ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಲೂ ಬಿಜೆಪಿ (BJP)ಯಿಂದ ಜೀವ ಬೆದರಿಕೆ ಇದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ (M Laxman) ನೇರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅದೇ ಕಾರಣಕ್ಕೆ ಅಶ್ವಥ್ ನಾರಾಯಣ್ (Ashwath Narayan) ವಿರುದ್ಧ ನೀಡಿದ್ದ ದೂರಿನ ಕ್ರಮಕ್ಕೆ ಒತ್ತಾಯಿಸುತ್ತಿದ್ದೇವೆ. ಉರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಿ ಎಂದಿದ್ದ ಅಶ್ವಥ್ ನಾರಾಯಣ್ ಹೇಳಿಕೆಯ ವೀಡಿಯೋ ಈಗಲೂ ವೈರಲ್ ಆಗುತ್ತಿದೆ. ಇದರಿಂದ ಸಿದ್ದರಾಮಯ್ಯರ ಮೇಲೆ ಮತ್ತೆ ದಾಳಿಯಾಗುವ ಸಾಧ್ಯತೆ ಇದೆ ಎಂದರು.
ಸಿಎಂ ಸಿದ್ದರಾಮಯ್ಯ (Siddaramaiah) ರಿಗೆ ಏನೇ ಆದರೂ ಅದಕ್ಕೆ ಬಿಜೆಪಿ, ಅಶ್ವಥ್ ನಾರಾಯಣ್ ಹೊಣೆ. ಈ ಕೂಡಲೇ ಅಶ್ವಥ್ ನಾರಾಯಣ್‍ರನ್ನ ಪೊಲೀಸರು ಬಂಧಿಸಬೇಕು. ನಾವು ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಈ ಬಗ್ಗೆ ಸ್ಪೀಕರ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಹಿಂದೆ ಬಿಜೆಪಿ ವಿರುದ್ಧ ನೀಡಿದ್ದ ದೂರಿನ ಕ್ರಮಕ್ಕೆ ಒತ್ತಾಯಿಸುತ್ತೇವೆ. ಹಿಂದೆ ಪೆÇಲೀಸರು ಬಿಜೆಪಿ ಏಜೆಂಟರಂತೆ ವರ್ತಿಸಿದ್ರು. ಹೀಗಾಗಿ ದೂರಿನ ಕ್ರಮ ಕೈಗೊಂಡಿರಲಿಲ್ಲ ಎಂದು ತಿಳಿಸಿದರು.
ಈಗ ಸಮಗ್ರವಾದ ತನಿಖೆಯಾಗಬೇಕು. ಅಶ್ವಥ್ ನಾರಾಯಣ್ ಯಾವ ಉದ್ದೇಶದಿಂದ ಈ ಹೇಳಿಕೆ ಕೊಟ್ಟಿದ್ರು ಎಂಬುದು ತಿಳಿಯಬೇಕಿದೆ. ಅವರ ಮೇಲೆ ಕಠಿಣ ಕ್ರಮವೂ ಆಗಬೇಕು ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಬಿಜೆಪಿ ಕಾರ್ಯಕರ್ತರು ಅಪಾಯದಲ್ಲಿದ್ದಾರೆ – ಪ್ರತಾಪ್ ಸಿಂಹ