Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಶಸ್ತಿಯೊಂದಿಗೆ ಬಂದ 1 ಲಕ್ಷಕ್ಕೆ ತಾನೇ 1 ಲಕ್ಷ ಹಣ ಸೇರಿಸಿ ಮಠಕ್ಕೆ ವಾಪಸ್‌ ಕೊಟ್ಟ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಪ್ರಶಸ್ತಿಯೊಂದಿಗೆ ಬಂದ 1 ಲಕ್ಷಕ್ಕೆ ತಾನೇ 1 ಲಕ್ಷ ಹಣ ಸೇರಿಸಿ ಮಠಕ್ಕೆ ವಾಪಸ್‌ ಕೊಟ್ಟ ಸಿದ್ದರಾಮಯ್ಯ

Karnataka

ಪ್ರಶಸ್ತಿಯೊಂದಿಗೆ ಬಂದ 1 ಲಕ್ಷಕ್ಕೆ ತಾನೇ 1 ಲಕ್ಷ ಹಣ ಸೇರಿಸಿ ಮಠಕ್ಕೆ ವಾಪಸ್‌ ಕೊಟ್ಟ ಸಿದ್ದರಾಮಯ್ಯ

Public TV
Last updated: January 6, 2022 11:03 pm
Public TV
Share
2 Min Read
siddu
SHARE

ಚಿತ್ರದುರ್ಗ: ಮಡಿವಾಳ ಗುರುಪೀಠದಲ್ಲಿ ಬಸವ ಮಾಚಿದೇವ ಸ್ವಾಮೀಜಿ ಅವರ ನಾಲ್ಕನೇ ಪೀಠಾರೋಹಣ ಹಾಗೂ 38ನೇ ಜನ್ಮದಿನದ ಅಂಗವಾಗಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಚಿದೇವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆದರೆ ಪ್ರಶಸ್ತಿಯೊಂದಿಗೆ ನೀಡಿದ್ದ ನಗದಿನೊಂದಿಗೆ ತಾವೇ 1 ಲಕ್ಷ ರೂ. ಸೇರಿಸಿ ಮಠಕ್ಕೆ ಹಿಂತಿರುಗಿಸಿದ್ದಾರೆ.

ಪ್ರಶಸ್ತಿಯು 1 ಲಕ್ಷ ನಗದು ಒಳಗೊಂಡಿರುವುದಾಗಿ ಶಾಸಕ ಭೀಮಾನಾಯ್ಕ ಗಮನಕ್ಕೆ ತಂದಿದ್ದಾರೆ. ಇದಕ್ಕೆ ವೈಯಕ್ತಿಕವಾಗಿ 1 ಲಕ್ಷ ಸೇರಿಸಿ ಮಠಕ್ಕೆ ಮರಳಿಸುತ್ತೇನೆ. ಮಠದಲ್ಲಿ ಶಿಕ್ಷಣ ಪಡೆಯುವ ಮಕ್ಕಳಿಗೆ ಇದನ್ನು ವಿನಿಯೋಗಿಸಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಇಡಿಯಿಂದ ಸ್ಯಾಂಡಲ್‌ವುಡ್‌ ನಿರ್ಮಾಪಕ ಆನಂದ್ ಅಪ್ಪುಗೋಳ್ ಅರೆಸ್ಟ್

siddu1

ಇದಕ್ಕೆ ಸಂತಸದಿಂದ ಪ್ರತಿಕ್ರಿಯಿಸಿದ ಬಸವ ಮಾಚಿದೇವ ಸ್ವಾಮೀಜಿ, ಇದನ್ನು ಬಡಮಕ್ಕಳ ವಿದ್ಯಾನಿಧಿಗೆ ಬಳಕೆ ಮಾಡಿಕೊಳ್ಳಲಾಗುವುದು ಎಂದಿದ್ದಾರೆ. ಈ ವೇಳೆ ಶಾಸಕರಾದ ಬೈರತಿ ಸುರೇಶ್‌, ಟಿ.ರಘುಮೂರ್ತಿ, ಭೀಮಾನಾಯ್ಕ್‌, ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ, ಮಾಜಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಡಿ.ಸುಧಾಕರ್‌ ಇದ್ದರು.

ಹಿಂದುತ್ವದ ಹೆಸರಿನಲ್ಲಿ ಪಟ್ಟಭದ್ರ ಹಿತಾಸಕ್ತಿಗಳಿಂದ ಜಾತಿ ವ್ಯವಸ್ಥೆ ಪೋಷಣೆ:
ಹಿಂದೂ ಧರ್ಮದಲ್ಲಿ ಜಾತಿ ವ್ಯವಸ್ಥೆ ಇಲ್ಲ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹಿಂದುತ್ವದ ಹೆಸರಿನಲ್ಲಿ ಜಾತಿ ವ್ಯವಸ್ಥೆಯನ್ನು ಪೋಷಣೆ ಮಾಡುತ್ತಿವೆ. ಸ್ವಾರ್ಥ ಸಾಧನೆಗೆ ಜಾತಿಯನ್ನು ಬಳಸಿಕೊಳ್ಳುತ್ತಿವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದರು.

siddaramaiah

ಇಲ್ಲಿನ ಮಡಿವಾಳ ಗುರುಪೀಠದಲ್ಲಿ ಬಸವ ಮಾಚಿದೇವ ಸ್ವಾಮೀಜಿ ಅವರ ನಾಲ್ಕನೇ ಪೀಠಾರೋಹಣ ಹಾಗೂ 38ನೇ ಜನ್ಮದಿನದ ಅಂಗವಾಗಿ ಗುರುವಾರ ನಡೆದ ‘ಕಾಯಕ ಜನೋತ್ಸವ’ದಲ್ಲಿ ‘ಮಾಚಿದೇವಶ್ರೀ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ನಾವೆಲ್ಲರೂ ಹಿಂದೂಗಳೇ. ನಾನು ಹಿಂದೂ ಆಗದೇ ಇದ್ದಿದ್ದರೆ ನಮ್ಮಪ್ಪ ಸಿದ್ದರಾಮಯ್ಯ ಅಂತ ಹೆಸರು ಇಡುತ್ತಿರಲಿಲ್ಲ. ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ ಎಂದರು. ಇದನ್ನೂ ಓದಿ: ಎಂಜಿನಿಯರ್ ಕೈಯಿಂದ ಫೈಲ್ ಕಿತ್ತುಕೊಂಡು ಓಡಿ ಹೋದ ಕಂಟ್ರಾಕ್ಟರ್

ಹಿಂದೂ ಧರ್ಮದಲ್ಲಿನ ಪಟ್ಟಭದ್ರರು ಶ್ರೇಣಿಕೃತ ವ್ಯವಸ್ಥೆಯನ್ನು ಸೃಷ್ಟಿಸಿದ್ದಾರೆ. ಚಾತುರ್ವರ್ಣ ನಿರ್ಮಿಸಿ ಮನುಸ್ಮೃತಿಯ ಮೂಲಕ ಧಾರ್ಮಿಕ ಚೌಕಟ್ಟು ಹಾಕಿದ್ದಾರೆ. ಶೂದ್ರರು ಮತ್ತು ಪಂಚಮರನ್ನು ಹೊರತುಪಡಿಸಿ ಉಳಿದವರು ಮಾತ್ರ ಶಿಕ್ಷಣ, ಆಸ್ತಿ ಹಕ್ಕು ಅನುಭವಿಸಿದರು. ನೂರಾರು ವರ್ಷ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವ ಪರಿಣಾಮ ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಅಸಮಾನತೆ ಎದುರಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಬಸವಣ್ಣನವರ ಶರಣ ಬಳಗದ ಮಾಚಿದೇವರು
ಸತ್ಯ, ನ್ಯಾಯ, ಧರ್ಮದ‌ ಪಾಲನೆಗೆ ಶ್ರಮಿಸಿದ ಅಗ್ರಗಣ್ಯ ಶರಣ ಗುರು.
ಈ ಮಹಾತ್ಮನ ಹೆಸರಿನ ಪ್ರಶಸ್ತಿ ನನ್ನ ಕರ್ತವ್ಯದ ಭಾರವನ್ನು ಹೆಚ್ಚಿಸಿದೆ.

ಎಲ್ಲರಿಗೂ ಶರಣು – ಶರಣಾರ್ಥಿ. 1/3 pic.twitter.com/FKynZImIHI

— Siddaramaiah (@siddaramaiah) January 6, 2022

ಜಾತಿ ವ್ಯವಸ್ಥೆ ಅಳಿದು ಮಾನವೀಯ ಸಮಾಜ ರೂಪುಗೊಳ್ಳಬೇಕಿದೆ. ನಾನು ಜಾತಿ ವ್ಯವಸ್ಥೆಯ ಕಡು ವಿರೋಧಿ. ಆದರೆ ಜಾತಿಯನ್ನು ಗುರುತಿಸಿ ಸಬಲೀಕರಣ ಮಾಡುವ ಮೂಲಕವೇ ಈ ವ್ಯವಸ್ಥೆಯನ್ನು ಕಿತ್ತುಹಾಕಬೇಕಿದೆ. ಜಾತಿ ಸಮ್ಮೇಳನ, ಜಾತಿ ಮಠ ಇಲ್ಲದಿದ್ದರೆ ಸಮುದಾಯ ಸಂಘಟನೆ ಸಾಧ್ಯವಿಲ್ಲ. ಜಾತಿ ವ್ಯವಸ್ಥೆಯ ಗುಲಾಮಗಿರಿಯಿಂದ ಹೊರಬರಲು ಅಂಬೇಡ್ಕರ್‌ ಮಾರ್ಗವನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.

ಬಸವಣ್ಣನವರು ಶೋಷಿತ ಸಮುದಾಯಗಳ ಪರವಾಗಿ ಹೋರಾಟ ಮಾಡಿದರು. ಬುದ್ಧ, ಬಸವ, ಅಂಬೇಡ್ಕರ್‌ ಸೇರಿ ಮಹನೀಯರೆಲ್ಲರೂ ಸಮಸಮಾಜದ ಕನಸು ಕಂಡಿದ್ದರು. ಶ್ರೇಣಿಕೃತ ವ್ಯವಸ್ಥೆ ಅಳಿಯಬೇಕು ಎಂದು ಶ್ರಮಿಸಿದ್ದರು. ಬಸವಣ್ಣನವರ ಆಶಯಗಳು ಅನುಷ್ಠಾನಕ್ಕೆ ಬಾರದಂತೆ ಕೆಲ ಶಕ್ತಿಗಳು ಕೆಲಸ ಮಾಡುತ್ತಿವೆ. ಧರ್ಮ, ಜಾತಿಯ ನೆಪದಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಅಸ್ಪೃಶ್ಯರನ್ನು ದೂರ ಇಡುವುದು ಅಮಾನವೀಯ ಅಲ್ಲವೇ ಎಂದು ಪ್ರಶ್ನಿಸಿದರು.

TAGGED:Chitradurgamadivala gurupeetasiddaramaiahಚಿತ್ರದುರ್ಗಮಡಿವಾಳ ಗುರುಪೀಠಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
3 hours ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
4 hours ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
5 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
5 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
5 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?