ಬೆಂಗಳೂರು: ಸಚಿವ ಉಮೇಶ್ ಕತ್ತಿಯವರೇ ಬಡವರ ಹೊಟ್ಟೆಗೆ ಹೊಡೆಯುವ ನಿಮ್ಮ ದುಷ್ಟತನದ ಕತ್ತಿಯನ್ನು ಒರೆಯಲ್ಲಿಟ್ಟುಬಿಡಿ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೆ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ. ಎಚ್ಚರ ಇರಲಿ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.
Advertisement
ಟ್ವೀಟ್‍ನಲ್ಲಿ ಏನಿದೆ?
ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಲೇ ಇದ್ದ ಬಿಜೆಪಿ ನಾಯಕರು ಈ ಯೋಜನೆ ನಿಲ್ಲಿಸಲು ನೆಪಗಳನ್ನು ಹುಡುಕುತ್ತಿರುತ್ತಾರೆ. ರಾಜ್ಯದ ಆಹಾರ ಸಚಿವ ಉಮೇಶ್ ಕತ್ತಿ ಅವರಿಗೆ ಅಂತಹದ್ದೊಂದು ನೆಪ ಸುಪ್ರೀಂ ಕೋರ್ಟ್‍ನ ಆದೇಶದಲ್ಲಿ ಸಿಕ್ಕಿದ್ದಕ್ಕೆ ಸಂತಸ ಪಟ್ಟಿದ್ದಾರೆ. 2,65,000 ಕೋಟಿ ರೂ. ಗಾತ್ರದ ಬಜೆಟ್ ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವ ಹಣ 2,800 ಕೋಟಿ ರೂ. ಮಾತ್ರ. ಇಷ್ಟು ಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ ಬಿಜೆಪಿ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು? ಇದನ್ನೂ ಓದಿ: ವಾಯುವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್ ಪಾಟೀಲ್‍ರನ್ನು ಕಿತ್ತುಹಾಕಿದ ಸರ್ಕಾರ
Advertisement
Advertisement
ಅಭಿವೃದ್ದಿ ಚಟುವಟಿಕೆಗಳು ಸ್ಥಗಿತಗೊಂಡು, ಕಲ್ಯಾಣ ಕಾರ್ಯಕ್ರಮಗಳು ದುಡ್ಡಿಲ್ಲದೆ ನೆನೆಗುದಿಗೆ ಬೀಳಲು ಕಾರಣ ಬಿಜೆಪಿ ಸರ್ಕಾರದ ಕಮಿಷನ್ ದಾಹ. 40% ಕಮಿಷನ್ ಈಗ 50%ಗೆ ಏರಿದೆಯಂತೆ. ಉಮೇಶ್ ಕತ್ತಿಯಂತಹ ಬೇಜವಾಬ್ದಾರಿ ಸಚಿವರು ಅನ್ನಭಾಗ್ಯ ಯೋಜನೆ ನಿಲ್ಲಿಸಲು ಹೊರಟಿದ್ದಾರೆ. ಸಚಿವ ಉಮೇಶ್ ಕತ್ತಿಯವರೇ ಬಡವರ ಹೊಟ್ಟೆಗೆ ಹೊಡೆಯುವ ನಿಮ್ಮ ದುಷ್ಟತನದ ಕತ್ತಿಯನ್ನು ಒರೆಯಲ್ಲಿಟ್ಟುಬಿಡಿ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೆ, ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ ಎಚ್ಚರ ಇರಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಖಂಡರು ಮನೆಯಲ್ಲಿ ಡ್ರಾಫ್ಟ್ ರೆಡಿ ಮಾಡಿ, ಮೋದಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ: ರೇಣುಕಾಚಾರ್ಯ