ಸಿದ್ದರಾಮಯ್ಯ ಲಾಟರಿ ಸಿಎಂ, ಅವ್ರ ಕುರ್ಚಿ ಅಲುಗಾಡ್ತಿದೆ – ಜೆಡಿಎಸ್ ಲೇವಡಿ

Public TV
2 Min Read
Siddaramaiah 8

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಲಾಟರಿ ಸಿಎಂ, ಅವರ ಕುರ್ಚಿ ಅಲುಗಾಡುತ್ತಿದೆ ಎಂದು ಜೆಡಿಎಸ್ (JDS) ಲೇವಡಿ ಮಾಡಿದೆ.

ಈ ಕುರಿತು ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಲೇವಡಿ ಮಾಡಿದೆ. ಸಿದ್ದರಾಮಯ್ಯ ಲಾಟರಿ ಸಿಎಂ. ಪದೇ ಪದೇ ನಾನೇ ಸಿಎಂ ಎಂದು ಹೇಳುತ್ತಿರುವುದು ಅವರ ಕುರ್ಚಿ ಅಲುಗಾಡುತ್ತಿದೆ ಎಂದು ಸೂಚನೆ ನೀಡುತ್ತಿದ್ದಾರೆ ಎಂದು ಟೀಕಿಸಿದೆ.ಇದನ್ನೂ ಓದಿ:ಸೆಪ್ಟೆಂಬರ್ ಕ್ರಾಂತಿ ಆಗುತ್ತಾ ಗೊತ್ತಿಲ್ಲ, ಆದ್ರೆ ಕಾಂಗ್ರೆಸ್‌ನಲ್ಲಿ ರಾಜಕೀಯ ಬೆಳವಣಿಗೆ ಆಗ್ತಿದೆ: ನಿಖಿಲ್ ಕುಮಾರಸ್ವಾಮಿ

e

ಎಕ್ಸ್‌ನಲ್ಲಿ ಏನಿದೆ?
ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯನವರಿಗೆ ಬರಬಾರದಿತ್ತು. ನಾನೇ ಸಿಎಂ.. ನಾನೇ ಸಿಎಂ.. ಎಂದು ಮಾಧ್ಯಮಗಳ ಮುಂದೆ ಗಂಟಲು ಹರಿದುಕೊಳ್ಳುತ್ತಿರುವುದರ ಹಿಂದೆ ಸಿಎಂ ಕುರ್ಚಿ ಅಲುಗಾಡುತ್ತಿರುವುದನ್ನು ಸೂಚಿಸುತ್ತಿದೆ.

ನಾಯಕತ್ವ ಬದಲಾವಣೆ ಆಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ಇಕ್ಬಾಲ್ ಹುಸೇನ್, ಹೆಚ್.ಸಿ ಬಾಲಕೃಷ್ಣ, ರಂಗನಾಥ್, ರವಿ ಗಾಣಿಗ ಸೇರಿದಂತೆ ಹಲವರು ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ.

ಇನ್ನು ತಮ್ಮ ನಾಯಕನ ಕುರ್ಚಿಗೆ ಕುತ್ತು ಬಂದಿರುವುದು ಸ್ಪಷ್ಟವಾಗುತ್ತಲೇ ಸಿದ್ದರಾಮಯ್ಯ ಆಪ್ತರು ಸಹ ಕೂಗುಮಾರಿಗಳಂತೆ ಅವರ ಪರ ಬ್ಯಾಟ್ ಬೀಸುತ್ತಿದ್ದಾರೆ. ಲಾಟರಿ ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ನಿಮ್ಮ ನಾಯಕತ್ವದ ಬಗ್ಗೆ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೆಂಕಿ ಎದ್ದು, ಹಾದಿ ಬೀದಿಯಲ್ಲಿ ಹೊಗೆಯಾಡುತ್ತಿದೆ. ವಿಪಕ್ಷಗಳ ವಿರುದ್ಧ ಬೆಂಕಿಯುಗುಳಿದರೇ, ನಿಮ್ಮ ಹೊಟ್ಟೆ ಕಿಚ್ಚು ಮತ್ತಷ್ಟು ಉಲ್ಬಣಿಸುತ್ತದೆ ಹೊರತು ಉಪಶಮನವಾಗುವುದಿಲ್ಲ ಎಂದು ಕಿಡಿಕಾರಿದೆ.ಇದನ್ನೂ ಓದಿ: ಡಿಕೆಶಿ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ, ಅವ್ರ ಶ್ರಮಕ್ಕೆ ಫಲ ಸಿಗುತ್ತೆ: ಡಿಕೆ ಸುರೇಶ್‌

Share This Article