Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಾಯಿ ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೊಮ್ಮಾಯಿ ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆ: ಸಿದ್ದರಾಮಯ್ಯ

Bengaluru City

ಬೊಮ್ಮಾಯಿ ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆ: ಸಿದ್ದರಾಮಯ್ಯ

Public TV
Last updated: April 10, 2022 5:45 pm
Public TV
Share
2 Min Read
SIDDARAMAIHA AND BOMMAI
SHARE

ಬೆಂಗಳೂರು: ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ. ಬೊಮ್ಮಾಯಿ ಅವರು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ.

Basavaraj Bommai 1

ಟ್ವೀಟ್‍ನಲ್ಲಿ ಏನಿದೆ?
ಬಿಜೆಪಿ ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನಸುಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗೆ ತಿಳಿದಿಲ್ಲ. ಬೊಮ್ಮಾಯಿ ಅವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರವನ್ನೇ ಸಂಘ ಪರಿವಾರಕ್ಕೆ ಔಟ್ ಸೋರ್ಸ್ ಮಾಡಿ, ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ. ಮುಖ್ಯಮಂತ್ರಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಂ ವರ್ತಕರ ಮೇಲೆ ದೌರ್ಜನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಕೆಳಗಿಳಿಸುವ ತಾಕತ್ತು ನನಗಿದೆ: ಯತ್ನಾಳ್

SIDDARAMAIAH

ಭಾರತೀಯ ಜನತಾ ಪಕ್ಷ ಹೇಳಿಕೊಂಡು ಬರುತ್ತಿರುವ ರಾಮ ರಾಜ್ಯದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ? ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದದ್ದಲ್ಲ, ಅದು ಅವರು ಮಾರಾಟ ನಡೆಸುತ್ತಿದ್ದ ಕಲ್ಲಂಗಡಿ ಬೆಳೆಯುವ ರೈತರ ಮೇಲೆ ನಡೆದಿರುವ ದೌರ್ಜನ್ಯವೂ ಆಗಿದೆ. ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ. ಇದನ್ನೂ ಓದಿ: ಸ್ವಂತ ಮನೆಯನ್ನೇ ಸರಿಯಾಗಿ ಕಟ್ಟಿಕೊಳ್ಳಲಾಗ್ತಿಲ್ಲ: ರಾಗಾ ವಿರುದ್ಧ ಮಾಯಾವತಿ ವಾಗ್ದಾಳಿ

ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿಟಿ ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ. ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು. ಇದು ಬೊಮ್ಮಾಯಿ ಅವರೇ ಮಾಡಿರುವ ಪಾಪದ ಫಲ. ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ, ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ಧಕ್ಕೆ ದಾರಿಮಾಡಿಕೊಟ್ಟಿದೆ.

ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ.

ಮುಖ್ಯಮಂತ್ರಿ @BSBommai ಅವರು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ.
10/10#ArrestSanghiGoons

— Siddaramaiah (@siddaramaiah) April 10, 2022

ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಶಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದು ಕಳವಳಕಾರಿ ಬೆಳವಣಿಗೆ.

TAGGED:Basavaraj Bommaibjpcongresssiddaramaiahಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
19 minutes ago
Tourist Killed 6 Others Injured In Terrorist Attack In Jammu and Kashmir Pahalgam
Latest

ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Public TV
By Public TV
32 minutes ago
Shell Petrol Bunk
Bengaluru City

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ – ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ

Public TV
By Public TV
1 hour ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ, ಏನೇನು ಬದಲಾವಣೆ?

Public TV
By Public TV
1 hour ago
bengaluru mysuru expressway e1677512075362
Districts

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಇಂದಿನಿಂದ ಟೋಲ್‌ ದರ ಏರಿಕೆ; ಯಾವ ವಾಹನಕ್ಕೆ ಎಷ್ಟು?

Public TV
By Public TV
2 hours ago
Tumakuru Siddaganga Math Shivakumara Swamiji birth anniversary
Districts

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ – ಸಿದ್ದಗಂಗಾ ಮಠದಲ್ಲಿ ಕಳೆಗಟ್ಟಿದ ಸಂಭ್ರಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?