ಸಾವರ್ಕರ್‌ನಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ ನೆಹರು: ಸಿದ್ದರಾಮಯ್ಯ

Public TV
2 Min Read
Siddaramaiah

ಬೆಂಗಳೂರು: ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

neharu

ಟ್ವೀಟ್‌ನಲ್ಲಿ ಏನಿದೆ?
ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ? ಬೊಮ್ಮಾಯಿ ಅವರೇ ಪಂಡಿತ್ ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ. ಇದನ್ನೂ ಓದಿ: ಗಾಂಧೀಜಿ ಕಾಂಗ್ರೆಸ್ ಬೇರೆ, ಈಗಿನದು ಡುಪ್ಲಿಕೇಟ್ ಕಾಂಗ್ರೆಸ್: ಪ್ರಹ್ಲಾದ್‌ ಜೋಶಿ

BASAVARJ BOMMAI

ಆರ್‌ಎಸ್‌ಎಸ್‌ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರು ಅವರ ಬಗ್ಗೆ ಆರ್‌ಎಸ್‌ಎಸ್‌ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ ಬೊಮ್ಮಾಯಿ ಅವರೇ, ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ. ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ (1921 ಮತ್ತು 1931) ಜೈಲುಶಿಕ್ಷೆ ಅನುಭವಿಸಿದ್ದ ಆರ್‌ಎಸ್‌ಎಸ್‌ ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಚಿತ್ರವನ್ನು ಯಾಕೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ ಬೊಮ್ಮಾಯಿ ಅವರೇ? ಇದನ್ನೂ ಓದಿ: ಕಾಶ್ಮೀರದಲ್ಲಿ ಇನ್ನು ಭಾರತದ ಧ್ವಜ ಮಾತ್ರ ಹಾರುತ್ತದೆ, ಪಾಕ್ ಧ್ವಜ ಇತಿಹಾಸ ಮಾತ್ರ: ಮನೋಜ್ ಸಿನ್ಹಾ

ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ? ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ‘ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ’. ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ್ ನೆಹರು ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *