ಬೆಂಗಳೂರು: ಕೆ.ಆರ್ ಮಾರುಕಟ್ಟೆಯಲ್ಲಿ (KR Market) ನಡೆದಿದ್ದ ಸಾಮೂಹಿಕ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಉಡಾಫೆ ಉತ್ತರ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ದ ಜೆಡಿಎಸ್ (JDS) ಕಿಡಿಕಾರಿದೆ.
ಸಿದ್ದರಾಮಯ್ಯ ವಿರುದ್ದ ಎಕ್ಸ್‌ನಲ್ಲಿ ಕಿಡಿಕಾರಿರುವ ಜೆಡಿಎಸ್, ವಿಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ಟ್ಯಾಗ್ ಮಾಡಿ ವಾಗ್ದಾಳಿ ನಡೆಸಿದೆ. ಅಷ್ಟೇ ಅಲ್ಲದೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನಾಲಾಯಕ್ ಎಂದು ಲೇವಡಿ ಮಾಡಿದೆ. ಇದನ್ನೂ ಓದಿ: KUWSDB ಎಂಜಿನಿಯರ್‌ಗೆ ಉಪಲೋಕಾಯುಕ್ತ ತರಾಟೆ
Advertisement
Advertisement
ಜೆಡಿಎಸ್ ಟ್ವೀಟ್ ಏನು?
ಸಿದ್ದರಾಮಯ್ಯ ಅವರೇ ಅಧಿಕಾರ ಅನುಭವಿಸುವಾಗ ನಿಮಗೆ ಮರೆವಿನ ಕಾಯಿಲೆಯೇ? ಬೆಂಗಳೂರಿನ ಕೆ.ಆರ್.ಮಾರ್ಕೆಟ್‌ನಲ್ಲಿ ನಡೆದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಇಡೀ ರಾಜ್ಯವೇ ತಲೆ ತಗ್ಗಿಸುವ ಹೀನ ಕೃತ್ಯವಾಗಿದೆ. ಇದನ್ನೂ ಓದಿ: ಹೆಬ್ಬಾಳ್ಕರ್ ಕಾರನ್ನು ಬಟ್ಟೆ ಹಾಕಿ ಮುಚ್ಚಿದ್ದು ಯಾಕೆ? – ಮತ್ತೆ ಅನುಮಾನ ವ್ಯಕ್ತಪಡಿಸಿದ ಛಲವಾದಿ
Advertisement
ಇದನ್ನು ಪ್ರಶ್ನಿಸಿದರೇ ಹಿಂದಿನ ಸರ್ಕಾರಗಳ ಕಾಲದಲ್ಲಿ ರೇಪ್ ಆಗಿಲ್ವಾ ಎಂದು ಸಮರ್ಥಿಸಿಕೊಳ್ಳುವ ನೀವು ರಾಜ್ಯದ ಮುಖ್ಯಮಂತ್ರಿಯಾಗಿರಲು ನಾಲಾಯಕ್ ಸಿದ್ದರಾಮಯ್ಯ. ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿ ಸಭೆ – ರಾಮುಲುಗೆ ರಾಧಾಮೋಹನ್ ದಾಸ್ ಕ್ಲಾಸ್!
Advertisement
ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕೊಲೆ, ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇರುವುದು ರಾಜ್ಯದಲ್ಲಿ ಕುಸಿದುಬಿದ್ದಿರುವುದು ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಏಯ್ ಯತ್ನಾಳ್ ಎಲ್ಲವನ್ನ ತೆಗೀಬೇಕಾ? – ಜಿಟಿಡಿ ಖಡಕ್ ವಾರ್ನಿಂಗ್