ಬೆಳಗಾವಿ: ಕಾಂಗ್ರೆಸ್‌ನಿಂದ ಬಂಡಾಯ ಎದ್ದು ಬಿಜೆಪಿ ಸೇರಿದಾಗಲೂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು ಎನ್ನುತ್ತಿದ್ದ ಶಾಸಕ ರಮೇಶ್ ಜಾರಕಿಹೊಳಿ ಅವರು, ಈಗ ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
ಗೋಕಾಕ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯ ಒಬ್ಬ ವೇಸ್ಟ್ ಬಾಡಿ. ಅವರಿಗೆ ಭಯ ಹುಟ್ಟಿದೆ. ಒಬ್ಬ ಹಿಂದುಳಿದ ನಾಯಕ ಪ್ರಮುಖನಾಗಿ ಹೊರಬರಬಹುದೆಂದು ಹೆದರಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಎಲ್ಲಿ ನಿಂತರೂ ಸೋಲುತ್ತಾರೆ. ಅವರ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಸುಧಾಕರ್ ನಮ್ಮ ಲೀಡರ್ ಅಲ್ಲ, ಮಂಡ್ಯದ ಬಗ್ಗೆ ಅವರಿಗೇನ್ ಮಾಹಿತಿ ಇದೆ?: ನಾರಾಯಣ ಗೌಡ
Advertisement
ನಮ್ಮ ಪಕ್ಷ ಸೋಲಬಾರದಿತ್ತು, ಸೋತಿದೆ. ಈ ಬಗ್ಗೆ ಗಂಭೀರವಾಗಿ ಚರ್ಚಿಸುತ್ತೇವೆ. ಕಳೆದ ಮೂರು ನಾಲ್ಕು ವರ್ಷದಲ್ಲಿ ಜಿಲ್ಲೆಯ ರಾಜಕೀಯ ಚಿತ್ರಣದಲ್ಲಿ ಭಾರಿ ಬದಲಾವಣೆಯಾಗಿದೆ. ಬಿಜೆಪಿ ಪಕ್ಷದ ಶಾಸಕನಾಗಿ ನಾನು ಬಿಜೆಪಿ ಪರವಾಗಿ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಸೋಲಿಸಲು ಹಠಕ್ಕೆ ಬಿದ್ದಿದ್ದೆ ನಿಜ. ಆದರೆ ಈಗ ಗೆದ್ದಿದೆ, ಏನು ಮಾಡಲು ಆಗುವುದಿಲ್ಲ. ಆಂತರಿಕ ಚರ್ಚೆ ಮಾಡಿ, ನಮ್ಮ ಅಭ್ಯರ್ಥಿ ಸೋಲಿಗೆ ಯಾರು ಕಾರಣ ಮತ್ತು ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ಮುಂದಿನ ದಿನ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
Advertisement
Advertisement
ಮಾಧ್ಯಮಗಳ ಎದುರು ಮಾತನಾಡಬೇಡಿ ಎಂದು ಸಂಘದ ಪ್ರಮುಖರು ಆದೇಶ ಹೊರಡಿಸಿದ್ದಾರೆ. ಹೀಗಾಗಿ ನಾನು ಹೆಚ್ಚಿಗೆ ಏನು ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಬಗ್ಗೆಯೂ ಕಠೋರವಾಗಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆ ಹೆಚ್‍ಡಿಕೆ ಹುಟ್ಟುಹಬ್ಬ- ಕಾರ್ಯಕರ್ತರಲ್ಲಿ ಮಾಜಿ ಸಿಎಂ ಮನವಿ