ಮೈಸೂರು: ರಾಜ್ಯದಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದು, ಆದರೆ ನಾನು ಆ ಸ್ಥಾನದಲ್ಲಿ ನಾನು ಸಿದ್ದರಾಮಯ್ಯರನ್ನ ನೋಡುತ್ತೇನೆ ಎಂದು ಸಚಿವ ಪುಟ್ಟರಂಗಶೆಟ್ಟಿ ಅವರು ಹೇಳಿದ್ದಾರೆ.
ಈ ಹಿಂದೆ ನಾನು ನೀಡಿದ ಹೇಳಿಕೆಗೆ ಬದ್ಧನಾಗಿದ್ದು, ಬಸವರಾಜ್ ಹೊರಟ್ಟಿ ಅವರು ಹೇಳಿದಂತೆ ಇಲ್ಲಿ ಯಾವುದು ನಡೆಯುವುದಿಲ್ಲ. ಇಲ್ಲಿ ಎಚ್‍ಡಿ ದೇವೇಗೌಡ, ಸಿದ್ದರಾಮಯ್ಯ, ಕುಮಾರಸ್ವಾಮಿ ಅವರು ಆ ಮಾತು ಹೇಳಿದರೆ ಮಾತ್ರ ನಡೆಯುತ್ತದೆ ಎಂದರು.
Advertisement
Advertisement
ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲ ಇಲ್ಲ. ಮತ್ತೆ ಚುನಾವಣೆ ಎದರುಸಬೇಕೆಂಬ ಹೊರಟ್ಟಿ ಅವರು ನೇರ ಚುನಾವಣೆ ಎದುರಿಸಿದರೆ ಅದರ ಸ್ಥಿತಿ ಗೊತ್ತಾಗುತ್ತದೆ. ಯಾವುದೇ ಕಾರಣಕ್ಕೂ ಅವರ ಮಾತು ನಡೆಯುವುದಿಲ್ಲ ಬಿಡಿ. ಸರ್ಕಾರ ಉತ್ತಮವಾಗಿ ಮುನ್ನಡೆಯುತ್ತದೆ. ಸಿದ್ದರಾಮಯ್ಯ ಅವರು ಸಿಎಂ ಆಗಬೇಕು ಎಂಬುವುದು ಶಾಸಕರ ವೈಯಕ್ತಿಕ ಅಭಿಪ್ರಾಯ. ಆದರೆ ಸಿಎಂ ಖಾಲಿ ಇಲ್ಲ, 5 ವರ್ಷ ಸರ್ಕಾರ ತನ್ನ ಅವಧಿಯನ್ನು ಪೂರ್ಣಗೊಳಿಸುತ್ತದೆ ವಿಶ್ವಾಸ ವ್ಯಕ್ತಪಡಿಸಿದರು.
Advertisement
ಶಾಸಕ ತನ್ವೀರ್ ಸೇಠ್ ಮಾತನಾಡಿ, ಒಂದು ವರ್ಷದಲ್ಲಿ ನಾವು ಮಾಡಬೇಕಾದ ಕೆಲಸ ಮಾಡಿಲ್ಲ. ಒಂದು ವರ್ಷದಲ್ಲಿ ಹಲವು ಚುನಾವಣೆ ಬಂದವು. ಬಿಜೆಪಿ ಶಾಸಕರ ಖರೀದಿಗೆ ಮುಂದಾಗಿತ್ತು. ಅಲ್ಲದೇ ಲೋಕಸಭಾ ಚುನಾವಣೆಯೂ ಬಂದಿತ್ತು. ಈ ಎಲ್ಲ ಕಾರಣದಿಂದಾಗಿ ನಾವು ಒಂದು ವರ್ಷದಲ್ಲಿ ಮಾಡಬೇಕಾದ ಕೆಲಸ ಪರಿಪೂರ್ಣ ಆಗಿಲ್ಲ. ಆದರೆ ಮುಂದಿನ ನಾಲ್ಕು ವರ್ಷ ನಾವು ಸಮರ್ಥವಾಗಿ ಆಡಳಿತ ಮಾಡುವ ವಿಶ್ವಾಸ ಇದೆ ಎಂದರು.