ಇಂದಿನ ಸಂಕಷ್ಟ ಸ್ಥಿತಿಯಿಂದ ದೇಶವನ್ನು ಕಾಂಗ್ರೆಸ್ ಪಕ್ಷ ಮಾತ್ರ ಪಾರುಮಾಡಲು ಸಾಧ್ಯ ಎನ್ನುವುದು ಪ್ರತಿಯೊಬ್ಬರೂ ಅರಿತಿದ್ದಾರೆ. ಇದನ್ನೂ ಓದಿ: ಆಪ್‍ನಿಂದ `ಮಾಫಿಯಾ ಮುಕ್ತವಾಗಲಿದೆ ಪಂಜಾಬ್’: ಕಾಂಗ್ರೆಸ್ ಮುಖಭಂಗಕ್ಕೆ ಕಾರಣವಾಯ್ತು ಸಿಧು ಹೇಳಿಕೆ

ಕೋಮುವಾದಿ ರಾಜಕಾರಣ, ಮಾಧ್ಯಮಗಳ ಮೂಲಕ ನಡೆಸಲಾಗುತ್ತಿರುವ ಸುಳ್ಳುಗಳ ಅಪಪ್ರಚಾರ, ದುಡ್ಡಿನ ಬಲದ ಚುನಾವಣಾ ತಂತ್ರ-ಕುತಂತ್ರಗಳ ಎದುರು ಸೈದ್ಧಾಂತಿಕ ರಾಜಕಾರಣಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಇದು ತಾತ್ಕಾಲಿಕ ಹಿನ್ನಡೆ, ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೆ.

TAGGED:congressRahul GandhisiddaramaiahSonia Gandhiಕಾಂಗ್ರೆಸ್ರಾಹುಲ್ ಗಾಂಧಿಸಿದ್ದರಾಮಯ್ಯಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
15 minutes ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
23 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
By Public TV
45 minutes ago
is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
1 hour ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
1 hour ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?